Homeಮುಖಪುಟಮುಸ್ಲಿಂ ವಿದ್ಯಾರ್ಥಿಗೆ ಹಿಂದೂ ವಿದ್ಯಾರ್ಥಿಗಳಿಂದ ಕಪಾಳಮೋಕ್ಷ ಮಾಡಿಸಿದ ಯುಪಿ ಶಿಕ್ಷಕಿ ವಿರುದ್ಧ FIR ದಾಖಲು

ಮುಸ್ಲಿಂ ವಿದ್ಯಾರ್ಥಿಗೆ ಹಿಂದೂ ವಿದ್ಯಾರ್ಥಿಗಳಿಂದ ಕಪಾಳಮೋಕ್ಷ ಮಾಡಿಸಿದ ಯುಪಿ ಶಿಕ್ಷಕಿ ವಿರುದ್ಧ FIR ದಾಖಲು

- Advertisement -
- Advertisement -

ಏಳು ವರ್ಷದ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಶಿಕ್ಷಕಿಯೊಬ್ಬರು ಇನ್ನುಳಿದ ವಿದ್ಯಾರ್ಥಿಗಳಿಗೆ ಆದೇಶಿಸಿದ ಭಯಾನಕ ವಿಡಿಯೋವೊಂದು ಶುಕ್ರವಾರ ವೈರಲ್ ಆಗಿದೆ. ಇದೀಗ ಆ ಖಾಸಗಿ ಶಾಲೆಯ ಶಿಕ್ಷಕಿಯ ವಿರುದ್ಧ ಗುರುತಿಸಲಾಗದ ಆರೋಪದಡಿ ಎಫ್‌ಐಆರ್ ದಾಖಲಿಸಲಾಗಿದೆ. ಆದರೆ ಇಂತಹ ಪ್ರಕರಣದಲ್ಲಿ ಪೊಲೀಸರು ವಾರಂಟ್ ಇಲ್ಲದೆ ಆರೋಪಿಯನ್ನು ಬಂಧಿಸುವಂತಿಲ್ಲ. ತನಿಖೆ ಆರಂಭಿಸಲು ಪೊಲೀಸರಿಗೆ ನ್ಯಾಯಾಲಯದ ಅನುಮತಿ ಬೇಕಾಗುತ್ತದೆ.

ಆ ಮಗುವಿನ ಪೋಷಕರು ಪ್ರಕರಣವನ್ನು ಮುಂದುವರಿಸಲು ನಿರಾಕರಿಸಿದ ಒಂದು ದಿನದ ನಂತರ ಅಂದರೆ ಶನಿವಾರ ದೂರು ನೀಡಿದ್ದು, ಅದರ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಶಿಕ್ಷಕಿ ತ್ರಿಪ್ತಾ ತ್ಯಾಗಿ ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡಿದ ಶಿಕ್ಷೆ) ಮತ್ತು 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಘಟನೆ ಗುರುವಾರ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಖುಬಾಪುರ ಗ್ರಾಮದ ನೇಹಾ ಪಬ್ಲಿಕ್ ಸ್ಕೂಲ್‌ನಲ್ಲಿ ಈ ಘಟನೆ ನಡೆದಿದೆ. ನಡೆದಿದೆ ಆದರೆ ಘಟನೆಯ ವಿಡಿಯೋ ಶುಕ್ರವಾರ ವೈರಲ್ ಆಗಿದೆ. ವಿಡಿಯೋದಲ್ಲಿ, ತರಗತಿಯ ಮುಂದೆ ನಿಂತಿದ್ದ ಮುಸ್ಲಿಂ ಹುಡುಗನನ್ನು ಒಬ್ಬ ವಿದ್ಯಾರ್ಥಿ ಹೊಡೆದ ನಂತರ, ಶಿಕ್ಷಕರು ಇತರ ವಿದ್ಯಾರ್ಥಿಗಳಿಗೂ ಬಲವಾಗಿ ಹೊಡೆಯುವಂತೆ ಒತ್ತಾಯಿಸುವುದನ್ನು ಕಾಣಬಹುದು.

ಒಬ್ಬ ವಿದ್ಯಾರ್ಥಿ ಆತನ ಕಪಾಳಕ್ಕೆ ಹೊಡೆದ ನಂತರ, ಶಿಕ್ಷಕಿಯು ಇನ್ನೊಬ್ಬ ವಿದ್ಯಾರ್ಥಿಯನ್ನು ಕರೆದು, ”ನಾನು ಹೇಳುತ್ತಿದ್ದೇನೆ, ಈ ಮುಸ್ಲಿಂ ವಿದ್ಯಾರ್ಥಿಯ ಬೆನ್ನಿನ ಮೇಲೆ ಹೊಡೆಯಬೇಕು… ಮತ್ತೆ ಬೇರೆ ವಿಧ್ಯಾರ್ಥಿಗಳನ್ನು ಕರೆದು, ಅವನ ಸೊಂಟದ ಮೇಲೆ ಹೊಡೆಯಲು ಪ್ರಾರಂಭಿಸಿ… ಅವನ ಮುಖವು ಕೆಂಪಾಗುತ್ತಿದೆ, ಅವನ ಸೊಂಟದ ಮೇಲೆ ಎಲ್ಲರೂ ಹೊಡೆಯಿರಿ” ಎಂದು ಆದೇಶಿಸಿದ್ದಾರೆ.

ಮಗು ಖುಬಾಪುರ ಗ್ರಾಮದ ನೇಹಾ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಶುವಿಹಾರದಲ್ಲಿ ಓದುತ್ತಿದೆ ಎಂದು ಆತನ ಪೋಷಕರು ತಿಳಿಸಿದ್ದಾರೆ. ಮಗುವಿನ ತಂದೆ ಹೆಸರು ಇರ್ಷಾದ್ ತ್ಯಾಗಿ, ಅವರು ವೃತ್ತಿಯಲ್ಲಿ ರೈತರಾಗಿದ್ದಾರೆ. ಇನ್ನು ಶಿಕ್ಷಕಿಯನ್ನು ತ್ರಿಪ್ತಾ ತ್ಯಾಗಿ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ವಿದ್ಯಾರ್ಥಿಗಳಿಗೆ ಒತ್ತಾಯಿಸಿದ ಯುಪಿ ಶಿಕ್ಷಕಿ: ವಿಡಿಯೋ ವೈರಲ್ 

ಪ್ರತಿಪಕ್ಷಗಳಿಂದ ಖಂಡನೆ:

”ದ್ವೇಷದ ಸಂಸ್ಕೃತಿ: ನೇಹಾ ಪಬ್ಲಿಕ್ ಸ್ಕೂಲ್‌ನ ತ್ರಿಪ್ತ ತ್ಯಾಗಿ ಎನ್ನುವ ಶಿಕ್ಷಕಿ ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿಯನ್ನು ಹಿಂದೂ ವಿದ್ಯಾರ್ಥಿಗಳಿಂದ ಥಳಿಸಲು ಒತ್ತಾಯಿಸಸಿದ್ದಾರೆ. ಇದು ನಿಜವಾಗಿದ್ದರೆ, ಯೋಗಿ ಜೀ ಮಾತನಾಡುತ್ತಾರೆಯೇ? ಮೋದಿಜಿ ಇದನ್ನು ಸಾರ್ವಜನಿಕವಾಗಿ ಖಂಡಿಸುವರೇ?
ಶಿಕ್ಷಕರ ವಿರುದ್ಧ ಕಾನೂನು ಕ್ರಮ ಜರುಗಿಸುವುದೇ? ಅಥವಾ “ದ್ವೇಷ”ದ ಸಂಸ್ಕೃತಿಯು ಪ್ರವರ್ಧಮಾನಕ್ಕೆ ಬರಲು ಬಿಡುವುದೇ? ಎಂದು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ.

ಶಾಲಾ ಆಡಳಿತಮಂಡಳಿಯು ಕುಟುಂಬದೊಂದಿಗೆ ಮಾತುಕತೆ ನಡೆಸಿ ಪ್ರಕರಣವನ್ನು ಇತ್ಯರ್ಥಗೊಳಿಸಿದ್ದರಿಂದ  ದೂರು ನೀಡುವುದಿಲ್ಲ ಎಂದು ಮಗುವಿನ ತಂದೆ ಶುಕ್ರವಾರ ಹೇಳಿದ್ದರು.

ಆ ಬಳಿಕ ಮಗುವಿನ ತಂದೆ, ”ನಾನು ನನ್ನ ಮಗುವನ್ನು ಮತ್ತೆ ಆ ಶಾಲೆಗೆ ಕಳುಹಿಸುವುದಿಲ್ಲ ಮತ್ತು ಅವರು ನಾನು ನೀಡಿದ ಶುಲ್ಕವನ್ನು ಹಿಂದಿರುಗಿಸುತ್ತಾರೆ. ಶಿಕ್ಷಕರು ಮಕ್ಕಳ ನಡುವೆ ದ್ವೇಷವನ್ನು ಸೃಷ್ಟಿಸಿದ್ದಾರೆ” ಎಂದು ಹೇಳಿದ್ದಾರೆ.

ಶನಿವಾರ ಮುಜರಾಯಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅರವಿಂದ ಮಲ್ಲಪ್ಪ ಬಂಗಾರಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ”ಪೋಷಕರು ದೂರು ದಾಖಲಿಸಿದ್ದು, ಅದರ ಆಧಾರದ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ಮಕ್ಕಳ ಕಲ್ಯಾಣ ಸಮಿತಿಯು ಮಗು ಮತ್ತು ಆತನ ಪೋಷಕರಿಗೆ ಕೌನ್ಸೆಲಿಂಗ್ ಮಾಡುತ್ತಿದೆ” ಎಂದು ಹೇಳಿದರು.

ತ್ಯಾಗಿ ತನ್ನ ತರಗತಿಯ ವಿದ್ಯಾರ್ಥಿಗಳನ್ನು ತಮ್ಮ ಮುಸ್ಲಿಂ ಸಹಪಾಠಿಯ ವಿರುದ್ಧ ಹೊಡೆಯುವಂತೆ ಪ್ರೇರೇಪಿಸಿರುವುದು ವಿಡಿಯೋದ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಶುಕ್ರವಾರ ಹೇಳಿದ್ದಾರೆ.

‘ಸಣ್ಣ ಸಮಸ್ಯೆ’ ಉತ್ಪ್ರೇಕ್ಷೆಯಾಗಿದೆ ಎಂದ ಶಿಕ್ಷಕರು

ಶಿಕ್ಷಕಿ, ತ್ರಿಪ್ತಾ ತ್ಯಾಗಿ ಅವರು ವೀಡಿಯೊ ವೈರಲ್ ಆದ ಬಳಿಕ ಇದು “ಸಣ್ಣ ಸಮಸ್ಯೆ” ಅದೇ ಉತ್ಪ್ರೇಕ್ಷಿತವಾಗಿದೆ ಎಂದು ಹೇಳಿದ್ದಾರೆ.

ತಮ್ಮ ಕ್ರಮವು ಕೋಮುವಾದಿ ಎನ್ನುವುದನ್ನು ಶಿಕ್ಷಕಿ ನಿರಾಕರಿಸಿದ್ದಾರೆ ಮತ್ತು ವೀಡಿಯೊವನ್ನು ತಪ್ಪುದಾರಿಗೆಳೆಯುವ ರೀತಿಯಲ್ಲಿ ಎಡಿಟ್ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

”ಮಗುವಿನ ಪೋಷಕರು, ಅವನನ್ನು ಕಟ್ಟುನಿಟ್ಟಾಗಿ ನೋಡಿಕೊಳ್ಳುವಂತೆ ಒತ್ತಡ ಇತ್ತು.ಹಾಗಾಗಿ ಅವನು ತನ್ನ ಮನೆಕೆಲಸವನ್ನು ಮಾಡಲು ಪ್ರಾರಂಭಿಸಲು ನಾನು ಕೆಲವು ವಿದ್ಯಾರ್ಥಿಗಳಿಂದ ಕಪಾಳಮೋಕ್ಷ ಮಾಡಿಸಿದ್ದೇನೆ” ಎಂದು ಅವರು ಹೇಳಿದ್ದಾರೆ.

”ಇದು ಸಣ್ಣ ಸಮಸ್ಯೆ ಎಂದು ನಾನು ರಾಜಕಾರಣಿಗಳಿಗೆ ಹೇಳಲು ಬಯಸುತ್ತೇನೆ. ರಾಹುಲ್ ಗಾಂಧಿ ಸೇರಿದಂತೆ ನಾಯಕರು ಟ್ವೀಟ್ ಮಾಡಿದ್ದಾರೆ, ಆದರೆ ಟ್ವೀಟ್ ಮಾಡುವುದು ಅಷ್ಟು ದೊಡ್ಡ ವಿಷಯವಲ್ಲ. ಇಂತಹ ದೈನಂದಿನ ವಿಷಯಗಳನ್ನು ವೈರಲ್ ಮಾಡಿದರೆ ಶಿಕ್ಷಕರು ಹೇಗೆ ಕಲಿಸುತ್ತಾರೆ?” ಎಂದು ಪ್ರಶ್ನೆ ಮಾಡಿದ್ದಾರೆ.

ಘಟನೆ ಬಗ್ಗೆ ಮಾತನಾಡಿದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರು, ”ನಾವು ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಮತ್ತು ಪ್ರಕರಣದಲ್ಲಿ ಎಫ್‌ಐಆರ್ ಕೂಡ ದಾಖಲಿಸಲಾಗಿದೆ. ನಾವು ವಿದ್ಯಾರ್ಥಿಗಳ ಜೊತೆಗಿದ್ದೇವೆ ಮತ್ತು ಅವರಿಗೆ ಯಾವುದೇ ಅಡೆತಡೆ ಇಲ್ಲದೇ ಶಿಕ್ಷಣ ಸೌಲಭ್ಯಗಳನ್ನು ಒದಗಿಸಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಶಿಕ್ಷಕಿ ಒತ್ತಾಯಿಸಿರುವುದು ‘ದ್ವೇಷದ ಸಂಸ್ಕೃತಿ’: ಪ್ರತಿಪಕ್ಷಗಳಿಂದ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...