Homeಮುಖಪುಟಪಂಜಾಬ್‌ನಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುತ್ತೇವೆ ಎನ್ನುವ ರಾಜ್ಯಪಾಲರು, ಮಣಿಪುರ-ಹರಿಯಾಣ ವಿಚಾರದಲ್ಲಿ ಮೌನ ಯಾಕೆ?: ಭಗವಂತ್ ಮಾನ್

ಪಂಜಾಬ್‌ನಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುತ್ತೇವೆ ಎನ್ನುವ ರಾಜ್ಯಪಾಲರು, ಮಣಿಪುರ-ಹರಿಯಾಣ ವಿಚಾರದಲ್ಲಿ ಮೌನ ಯಾಕೆ?: ಭಗವಂತ್ ಮಾನ್

- Advertisement -
- Advertisement -

ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಬೆದರಿಕೆ ಹಾಕುತ್ತಿದ್ದಾರೆ. ಆದರೆ ಮಣಿಪುರ ಮತ್ತು ಹರಿಯಾಣದಲ್ಲಿ ಅವರ ಸಹವರ್ತಿಗಳು ಅಲ್ಲಿನ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಮೌನ ವಹಿಸುತ್ತಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಶನಿವಾರ ಹೇಳಿದ್ದಾರೆ.

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡುವುದಾಗಿ ಮತ್ತು ತಮ್ಮ ಪತ್ರಗಳಿಗೆ ಉತ್ತರಿಸದಿದ್ದರೆ ಕ್ರಿಮಿನಲ್ ಮೊಕದ್ದಮೆ ಹೂಡಬೇಕಾಗುತ್ತದೆ ಎಂದು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ಶುಕ್ರವಾರ ಭಗವಂತ್ ಮಾನ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು.

ಪುರೋಹಿತ್ ತಮ್ಮ ಅಧಿಕಾರದ ವ್ಯಾಪ್ತಿಯ ಹೊರತಾದ ಏಳು ಪತ್ರಗಳಿಗೆ ನಾನು ಪ್ರತಿಕ್ರಿಯಿಸಲಿಲ್ಲ, ಇನ್ನುಳಿದ ಎಲ್ಲದಕ್ಕೂ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ ಎಂದು ಮಾನ್ ಹೇಳಿದ್ದಾರೆ.

“ರಾಜ್ಯಪಾಲರು ಪಂಜಾಬ್‌ನ ಶಾಂತಿಪ್ರಿಯ ಜನರ ಮೇಲೆ ರಾಷ್ಟ್ರಪತಿ ಆಳ್ವಿಕೆ ಹೇರುತ್ತೇನೆ ಎನ್ನುವುದನ್ನು ನಾನು ಬೆದರಿಕೆ” ಎಂದು ಕರೆಯುತ್ತೇನೆ.

”ಅವರು 356ನೇ ವಿಧಿಯನ್ನು ಶಿಫಾರಸು ಮಾಡುತ್ತೇನೆ ಮತ್ತು ರಾಜ್ಯಪಾಲರ ಆಳ್ವಿಕೆಯನ್ನು ಶಿಫಾರಸು ಮಾಡುತ್ತೇನೆ ಎಂದು ಹೇಳಿದ್ದಾರೆ” ಎಂದು ಮಾನ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಶಿಕ್ಷಕಿ ಒತ್ತಾಯಿಸಿರುವುದು ‘ದ್ವೇಷದ ಸಂಸ್ಕೃತಿ’: ಪ್ರತಿಪಕ್ಷಗಳಿಂದ ವಾಗ್ದಾಳಿ

”ರಾಜ್ಯಪಾಲರು ನಮಗೆ 16 ಪತ್ರಗಳನ್ನು ಬರೆದಿದ್ದಾರೆ. ಅವುಗಳಲ್ಲಿ ಒಂಬತ್ತು ಪತ್ರಗಳಿಗೆ ಪ್ರತಿಕ್ರಿಯಿಸಲಾಗಿದೆ ಮತ್ತು ಉಳಿದವುಗಳಿಗೂ ವಿವರವಾದ ಉತ್ತರ ನೀಡುತ್ತೇವೆ. ರಾಜ್ಯಪಾಲರು ಆತುರದಿಂದ ಪತ್ರ ಬರೆದು ತಕ್ಷಣ ಉತ್ತರ ನಿರೀಕ್ಷಿಸುವುದು ಬೇಡ” ಎಂದರು.

”ನಮ್ಮ ಸರ್ಕಾರವು ಡ್ರಗ್ಸ್ ಹಾವಳಿಯನ್ನು ನಿಭಾಯಿಸಲು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ, ಕಳ್ಳಸಾಗಣೆದಾರರ ಆಸ್ತಿಗಳನ್ನು ವಶಪಡಿಸಿಕೊಳ್ಳುವುದು, ದಾಳಿ ಮಾಡುವುದು ಮತ್ತು ದರೋಡೆಕೋರರ ವಿರುದ್ಧದ ಕಾರ್ಯಪಡೆಯ ರಚನೆಯೊಂದಿಗೆ ದರೋಡೆಕೋರರ ಹಿಂದೆ ಹೋಗುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿಲ್ಲ ಎಂದು ರಾಜ್ಯಪಾಲರು ಆರೋಪಿಸುವುದು ಸರಿಯಲ್ಲ” ಎಂದು ಮಾನ್ ಹೇಳಿದ್ದಾರೆ.

“ನಾನು ಗವರ್ನರ್ ಸಾಹಬ್ ಅವರನ್ನು ಕೇಳಲು ಬಯಸುತ್ತೇನೆ, ನುಹ್ ನಲ್ಲಿ ಏನಾಯಿತು? ಅಲ್ಲಿ ನಡೆದ ಕೋಮು ಘರ್ಷಣೆಗಳು, ಹಿಂಸಾಚಾರ ಮತ್ತು ಕರ್ಫ್ಯೂ ವಿಧಿಸಬೇಕಾದ ಬಗ್ಗೆ ಹರಿಯಾಣ ಮುಖ್ಯಮಂತ್ರಿ ಖಟ್ಟರ್ ಅವರಿಗೆ ಹರಿಯಾಣ ರಾಜ್ಯಪಾಲರು ನೋಟಿಸ್ ನೀಡಿದ್ದಾರೆಯೇ? ಹರಿಯಾಣ ರಾಜ್ಯಪಾಲರು ಖಟ್ಟರ್‌ಗೆ ಯಾವುದಾದರೂ ಪತ್ರ ಬರೆದಿದ್ದಾರೆಯೇ? ಇಲ್ಲ, ಏಕೆಂದರೆ ಕೇಂದ್ರದಲ್ಲಿ ಅವರದೇ ಸರ್ಕಾರ ಆಡಳಿತ ನಡೆಸುತ್ತಿದೆ” ಎಂದು ಅವರು ಹೇಳಿದರು.

”ನಮ್ಮ ರಾಜ್ಯಪಾಲರು ಪಂಜಾಬ್‌ನಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಕಾಳಜಿವಹಿಸಿದ್ದಾರೆ, ಆದರೆ ಜನಾಂಗೀಯ ಹಿಂಸಾಚಾರದಿಂದ ಕೂಡಿದ ಮಣಿಪುರದ ಬಗ್ಗೆ ಎಂದಿಗೂ ಹೇಳಿಕೆ ನೀಡಲಿಲ್ಲ. ಮಣಿಪುರದಲ್ಲಿ ಸಂವಿಧಾನವು ಅನ್ವಯಿಸುವುದಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

”ಉತ್ತರ ಪ್ರದೇಶದಲ್ಲಿ ಪತ್ರಕರ್ತರ ಮುಂದೆಯೇ ಕೊಲೆ ನಡೆಯುತ್ತದೆ, ಅಲ್ಲಿಯ ರಾಜ್ಯಪಾಲರು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಪ್ರಶ್ನಿಸುವ ಯಾವುದೇ ಪತ್ರವನ್ನು ನೀಡಲು ಧೈರ್ಯ ಮಾಡುತ್ತಾರೆಯೇ? ಎಂದು ಸಿಎಂ ಪ್ರಶ್ನಿಸಿದ್ದಾರೆ.

ಪಂಜಾಬ್, ದೆಹಲಿ, ಕರ್ನಾಟಕ, ಕೇರಳ, ತಮಿಳುನಾಡು ಮತ್ತು ತೆಲಂಗಾಣ ಹೊರತುಪಡಿಸಿ ಹೆಚ್ಚಿನ ಜನರಿಗೆ ಬೇರೆ ರಾಜ್ಯಪಾಲರ ಹೆಸರುಗಳು ತಿಳಿದಿರುವುದಿಲ್ಲ. ಆ ಆರು ರಾಜ್ಯದ ರಾಜ್ಯಪಾಲರ ಹೆಸರು ತಿಳಿದಿರಲು ಕಾರಣ ಅಲ್ಲಿ ಬಿಜೆಪಿಯೇತರ ಸರ್ಕಾರಗಳು ಅಧಿಕಾರದಲ್ಲಿರುತ್ತದೆ” ಎಂದು ಮಾನ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...