Homeಕರ್ನಾಟಕನಾವು ಹಿಂದೂಗಳಲ್ಲವೇ? ಇದಾವುದು ಹೊಸ ಧರ್ಮ, ಸನಾತನ??: ನಟ ಕಿಶೋರ್ ಕುಮಾರ್ ಪ್ರಶ್ನೆ

ನಾವು ಹಿಂದೂಗಳಲ್ಲವೇ? ಇದಾವುದು ಹೊಸ ಧರ್ಮ, ಸನಾತನ??: ನಟ ಕಿಶೋರ್ ಕುಮಾರ್ ಪ್ರಶ್ನೆ

- Advertisement -
- Advertisement -

ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಬಗ್ಗೆ ಹೇಳಿಕೆಯೊಮದನ್ನು ನೀಡಿದ್ದರು. ಅದಕ್ಕೆ ಹಿಂದೂ ಸಂಘಟನೆಗಳು, ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಅಯೋಧ್ಯೆ ಸ್ವಾಮಿಯೊಬ್ಬರು ಉದಯನಿಧಿ ಸ್ಟಾಲಿನ್ ಅವರ ತಲೆ ಕಡಿಯಬೇಕು ಎಂದಿದ್ದಾರೆ. ಇದಕ್ಕೆ ಖ್ಯಾತ ಬಹುಭಾಷಾ ನಟ ಕಿಶೋರ್ ಕುಮಾರ್ ಅವರು ಕಿಡಿ ಕಾರಿದ್ದಾರೆ.

ಈ ಬಗ್ಗೆ ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ”ಇಷ್ಟೂ ದಿನ ಹಿಂದೂ ಹಿಂದೂ ಎಂದು ಅರಚುತಿದ್ದವರೆಲ್ಲ ಯಾಕೋ ಆ ಪದ ಬಿಟ್ಟೇ ಬಿಟ್ಟರೆನಿಸುತ್ತಿಲ್ಲವೇ? ಹಾಗಾದರೆ ನಾವು ಹಿಂದೂಗಳಲ್ಲವೇ?
ಇದಾವುದು ಹೊಸ ಧರ್ಮ ? ಸನಾತನ??” ಎಂದು ಪ್ರಶ್ನೆ ಮಾಡಿದ್ದಾರೆ.

”ಕೆಲಸ ಮಾಡಲು ಯೋಗ್ಯತೆಯಿಲ್ಲದೆ ಈ ಪದಗಳ ರಾಜಕೀಯ ಲಾಭ ಪಡೆಯಲು ತುದಿಗಾಲಲ್ಲಿ ನಿಂತಿರುವವರನ್ನು ಇದರ ಸಂಪೂರ್ಣ ನಿಖರ ಅರ್ಥ ಹೇಳಲು ಕೇಳಿಬಿಡಿ ಸಾಕು..” ಎಂದಿದ್ದಾರೆ.

”ವಾಟ್ಸಾಪ್ ವಿಶ್ವವಿದ್ಯಾಲಯದಿಂದ ಹೊರಬಂದು, ಹಿಂದೂ ಪದದ ನಿಜ ಅರ್ಥ, ಮೂಲ, ಅದರ ಹಿಂದಿನ ದ್ವೇಷದ ರಾಜಕೀಯ ಪ್ರಚಲಿತವಾಗುತ್ತಿದ್ದಂತೆ ಅದನ್ನು ಬಿಟ್ಟು ಸನಾತನ ಪದ ಹಿಡಿದ ದ್ವೇಷದ ವರ್ತಕರು ಅದನ್ನೂ ರಾಜಕೀಯ ಲಾಭಕ್ಕಾಗಿ ಬಳಸಿದ್ದೇ ಈ ಅನವಶ್ಯಕ ಚರ್ಚೆಗೆ ಕಾರಣ” ಎಂದು ಹೇಳಿದ್ದಾರೆ.

 

View this post on Instagram

 

A post shared by Kishore Kumar Huli (@actorkishore)

”ರಾಜಕೀಯದ ದೃಷ್ಟಿಯಿಂದ ಉದಯನಿಧಿಯವರ ಭಾಷಾಪ್ರಯೋಗದ ತೀಕ್ಷ್ಣತೆ ಸ್ವಲ್ಪ ಕಡಿಮೆಯಾಗಬಹುದಿತ್ತೆನಿಸಿದರೂ ಅವರು ಖಂಡಿಸಿದ್ದು ಇವರ ದ್ವೇಷದ ಜಾತಿವಾದದ, ಅಸ್ಪೃಷ್ಯತೆಯ , ಅಸಮಾನತೆಯ ವೈದಿಕ ರಾಜಕೀಯವು ಕಿಡ್ನಾಪ್ ಮಾಡಿದ ಸನಾತನವನ್ನು , ಆದಿ ಅಂತ್ಯವಿಲ್ಲದ ಸನಾತನ ಪದವನ್ನಲ್ಲವೆಂಬುದು ಸ್ಪಷ್ಟ.. ಅದನ್ನು ಸನಾತನಿಗಳ ಮಾರಣಹೋಮಕ್ಕೆ ಹೋಲಿಸಿದ ಇವರ ದ್ವೇಷದ ವಕ್ತಾರನಿಗೆ ಇವರ ಪಕ್ಷದ ಪ್ರಧಾನಿ ಊರಲ್ಲೆಲ್ಲ ಕಾಂಗ್ರೆಸ್ ಮುಕ್ತವೆಂದು ಕೂಗಾಡುತ್ತ ತಿರುಗಿದಾಗ ಕಾಂಗ್ರೆಸಿಗರ ಮಾರಣಹೋಮಕ್ಕೆ ಕರೆ ನೀಡಿದ್ದರೇ ಕೇಳಬೇಕಲ್ಲ..” ಎಂದು ಪ್ರಶ್ನೆ ಮಾಡಿದ್ದಾರೆ.

”ಧರ್ಮವೆನ್ನುವುದು ಅಧರ್ಮದ ವಿರುದ್ಧ ಪದವಾದರೆ, ಅಧರ್ಮವೆನ್ನುವುದು ಕೆಟ್ಟ ಕೆಲಸವೆಂದಾದರೆ, ಒಳ್ಳೆಯ ಕೆಲಸ ಮಾಡುವುದಷ್ಟೇ ಧರ್ಮವೇ ಹೊರತು ಹಲವು ನಂಬಿಕೆಯ ಮೂಟೆಗಳಲ್ಲ. ಈ ದಾರಿತಪ್ಪಿಸುವ ಧರ್ಮಾಂಧ ರಾಜಕೀಯದಲ್ಲಿ ನಮ್ಮ ಜ್ವಲಂತ ಸಮಸ್ಯೆಗಳೂ , ಜಾತಿವಾದದ, ರಾಜಕೀಯ, ಆರ್ಥಿಕ, ಸಾಮಾಜಿಕ ಕ್ರೌರ್ಯದ, ಅಸಮಾನತೆಯ ಸಮಸ್ಯೆಗಳೆಲ್ಲ ಕೊಚ್ಚಿ ಹೋಗುವ ಮುನ್ನ ಎಚ್ಚರಗೊಳ್ಳುವ.
ಮನುಷ್ಯರನ್ನು ಮನುಷ್ಯರಾಗಿ, ಕಾಣುವ ಮನುಷ್ಯ ಧರ್ಮದವರಾಗುವ ವಿಶ್ವಮಾನವರಾಗುವ…” ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: ಸಂವಿಧಾನವೇ ನನ್ನ ಧರ್ಮ, ಹೇಳಿಕೆಗೆ ಬದ್ಧನಾಗಿದ್ದೇನೆ: ಎಫ್‌ಐಆರ್ ಬಗ್ಗೆ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...