Homeಕರ್ನಾಟಕಶಿವಮೊಗ್ಗ: ಮುಸ್ಲಿಂ ವಿದ್ಯಾರ್ಥಿಗಳಿಗೆ  ಪಾಕಿಸ್ತಾನಕ್ಕೆ ಹೋಗಿ ಎಂದಿದ್ದ ಶಿಕ್ಷಕಿಯ ವರ್ಗಾವಣೆ

ಶಿವಮೊಗ್ಗ: ಮುಸ್ಲಿಂ ವಿದ್ಯಾರ್ಥಿಗಳಿಗೆ  ಪಾಕಿಸ್ತಾನಕ್ಕೆ ಹೋಗಿ ಎಂದಿದ್ದ ಶಿಕ್ಷಕಿಯ ವರ್ಗಾವಣೆ

- Advertisement -
- Advertisement -

ಶಿವಮೊಗ್ಗ ಜಿಲ್ಲೆಯ ಉರ್ದು ಶಾಲೆಯೊಂದರ ಶಿಕ್ಷಕಿಯೊಬ್ಬರು  ಇಬ್ಬರು ಮುಸ್ಲಿಂ ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದು ಹೇಳಿರುವ ಆರೋಪ ಕೇಳಿ ಬಂದಿದ್ದು, ಇದೀಗ ಶಿಕ್ಷಕಿಯನ್ನು ಬೇರೆ ಶಾಲೆಗೆ ವರ್ಗಾವಣೆ ಮಾಡಲಾಗಿದೆ.

5ನೇ ತರಗತಿಯ ಮಕ್ಕಳಿಬ್ಬರು ತರಗತಿಗೆ ಹೋಗುವಾಗ ಜಗಳವಾಡಿದ್ದು, ಇದಕ್ಕೆ ಕೋಪಗೊಂಡ ಶಿಕ್ಷಕಿ ಪಾಕಿಸ್ತಾನಕ್ಕೆ ಹೋಗಿ, ಇದು ಹಿಂದೂಗಳ ದೇಶ  ಎಂದು ವಿದ್ಯಾರ್ಥಿಗಳಿಗೆ ಹೇಳಿದ್ದರು ಎನ್ನಲಾಗಿದೆ. ಈ ಕುರಿತು ಮಕ್ಕಳ ಪೋಷಕರು ಶಿಕ್ಷಣ ಇಲಾಖೆಗೆ ದೂರು ನೀಡಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ  ಬ್ಲಾಕ್ ಶಿಕ್ಷಣಾಧಿಕಾರಿ ಬಿ ನಾಗರಾಜ್, ವಿವಾದಿತ ಹೇಳಿಕೆ ನೀಡಿದ ಶಿಕ್ಷಕಿಗೆ ವರ್ಗಾವಣೆ ಮಾಡಲಾಗಿದೆ. ಶಿಕ್ಷಕಿ ಕನ್ನಡ ಭಾಷಾ ಪಠ್ಯವನ್ನು ಬೋಧಿಸುತ್ತಿದ್ದರು. ಈ ಕುರಿತು ಇಲಾಖಾ ತನಿಖೆ ನಡೆಯುತ್ತಿದ್ದು,  ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಶಿಕ್ಷಕಿ ಶಿವಮೊಗ್ಗದ ಉರ್ದು ಶಾಲೆಯೊಂದರಲ್ಲಿ ಪಾಠ ಮಾಡುತ್ತಿದ್ದು, 26 ವರ್ಷಗಳಿಂದ  ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು ಎಂದು ಎನ್ ಡಿಟಿವಿ ವರದಿಯಲ್ಲಿ ತಿಳಿಸಿದೆ.

ಉತ್ತರ ಪ್ರದೇಶದ ಶಾಲೆಯೊಂದರಲ್ಲಿ ಶಿಕ್ಷಕಿಯೊಬ್ಬರು ತಮ್ಮ ಸಹಪಾಠಿ ಮುಸಲ್ಮಾನ ವಿದ್ಯಾರ್ಥಿಗೆ ಹೊಡೆಯಲು ಹೇಳುವ ವಿಡಿಯೋ ದೇಶದಲ್ಲಿ ಭಾರೀ ಸುದ್ದಿಯಾಗಿತ್ತು. ಮುಜಾಫರ್‌ನಗರದ ನೇಹಾ ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲೆ ವಿರುದ್ಧ ಪ್ರಕರಣ ಕೂಡ ದಾಖಲಾಗಿತ್ತು. ಇದಾದ ಬೆನ್ನಲ್ಲೇ ದೆಹಲಿಯ ಶಾಲೆಯೊಂದರಲ್ಲಿ ಶಿಕ್ಷಕಿಯೋರ್ವರು ನೀವು ವಿಭಜನೆಯಾಗುವಾಗ ಯಾಕೆ ಪಾಕಿಸ್ತಾನಕ್ಕೆ ಹೋಗಿಲ್ಲ ಎಂದು ಪ್ರಶ್ನಿಸಿದ್ದರು. ಈ ಕುರಿತು ವಿದ್ಯಾರ್ಥಿಗಳ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.

ಇದನ್ನು ಓದಿ; ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾದಂತೆ ನಿರ್ಮೂಲನೆ ಮಾಡಬೇಕು: ಉದಯನಿಧಿ ಸ್ಟಾಲಿನ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Good move. Teachers who targets any religion or caste should be punished because of religion intolerance we Indians suffered a lot. Atleast our next generation should learn to live peacefully without any communal intolerance. Nowadays so many people r trying to spoil our society by spreding unwanted things to spoil the healthy relationship which is very difficult to build.

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...