Homeಕರ್ನಾಟಕಗೌರಿ ಲಂಕೇಶ್ ಹತ್ಯೆಯ ಕರಾಳ ದಿನಕ್ಕೆ 6 ವರ್ಷ: ಹೋರಾಟಗಾರರು, ಒಡನಾಡಿಗಳಿಂದ ನುಡಿನಮನ

ಗೌರಿ ಲಂಕೇಶ್ ಹತ್ಯೆಯ ಕರಾಳ ದಿನಕ್ಕೆ 6 ವರ್ಷ: ಹೋರಾಟಗಾರರು, ಒಡನಾಡಿಗಳಿಂದ ನುಡಿನಮನ

- Advertisement -
- Advertisement -

ಚಿಂತಕಿ, ವಿಚಾರವಾದಿ ಹಾಗೂ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯಾಗಿ ಇಂದಿಗೆ 6 ವರ್ಷಗಳು ಕಳೆದಿವೆ. ಇಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಗೌರಿ ಸಮಾಧಿಯ ಬಳಿ ಸೇರಿದ ಹೋರಾಟಗಾರರು, ಒಡನಾಡಿಗಳು ನುಡಿನಮನ ಸಲ್ಲಿಸಿದರು ಗೌರವ ನಮನ ಸಲ್ಲಿಸಿದರು.

ಈ ಗೌರವನಮನ ಕಾರ್ಯಕ್ರಮದಲ್ಲಿ ರೈತ ಹೋರಾಟಗಾರರು, ಸಾಮಾಜಿಕ ಕಾರ್ಯಕರ್ತರು, ಗೌರಿ ಲಂಕೇಶ್ ಅವರ ಒಡನಾಡಿಗಳು ಸೇರಿದ್ದರು. ಈ ಸಂದರ್ಭದಲ್ಲಿ ಗೌರಿ ಲಂಕೇಶ್ ಅವರ ಸಮಾಧಿಗೆ ಪುಷ್ಪನಮನ ಅರ್ಪಿಸಿ, ಅವರ ಹೋರಾಟವನ್ನು ಮೆಲುಕು ಹಾಕಿದರು.

ಈ ವೇಳೆ ಮಾತನಾಡಿದ ಹೋರಾಟಗಾರರಾದ ನೂರ್‌ ಶ್ರೀಧರ್‌ ಅವರು, ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ಉಲ್ಲೇಖಿಸಿ, “ಸಣ್ಣದೊಂದು ನಿರಾಳತೆಯನ್ನು ಕಂಡಿದ್ದೇವೆ. ಸಣ್ಣದೊಂದು ನಿಟ್ಟುಸಿರು ಸಿಕ್ಕಿದೆ. ಗೌರಿಯವರ ಎದೆಯ ಮೇಲಿನ ಚಪ್ಪಡಿಯ ಭಾರ ಸ್ವಲ್ಪ ಕಡಿಮೆಯಾಗಿದೆ. ನಮ್ಮ ಕುತ್ತಿಗೆಯ ಮೇಲೆ ಕೂತಿದ್ದ ದುಸ್ವಪ್ನ ಮತ್ತು ದುರಾಡಳಿತವನ್ನು ಸ್ವಲ್ಪ ಮಟ್ಟಿಗೆ ಸರಿಸಿದ್ದೇವೆ” ಎಂದು ಬಣ್ಣಿಸಿದರು.

”ಹಲವು ಪರ್ಯಾಯ ಸಂಸ್ಥೆಗಳು ಚಿಗುರೊಡೆದಿವೆ. ಗೌರಿಯ ಕುಟುಂಬ ವಿಶಾಲವಾಗುತ್ತಿದೆ. ಎಲ್ಲ ಕಡೆ ಇರುವ ಜೀವಪರ ಕೊಂಡಿಗಳು ಬೆಸೆಯುತ್ತಿವೆ. ಗುರಿಯ ಜೊತೆ ಸಾಗುತ್ತಿದ್ದೇವೆ. 2024ಕ್ಕೆ ನಮ್ಮ ಜವಾಬ್ದಾರಿ ಹೆಚ್ಚಿದೆ” ಎಂದು ಎಚ್ಚರಿಸಿದರು.

ರೈತ ಹೋರಾಟಗಾರ್ತಿ ಚುಕ್ಕಿ ನಂಜುಂಡಸ್ವಾಮಿ ಮಾತನಾಡಿ, ”ಗೌರಿಯಕ್ಕ ನಮಗೆಲ್ಲ ಒಂದು ಮಾದರಿ ಮತ್ತು ಅನುಕರಣೀಯ ವ್ಯಕ್ತಿತ್ವ. ಅವರು ಅಂದು ಹೇಳಿದ ಎಲ್ಲ ಮಾತುಗಳು ಇಂದು ಸತ್ಯವಾಗುತ್ತಿವೆ. ಮನೆಯ ಹಿರಿಯಕ್ಕನನ್ನು ಕಳೆದುಕೊಂಡಿದ್ದೇವೆ” ಎಂದು ಗೌರಿಯವರೊಂದಿಗಿನ ಒಡನಾಟವನ್ನು ನೆನಪಿಸಿಕೊಂಡರು.

ಇನ್ನು ಗೌರಿಯವರ ಸಹೋದರಿ ಕವಿತಾ ಲಂಕೇಶ್ ಮಾತನಾಡಿ, ”ಗೌರಿ ಕುಟುಂಬ ಬೆಳೆಯುತ್ತಿದೆ. ಇಂದು ಅವಳು ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು. ವೈಯಕ್ತಿಕವಾಗಿ ಸಿದ್ದರಾಮಯ್ಯನವರೆಂದರೆ ಆಕೆಗೆ ಪ್ರೀತಿ. ಅವಳ ಹೋರಾಟ ನಿರಂತರವಾಗಿರುತ್ತದೆ. ನಾವು 2024ಕ್ಕೆ ಮುನ್ನಡೆಯೋಣ” ಎನ್ನುತ್ತಾ ಗದ್ಗದಿತರಾದರು.

ನಟ ದುನಿಯಾ ವಿಜಯ್ ಮಾತನಾಡಿ, ”ಗೌರಿಯಕ್ಕ ಯಾವಾಗಲೂ ಬೆನ್ನು ತಟ್ಟುತ್ತಿದ್ದವರು. ಜಿಮ್‌ನಲ್ಲಿ ಸಿಗುತ್ತಿದ್ದರು. ನನ್ನ ಸ್ವಃತ ಅಕ್ಕನನ್ನು ಕಳೆದುಕೊಂಡಿದ್ದೇನೆ” ಎಂದರು.

”ನೂರು ಗುಂಡುಗಳು ತೂರಿ ಬಂದರೂ ಗುಡುಗುಡು ಗುಡುಗುಡು ಗುಡುಗುವೆವು” ಎಂಬ ಹಾಡಿಗೆ ಎಲ್ಲರೂ ದನಿ ಸೇರಿಸಿ, ಗೌರಿಯವರ ಆಶಯಗಳನ್ನು ಕಾಡಿಟ್ಟುಕೊಳ್ಳುವ ಸಂಕಲ್ಪ ಮಾಡಿದರು.

ಈ ವೇಳೆ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌, ರೈತ ನಾಯಕರಾದ ರಾಕೇಶ್ ಟಿಕಾಯತ್‌, ಬಲ್ವಿಂದರ್‌ ಸಿಂಗ್, ಗೌರಿಯವರ ತಾಯಿ ಇಂದಿರಾ ಲಂಕೇಶ್, ಗೌರಿ ಒಡನಾಡಿಗಳಾದ ಸಿರಿಮನೆ ನಾಗರಾಜ್, ಡಾ.ಎಚ್.ವಿ.ವಾಸು, ಕೆ.ಎಲ್.ಅಶೋಕ್, ವಿ.ಎಸ್.ಶ್ರೀಧರ್‌, ಶಿವಸುಂದರ್‌, ಮಲ್ಲಿಗೆ ಸಿರಿಮನೆ, ದು.ಸರಸ್ವತಿ, ದೀಪು ಮೊದಲಾದವರು ಹಾಜರಿದ್ದು ಗೌರಿ ನೆನಪುಗಳನ್ನು ಮೆಲುಕು ಹಾಕಿದರು. ಹಾಡಗಾರರಾದ ಜನಾರ್ದನ್‌ (ಜೆನ್ನಿ), ಚಿಂತನ್ ವಿಕಾಸ್ ಅವರು ಪಿ.ಲಂಕೇಶ್ ಅವರ ’ಅವ್ವ’ ಕವನವನ್ನು ಹಾಡುವ ಮೂಲಕ ಗೌರಿ ಸ್ಮರಣೆಗೆ ಮೆರುಗು ತಂದರು.

ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯದ ಬೇಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...