Homeಮುಖಪುಟಮಣಿಪುರದಲ್ಲಿ ನಿಲ್ಲದ ಹಿಂಸಾಚಾರ: ಗುಂಡಿನ ಚಕಮಕಿಯಲ್ಲಿ ಇಬ್ಬರು ಸಾವು, ಏಳು ಜನರಿಗೆ ಗಾಯ

ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ: ಗುಂಡಿನ ಚಕಮಕಿಯಲ್ಲಿ ಇಬ್ಬರು ಸಾವು, ಏಳು ಜನರಿಗೆ ಗಾಯ

- Advertisement -
- Advertisement -

ಮಣಿಪುರದ ಕುಕಿ ಪ್ರಾಬಲ್ಯದ ಚುರಾಚಂದ್‌ಪುರ ಮತ್ತು ಮೈತಿ ಪ್ರಾಬಲ್ಯದ ಬಿಷ್ಣುಪುರ್ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ಎರಡು ಗುಂಪುಗಳ ನಡುವಿನ ಗುಂಡಿನ ಚಕಮಕಿ ನಡೆದಿದೆ. ಈ ಗುಂಡಿನ ಕಾಳಗದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಏಳು ಜನ ಗಾಯಗೊಂಡಿದ್ದಾರೆ.

ಬಿಜೆಪಿ ಆಡಳಿತವಿರುವ ಮಣಿಪುರದಲ್ಲಿ ಮೇ 3ರಿಂದ ಹಿಂಸಾತ್ಮಕ ಕೃತ್ಯಗಳು ನಡೆಯುತ್ತಲೇ ಇವೆ. ಇಲ್ಲಿಯವರೆಗೆ ಮಣಿಪುರ ಹಿಂಸಾಚಾರದಲ್ಲಿ ಸಾವಿನ ಸಂಖ್ಯೆ 192ಕ್ಕೆ ಏರಿದೆ.

ಮಂಗಳವಾರ, ಬಿಷ್ಣುಪುರ್ ಜಿಲ್ಲೆಯ ನರಸೇನಾ ಪಕ್ಕದ ಹಳ್ಳಿಗಳಲ್ಲಿ ಗುಂಡಿನ ದಾಳಿ ನಡೆದಿದೆ. ಪರಿಹಾರ ಶಿಬಿರದಲ್ಲಿ ತಂಗಿದ್ದ ಕುಕಿ ಗ್ರಾಮ ರಕ್ಷಣಾ ಸ್ವಯಂಸೇವಕನು ಈ ಬಾಂಬ್ ಸ್ಫೋಟದ ನಂತರ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು 30 ವರ್ಷದ ಜಂಗ್ಮಿನ್ಲುನ್ ಗಂಗ್ಟೆ ಎಂದು ಗುರುತಿಸಲಾಗಿದೆ ಎಂದು ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ ತಿಳಿಸಿದೆ.

ಮತ್ತೋರ್ವ ವ್ಯಕ್ತಿಯನ್ನು ಲೈಬುಜಮ್ ಇನಾವೋ ಎಂದು ಗುರುತಿಸಲಾಗಿದೆ. ಅವರಿಗೆ ಬುಲೆಟ್ ತಾಗಿದ್ದರಿಂದ ಗಾಯಗೊಂಡು ಇಂಫಾಲ್ ಆಸ್ಪತ್ರೆ ಗೆ ಸೇರಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದರೆ  ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

”ದಾಳಿಯ ವೇಳೆ ಮತ್ತೊಬ್ಬ ವ್ಯಕ್ತಿ ಮೇಲೆ ಗುಂಡು ಹಾರಿಸಲಾಗಿದ್ದು, ಆತನನ್ನು ಇಂಫಾಲ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ, ಗೋಲಿಬಾರ್ ಮತ್ತು ಪ್ರತಿಭಟನಾಕಾರರ ಸಭೆಯ ನಂತರ ರಾಜ್ಯದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿತ್ತು” ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಮಣಿಪುರ ಪೊಲೀಸರು ಬಿಷ್ಣುಪುರ್ ಮತ್ತು ತೌಬಲ್ ಜಿಲ್ಲೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿ ಗನ್, 20 ಕಾಟ್ರಿಡ್ಜ್‌ಗಳು ಮತ್ತು ಏಳು ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ. ಇದಲ್ಲದೆ, ಲೂಟಿ ಮಾಡಿದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ತಕ್ಷಣವೇ ಪೊಲೀಸರಿಗೆ ಅಥವಾ ಹತ್ತಿರದ ಭದ್ರತಾ ಪಡೆಗಳಿಗೆ ಹಿಂದಿರುಗಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಹಿಂಸಾಚಾರ ಪ್ರಾರಂಭವಾದಾಗಿನಿಂದ, ರಾಜ್ಯದಲ್ಲಿ ಕನಿಷ್ಠ 60,000 ಜನರು ಸ್ಥಳಾಂತರಗೊಂಡಿದ್ದಾರೆ. ಮಹಿಳೆಯರ ವಿರುದ್ಧದ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಪ್ರಕರಣಗಳು ವರದಿಯಾಗಿವೆ ಮತ್ತು ಕೇಂದ್ರ ಭದ್ರತಾ ಪಡೆಗಳಿದ್ದರೂ ಜನಸಮೂಹವು ಪೊಲೀಸ್ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಿದೆ ಮತ್ತು ಹಲವಾರು ಮನೆಗಳಿಗೆ ಬೆಂಕಿ ಹಚ್ಚಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...