Homeಮುಖಪುಟಮಣಿಪುರ ಹಿಂಸಾಚಾರ: ಸಿಬಿಐ ಅಡಿಯಲ್ಲಿನ ಪ್ರಕರಣಗಳ ವಿಚಾರಣೆ ಅಸ್ಸಾಂ ಹೈಕೋರ್ಟ್​ಗೆ ವರ್ಗಾಯಿಸಿದ ಸುಪ್ರೀಂ

ಮಣಿಪುರ ಹಿಂಸಾಚಾರ: ಸಿಬಿಐ ಅಡಿಯಲ್ಲಿನ ಪ್ರಕರಣಗಳ ವಿಚಾರಣೆ ಅಸ್ಸಾಂ ಹೈಕೋರ್ಟ್​ಗೆ ವರ್ಗಾಯಿಸಿದ ಸುಪ್ರೀಂ

- Advertisement -
- Advertisement -

”ಮಣಿಪುರದ ನಡೆದ ಹಿಂಸಾಚಾರದಿಂದ ಕಣಿವೆ ಮತ್ತು ಬೆಟ್ಟಗಳಲ್ಲಿರುವ ಜನಾಂಗಗಳು ಸಂತ್ರಸ್ತರಿದ್ದಾರೆ. ಅವರಲ್ಲಿ ಯಾರು ಹೆಚ್ಚು ಸಾವು ನೋವು ಅನುಭವಿಸಿದ್ದಾರೆಂದು ನಾವು ಹೇಳಲಾಗುವುದಿಲ್ಲ, ಎರಡೂ ಸಮುದಾಯದವರು ಬಲಿಪಶುಗಳಿದ್ದಾರೆ” ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.

ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಬಿಐ ತನಿಖೆ ನಡೆಸುತ್ತಿರುವ ಎಲ್ಲ ಪ್ರಕರಣಗಳ ವಿಚಾರಣೆಯನ್ನು ಅಸ್ಸಾಂ ಹೈಕೋರ್ಟ್​ಗೆ ವರ್ಗಾಯಿಸಲಾಗಿದೆ ಎಂದು ಸುಪ್ರೀಂ ಕೋರ್ಟ್​​ ಇಂದು (ಆ.25) ಆದೇಶವನ್ನು ನೀಡಿದೆ.

ಈ ಪ್ರಕರಣಗಳನ್ನು ವ್ಯವಹರಿಸಲು ಒಬ್ಬರು ಅಥವಾ ಹೆಚ್ಚಿನ ನ್ಯಾಯಾಂಗ ಅಧಿಕಾರಿಗಳನ್ನು ನಾಮನಿರ್ದೇಶನ ಮಾಡುವಂತೆ ಗುವಾಹಾಟಿ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರನ್ನು ಸುಪ್ರೀಂ ಕೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಮಣಿಪುರ ಹಿಂಸಾಚಾರದ ಅರ್ಜಿಯನ್ನು ವಿಚಾರಣೆ ನಡೆಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸದಂತೆ ಹಲವು ನಿರ್ದೇಶನಗಳನ್ನು ನೀಡಿದೆ. ಜತೆಗೆ ಆರೋಪಿಗಳನ್ನು ಕೋರ್ಟ್​​ಗೆ ಹಾಜರುಪಡಿಸುವ ಪ್ರಕ್ರಿಯೆ, ಬಂಧನ, ನ್ಯಾಯಾಂಗ ಬಂಧನ ಮತ್ತು ಅದರ ವಿಸ್ತರಣೆಗೆ ಸಂಬಂಧಿಸಿದ ನ್ಯಾಯಾಂಗ ಕಾರ್ಯವಿಧಾನಗಳನ್ನು ಗುವಾಹಾಟಿ ಹೈಕೋರ್ಟ್​​​ ಆನ್‌ಲೈನ್‌ ಮೂಲಕ ನಡೆಸಲಿದೆ ಎಂದು ಹೇಳಿದೆ.

ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಈಗಾಗಲೇ  ನ್ಯಾಯಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ಅವರನ್ನು ವಿಚಾರಣೆಗೆ ಮಣಿಪುರದಿಂದ ಗೌಹಾಟಿಯ ಹೈಕೋರ್ಟ್​ಗೆ ಕರೆದುಕೊಂಡ ಬರಲು ಸಾಧ್ಯವಾಗದಿದ್ದರೆ, ಆನ್​​ಲೈನ್​​ ಮೂಲಕವೇ ಅವರನ್ನು ನ್ಯಾಯಧೀಶರ​ ಮುಂದೆ ಹಾಜರು ಪಡಿಸಬಹುದು ಎಂದು ಹೇಳಿದೆ. ಒಂದು ವೇಳೆ ನೆಟ್​​ವರ್ಕ್​​​ ಸಮಸ್ಯೆ ಅಥವಾ ತಾಂತ್ರಿಕ ದೋಷಗಳಿಂದ ಆನ್​​​ಲೈನ್​ನಲ್ಲಿ ಹಾಜರುಪಡಿಸಲು ಸಾಧ್ಯವಾಗದಿದ್ದಾರೆ ಅಥವಾ ಅವರನ್ನು ಕೋರ್ಟ್​ ಮುಂದೆ ಕರೆದುಕೊಂಡು ಬರುವುದು ಅನಿವಾರ್ಯ ಇದೆ ಎಂದು ಕಂಡು ಬಂದರೆ ಮಾತ್ರ ಅವರನ್ನು ನ್ಯಾಯಲಯದ ಮುಂದೆ ಕರೆದುಕೊಂಡು ಬರಲು ಅನುಮತಿ ನೀಡಲಾಗಿದೆ.

ಗುವಾಹಾಟಿ ನ್ಯಾಯಾಲಯದಲ್ಲಿ ಆನ್‌ಲೈನ್ ಮೋಡ್ ಮೂಲಕ ಸಿಬಿಐ ಪ್ರಕರಣಗಳ ವಿಚಾರಣೆಗೆ ಅನುಕೂಲವಾಗುವಂತೆ ಸರಿಯಾದ ಇಂಟರ್ನೆಟ್ ಸೇವೆಗಳನ್ನು ಒದಗಿಸುವಂತೆ ಮಣಿಪುರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮಣಿಪುರದಿಂದ ವೀಡಿಯೊ ಕಾನ್ಫರೆನ್ಸಿಂಗ್ ಇತ್ಯಾದಿಗಳಿಗೆ ಸರಿಯಾದ ಇಂಟರ್ನೆಟ್ ಸೌಲಭ್ಯಗಳನ್ನು ಒದಗಿಸಲಾಗುತ್ತದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ. ಗುವಾಹಟಿಯಲ್ಲಿ ಖುದ್ದು ಹಾಜರಾಗಲು ಬಯಸುವವರಿಗೆ ಅದರ ನಿರ್ದೇಶನಗಳು ಅಡ್ಡಿಯಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಆಗಸ್ಟ್ 21ರಂದು, ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ಸಂತ್ರಸ್ತರ ಪರಿಹಾರ ಮತ್ತು ಪುನರ್ವಸತಿ ಮೇಲ್ವಿಚಾರಣೆಗೆ ನ್ಯಾಯಮೂರ್ತಿ ಗೀತಾ ಮಿತ್ತಲ್ ಸಮಿತಿಯನ್ನು ಸುಪ್ರೀಂ ಕೋರ್ಟ್ ನೇಮಿಸಿತ್ತು. ಇದರ ಜತೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಇಬ್ಬರು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ ಸೇರಿದಂತೆ 10ಕ್ಕೂ ಹೆಚ್ಚು ಪ್ರಕರಣಗಳನ್ನು ಸಿಬಿಐಗೆ ವರ್ಗಾಯಿಸಲಾಗಿದೆ.

ಈ ಜನಾಂಗೀಯ ಹಿಂಸಾಚಾರದಿಂದ ಹಲವಾರು ಮಣಿಪುರ ನಿವಾಸಿಗಳು ತಮ್ಮ ಗುರುತಿನ ದಾಖಲೆಗಳನ್ನು ಕಳೆದುಕೊಂಡಿರುವುದನ್ನು ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಗಮನಿಸಿದ್ದು, ಈಗಾಗಲೇ ಸುಪ್ರೀಂ ನೇಮಿಸಿದ ಸಮಿತಿಯು ಆಧಾರ್ ಕಾರ್ಡ್‌ ಮತ್ತು ಇತರ ದಾಖಲೆಗಳನ್ನು ತಕ್ಷಣದಿಂದಲೇ ನೀಡಲು ರಾಜ್ಯ ಸರ್ಕಾರ ಮತ್ತು ಯುಐಡಿಎಐ ಸೇರಿದಂತೆ ಇತರರಿಗೆ ಇಲಾಖೆ ನಿರ್ದೇಶನ ರವಾನಿಸುವಂತೆ ಸುಪ್ರೀಂ ಕೋರ್ಟ್‌ಗೆ ಹೇಳಿದೆ.

ಪ್ರಸ್ತುತ ಹಂತದಲ್ಲಿ, ಮಣಿಪುರದ ಒಟ್ಟಾರೆ ಪರಿಸರವನ್ನು ಗಮನದಲ್ಲಿಟ್ಟುಕೊಂಡು ಮತ್ತು ಕ್ರಿಮಿನಲ್ ಪ್ರಕರಣಗಳ ವಿಚಾರಣೆಯನ್ನು ನಡೆಸಲು ಒಬ್ಬರು ಅಥವಾ ಹೆಚ್ಚಿನ ನ್ಯಾಯಾಂಗ ಅಧಿಕಾರಿಗಳನ್ನು ನಾಮನಿರ್ದೇಶನ ಮಾಡುವಂತೆ ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನು ಸುಪ್ರೀಂ ಕೋರ್ಟ್ ಕೋರಿದೆ.

ಮಣಿಪುರದಲ್ಲಿ ಮಾತನಾಡುವ ಒಂದು ಅಥವಾ ಹೆಚ್ಚು ಭಾಷೆಗಳನ್ನು ತಿಳಿದಿರುವ ನ್ಯಾಯಾಧೀಶರನ್ನು ನಾಮನಿರ್ದೇಶನ ಮಾಡುವಂತೆ ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಿಗೆ ನಿರ್ದೇಶನ ನೀಡಲಾಗಿದೆ.

ಇದನ್ನೂ ಓದಿ: ಮಣಿಪುರ ರಾಜ್ಯಪಾಲರನ್ನು ಭೇಟಿ ಮಾಡಿದ ಸಿಪಿಐ(ಎಂ) ನಿಯೋಗ: ಪರಿಹಾರ ಶಿಬಿರಗಳಲ್ಲಿನ ಭೀಕರ ಪರಿಸ್ಥಿತಿ ಕುರಿತು ಚರ್ಚೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...