Homeಮುಖಪುಟ'ಭಾರತದ ಪ್ರತಿಷ್ಠೆ ಅಪಾಯದಲ್ಲಿದೆ': ಅದಾನಿ ಮೇಲಿನ ಹೊಸ ಆರೋಪಗಳ ಕುರಿತು ಜೆಪಿಸಿ ತನಿಖೆಗೆ ರಾಹುಲ್ ಆಗ್ರಹ

‘ಭಾರತದ ಪ್ರತಿಷ್ಠೆ ಅಪಾಯದಲ್ಲಿದೆ’: ಅದಾನಿ ಮೇಲಿನ ಹೊಸ ಆರೋಪಗಳ ಕುರಿತು ಜೆಪಿಸಿ ತನಿಖೆಗೆ ರಾಹುಲ್ ಆಗ್ರಹ

- Advertisement -
- Advertisement -

ಅದಾನಿ ಗ್ರೂಪ್ ಕೃತಕವಾಗಿ ತನ್ನ ಕಂಪನಿಗಳ ಶೇರುಗಳ ಬೆಲೆಗಳನ್ನು ಹೆಚ್ಚಿಸಿದೆ ಎಂದು ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ಯೋಜನೆ (ಒಸಿಸಿಆರ್‌ಪಿ)ಯು ಗುರುವಾರ ಆರೋಪಿಸಿದೆ. ಈ ಹೊಸ ಆರೋಪಗಳ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

INDIA ಸಭೆಗೂ ಮುನ್ನ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ”ಅದಾನಿ ಕುರಿತು ವಿದೇಶಿ ಪತ್ರಿಕೆಗಳು ಪ್ರಕಟಿಸಿದ ಲೇಖನಗಳನ್ನು ಉಲ್ಲೇಖಿಸಿ, ಇವು ಯಕಶ್ಚಿತ್ ಪತ್ರಿಕೆಗಳಲ್ಲ, ಈ ಪತ್ರಿಕೆಗಳು ಭಾರತದಲ್ಲಿ ಹೂಡಿಕೆ ಮಾಡುವುದರ ಮೇಲೆ ಮತ್ತು ಪ್ರಪಂಚದ ಉಳಿದ ಭಾಗಗಳಲ್ಲಿ ಭಾರತದ ಗ್ರಹಿಕೆ ಮೇಲೆ ಪರಿಣಾಮ ಬೀರುತ್ತವೆ. ಒಂದು ಶತಕೋಟಿ ಡಾಲರ್‌ಗೂ ಹೆಚ್ಚು ಹಣ ಭಾರತದಿಂದ ಹೋಗಿದೆ” ಎಂದು ಅವರು ಹೇಳಿದರು.

“ಮೊದಲ ಪ್ರಶ್ನೆ ಉದ್ಭವಿಸುತ್ತದೆ – ಇದು ಯಾರ ಹಣ? ಇದು ಅದಾನಿಯವರದ್ದೋ ಅಥವಾ ಬೇರೆಯವರದ್ದೋ? ಗೌತಮ್ ಅದಾನಿ ಅವರ ಸಹೋದರ ವಿನೋದ್ ಅದಾನಿ ಇದರ ಹಿಂದಿನ ಮಾಸ್ಟರ್ ಮೈಂಡ್. ಈ ಹಣದ ದಂಧೆಯಲ್ಲಿ ಇನ್ನಿಬ್ಬರು ಭಾಗಿಯಾಗಿದ್ದಾರೆ. ಒಬ್ಬರು ನಾಸಿರ್ ಅಲಿ ಶಾಬಾನ್ ಅಹ್ಲಿ, ಇನ್ನೊಬ್ಬರು ಚಾಂಗ್ ಚುಂಗ್ ಲಿಂಗ್ ಎಂಬ ಚೀನಾದ ವ್ಯಕ್ತಿ” ಎಂದು ಅವರು ಹೇಳಿದರು.

”ಎರಡನೆಯ ಪ್ರಶ್ನೆ ಉದ್ಭವಿಸುತ್ತದೆ – ಈ ಇಬ್ಬರು ವಿದೇಶಿ ಪ್ರಜೆಗಳಿಗೆ ಭಾರತದ ಬಹುತೇಕ ಎಲ್ಲಾ ಮೂಲಸೌಕರ್ಯಗಳನ್ನು ನಿಯಂತ್ರಿಸುವ ಕಂಪನಿಗಳೊಂದಿಗೆ ಆಟವಾಡಲು ಏಕೆ ಅನುಮತಿಸಲಾಗಿದೆ?” ಎಂದು ರಾಹುಲ್ ಗಾಂಧಿ ಪ್ರಶ್ನೆ ಮಾಡಿದ್ದಾರೆ.

”ಸೆಬಿ ತನಿಖೆ ನಡೆಸಿ ಅದಾನಿ ಗ್ರೂಪ್‌ಗೆ ಕ್ಲೀನ್ ಚಿಟ್ ನೀಡಿದ ಮಹಾನುಭಾವರು ಈಗ ಅದೇ ಗುಂಪಿನ ಮಾಲೀಕತ್ವದ ಮಾಧ್ಯಮ ಕಂಪನಿಯಲ್ಲಿ ನಿರ್ದೇಶಕರಾಗಿದ್ದಾರೆ” ಎಂದು ಕಾಂಗ್ರೆಸ್ ನಾಯಕ ಹೇಳಿದರು.

”ಈ ವಿಷಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಯಾಕೆ ಮೌನವಾಗಿದ್ದಾರೆ? ಅವರು ಈ ವಿಷಯವನ್ನು ಏಕೆ ತನಿಖೆ ಮಾಡುತ್ತಿಲ್ಲ?” ಎಂದು ರಾಹುಲ್ ಪ್ರಶ್ನೆ ಮಾಡಿದ್ದಾರೆ.

”ರಾಷ್ಟ್ರ ರಾಜಧಾನಿಯಲ್ಲಿ ಮುಂದಿನ ವಾರ ನಡೆಯಲಿರುವ ಜಿ 20 ಶೃಂಗಸಭೆಗೆ ಮುಂಚಿತವಾಗಿ ಭಾರತದ ಪ್ರತಿಷ್ಠೆ ಅಪಾಯದಲ್ಲಿದೆ. ಪ್ರಧಾನಿ ಮೋದಿ ಅವರು ಈ ವಿಷಯವನ್ನು ಪರಿಶೀಲಿಸಬೇಕು” ಎಂದು ಹೇಳಿದರು.

ಬಿಲಿಯನೇರ್ ಗೌತಮ್ ಅದಾನಿ ಅವರ ಸಮೂಹವು ಗುರುವಾರ 2013 ರಿಂದ 2018 ರ ಅವಧಿಯಲ್ಲಿ ಕೃತಕವಾಗಿ ತನ್ನ ಕಂಪನಿಗಳ ಶೇರುಗಳ ಬೆಲೆಗಳನ್ನು ಹೆಚ್ಚಿಸಿದೆ ಎಂದು ಮಾರಿಷಸ್ ಮೂಲದ ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ಯೋಜನೆ (ಒಸಿಸಿಆರ್‌ಪಿ)ಯು ಗುರುವಾರ ಆರೋಪಿಸಿದೆ.

ಇದನ್ನೂ ಓದಿ: ಗೌತಮ್ ಅದಾನಿಗೆ ಮತ್ತೆ ಸಂಕಷ್ಟ: ಕೃತಕವಾಗಿ ಶೇರುಗಳ ಬೆಲೆ ಹೆಚ್ಚಿಸಿದ ಅದಾನಿ ಗ್ರೂಪ್- ಒಸಿಸಿಆರ್‌ಪಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...