Homeಮುಖಪುಟಅಲ್ಪಸಂಖ್ಯಾತರ ಇಲಾಖೆಯ ಸ್ಕಾಲರ್‌ಶಿಪ್ ಹಗರಣ: ಪ್ರಕರಣ ದಾಖಲಿಸಿಕೊಂಡ ಸಿಬಿಐ

ಅಲ್ಪಸಂಖ್ಯಾತರ ಇಲಾಖೆಯ ಸ್ಕಾಲರ್‌ಶಿಪ್ ಹಗರಣ: ಪ್ರಕರಣ ದಾಖಲಿಸಿಕೊಂಡ ಸಿಬಿಐ

- Advertisement -
- Advertisement -

ಅಲ್ಪಸಂಖ್ಯಾತರ ಇಲಾಖೆಯ ವಿದ್ಯಾರ್ಥಿ ವೇತನದಲ್ಲಿ ಭಾರೀ ಹಗರಣ ನಡೆದಿದ್ದು,  830 ನಕಲಿ ಸಂಸ್ಥೆಗಳು ಇದರ ಲಾಭ ಪಡೆದಿದೆ. 2017-22ರ ಅವಧಿಯಲ್ಲಿ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯಕ್ಕೆ  ಇದರಿಂದಾಗಿ ಸುಮಾರು 144 ಕೋಟಿ ನಷ್ಟ ಉಂಟಾಗಿದೆ ಇದೀಗ ಸಿಬಿಐನಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಕುರಿತು ಬ್ಯಾಂಕ್‌ಗಳು, ಸಂಸ್ಥೆಗಳು ಮತ್ತು ಇತರ ಅಪರಿಚಿತರ ವಿರುದ್ಧ ಕ್ರಿಮಿನಲ್ ಪಿತೂರಿ, ವಂಚನೆ, ಫೋರ್ಜರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಯೋರ್ವರು ತಿಳಿಸಿದ್ದಾರೆ.

ವಿದ್ಯಾರ್ಥಿವೇತನದ ಯೋಜನೆಗಳ ಅಡಿಯಲ್ಲಿ ಹಣಕಾಸಿನ ದುರುಪಯೋಗದ ಕುರಿತ ವರದಿಗಳನ್ನು ಪರಿಗಣಿಸಿ,  ಸಚಿವಾಲಯವು ನ್ಯಾಷನಲ್ ಕೌನ್ಸಿಲ್ ಆಫ್ ಅಪ್ಲೈಡ್ ಎಕನಾಮಿಕ್ ರಿಸರ್ಚ್ (NCAER) ಸಂಸ್ಥೆಗೆ ಮೌಲ್ಯಮಾಪನಕ್ಕೆ ಸೂಚಿಸಿತ್ತು.

ಇದಲ್ಲದೆ ಸಚಿವಾಲಯವು ಅನುಮಾನಾಸ್ಪದ ಸಂಸ್ಥೆಗಳು/ಅರ್ಜಿದಾರರ  ಬಗ್ಗೆ ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ (ಎನ್‌ಎಸ್‌ಪಿ) ಮೂಲಕ ಮೌಲ್ಯಮಾಪನವನ್ನು ನಡೆಸಿದೆ ಎಂದು ಸಚಿವಾಲಯವು ತನ್ನ ದೂರಿನಲ್ಲಿ ತಿಳಿಸಿದೆ.

ಎನ್‌ಎಸ್‌ಪಿಯಲ್ಲಿ ಮೌಲ್ಯಮಾಪನಕ್ಕಾಗಿ ಒಟ್ಟು 1,572 ಸಂಸ್ಥೆಗಳನ್ನು ಗುರುತಿಸಲಾಗಿತ್ತು.  21 ರಾಜ್ಯಗಳ 1,572 ಸಂಸ್ಥೆಗಳಲ್ಲಿ, 830 ಸಂಸ್ಥೆಗಳು ನಕಲಿ ಅಥವಾ ಭಾಗಶಃ ನಕಲಿ ಎಂದು ಕಂಡುಬಂದಿದೆ ಎಂದು ಇಲಾಖೆ ಹೇಳಿದೆ.

ಈ ವಂಚನೆಯಿಂದ 2017ರಿಂದ 22ರವರೆಗೆ 830 ಸಂಸ್ಥೆಗಳಿಂದ 144.33ಕೋಟಿ ಅಲ್ಪಸಂಖ್ಯಾತರ ಇಲಾಖೆಯ ಖಜಾನೆಗೆ ನಷ್ಟವಾಗಿದೆ ಎಂದು ಇಲಾಖೆ ಅಂದಾಜಿಸಿದೆ.

ಇದನ್ನು ಓದಿ: ದಲಿತ ಎಂಬ ಕಾರಣಕ್ಕೆ ನನಗೆ ತಾರತಮ್ಯ ಮಾಡುತ್ತಿದ್ದಾರೆ: ಹಿರಿಯ ಐಎಎಸ್ ಅಧಿಕಾರಿ ಆರೋಪ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...