Homeಕರ್ನಾಟಕಸಂವಿಧಾನವೇ ನನ್ನ ಧರ್ಮ, ಹೇಳಿಕೆಗೆ ಬದ್ಧನಾಗಿದ್ದೇನೆ: ಎಫ್‌ಐಆರ್ ಬಗ್ಗೆ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ

ಸಂವಿಧಾನವೇ ನನ್ನ ಧರ್ಮ, ಹೇಳಿಕೆಗೆ ಬದ್ಧನಾಗಿದ್ದೇನೆ: ಎಫ್‌ಐಆರ್ ಬಗ್ಗೆ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ

- Advertisement -
- Advertisement -

ಸನಾತನ ಧರ್ಮದ ಕುರಿತು ತಮಿಳುನಾಡಿನ ಸಚಿವ ಉದಯ್ ನಿಧಿ ಸ್ಟಾಲಿನ್ ಹೇಳಿಕೆಯನ್ನು ಬೆಂಬಲಿಸಿದ್ದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರಪ್ರದೇಶದಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ ಖರ್ಗೆ ಸಂವಿಧಾನವೇ ನನ್ನ ಧರ್ಮ, ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.

ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ಅವರು ತಮಿಳುನಾಡಿನ ಸಿಎಂ ಸ್ಟಾಲಿನ್‌ ಅವರ ಪುತ್ರ ಹಾಗೂ ಸಚಿವ ಉದಯ್‌ ನಿಧಿ ಸ್ಟಾಲಿನ್‌ ಅವರು ನೀಡಿರುವ ಸನಾತನ ಧರ್ಮದ ಕುರಿತ ಹೇಳಿಕೆಗೆ ಬೆಂಬಲಿಸಿ ಸಮಾನ ಹಕ್ಕುಗಳನ್ನು ನೀಡದ ಯಾವುದೇ ಧರ್ಮವು ರೋಗವಿದ್ದಂತೆ ಎಂದು ಹೇಳಿದ್ದರು.

ಸಮಾನತೆಯನ್ನು ಉತ್ತೇಜಿಸದ ಅಥವಾ ಮಾನವರಾಗಿ ನಿಮಗೆ ಇರುವ ಘನತೆಯನ್ನು ಖಾತ್ರಿಪಡಿಸದ ಯಾವುದೇ ಧರ್ಮವು ಧರ್ಮವಲ್ಲ. ನನ್ನ ಪ್ರಕಾರ, ಸಮಾನ ಹಕ್ಕುಗಳನ್ನು ನೀಡದ  ಮತ್ತು ನಿಮ್ಮನ್ನು ಮನುಷ್ಯರಂತೆ ನೋಡಿಕೊಳ್ಳದ ಯಾವುದೇ ಧರ್ಮ ಅದು ಕಾಯಿಲೆಯಂತೆ ಎಂದು ಹೇಳಿದ್ದರು.

ಈ ಬಗ್ಗೆ ಉತ್ತರಪ್ರದೇಶದ ರಾಂಪುರದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ  ಉದಯನಿಧಿ ಸ್ಟಾಲಿನ್ ಮತ್ತು ಪ್ರಿಯಾಂಕ ಖರ್ಗೆ ವಿರುದ್ಧ ಐಪಿಸಿ ಸೆಕ್ಷನ್ 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಮತ್ತು 153 ಎ (ವಿವಿಧ ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಕೀಲರಾದ  ಹರ್ಷಗುಪ್ತಾ ಮತ್ತು ರಾಮ್ ಸಿಂಗ್ ಲೋಧಿ ಅವರ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ ಖರ್ಗೆ,  ನಾನು ಆ ಕುರಿತು ಯೋಚಿಸುವುದಿಲ್ಲ, ಅವರಿಗೆ ಏನು ಬೇಕಿದ್ದರೂ ಅವರು ಮಾಡಬಹುದು. ನನ್ನ ಹೇಳಿಕೆ ಸ್ಪಷ್ಟವಾಗಿದೆ. ನಾನು ಯಾವುದೇ ಪ್ರತ್ಯೇಕ ಧರ್ಮದ ಬಗ್ಗೆ ಹೇಳಿಲ್ಲ. ನನ್ನ ಪ್ರಕಾರ ಸಮಾನತೆಯನ್ನು ತಿಳಿಸದ ಯಾವುದೇ ಧರ್ಮವು, ಧರ್ಮವಲ್ಲ. ಸಂವಿಧಾನ ನನ್ನ ಧರ್ಮವಾಗಿದೆ.  ಪ್ರಕರಣ ದಾಖಲಾದ ಯುಪಿಯಲ್ಲಿ ನನ್ನ ಹೇಳಿಕೆ ಸಮಸ್ಯೆಯಾದರೆ, ಅದು ನನ್ನ ಸಮಸ್ಯೆ ಎಂದು ನಾನು ಭಾವಿಸುವುದಿಲ್ಲ. ನಾವು ಏನು ಮಾಡಬೇಕೋ ಅದನ್ನು ಮಾಡುತ್ತೇವೆ ಎಂದು ಪ್ರಿಯಾಂಕ ಖರ್ಗೆ ಹೇಳಿದ್ದಾರೆ.

 

ಇದನ್ನು ಓದಿ: ಸನಾತನ ಧರ್ಮದ ಹೇಳಿಕೆ: ಉದಯನಿಧಿ ಸ್ಟಾಲಿನ್, ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರಪ್ರದೇಶದಲ್ಲಿ ಕೇಸ್ ದಾಖಲು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...