Homeಕರ್ನಾಟಕಚುನಾವಣೆ ಸಮೀಪಿಸುತ್ತಿರುವುದರಿಂದ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ: ಸಿದ್ದರಾಮಯ್ಯ

ಚುನಾವಣೆ ಸಮೀಪಿಸುತ್ತಿರುವುದರಿಂದ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ: ಸಿದ್ದರಾಮಯ್ಯ

- Advertisement -
- Advertisement -

‘ಇಂಡಿಯಾ’ವನ್ನು ‘ಭಾರತ್’ ಎಂದು ಮರು ನಾಮಕರಣ ಚರ್ಚೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಚುನಾವಣೆ ಹತ್ತಿರ ಬರುತ್ತಿರುವುದರಿಂದ ಇಂತಹ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ ಎಂದು ಹೇಳಿದ್ದಾರೆ.

ಮಧುಗಿರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ದೇಶದ ಸಂವಿಧಾನವನ್ನು  26ನೇ ನವೆಂಬರ್ 1949 ರಂದು ಅಂಗೀಕಾರ ಮಾಡಿದ್ದಾರೆ. ಅಂದಿನಿಂದ  ಭಾರತವನ್ನು ಇಂಡಿಯಾ ಎಂದೇ ಕರೆಯಲಾಗಿದೆ. ಈಗ ಬದಲಾವಣೆ ಮಾಡುವ ಅಗತ್ಯವೇನು ಎಂದು ಕೇಳಿದ್ದಾರೆ.

ನಮ್ಮ ಸಂವಿಧಾನದ ಪೀಠಿಕೆಯಲ್ಲಿ ಭಾರತದ ಪ್ರಜೆಗಳಾದ ನಾವು ಎಂದು ಹೇಳಿದ್ದೇವೆ. ಈಗ ಭಾರತ ಎಂದು ಮರುನಾಮಕರಣ ಮಾಡುವ ಅಗತ್ಯವಿಲ್ಲ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನಾವು ಯಾವುದೇ ಧರ್ಮದಲ್ಲಿ ತಾರತಮ್ಯ ಮಾಡುವುದಿಲ್ಲ. ಹಿಂದೂ, ಇಸ್ಲಾಮ್, ಕ್ರೈಸ್ತ,  ಸಿಖ್, ಭೌದ್ಧ ಧರ್ಮವಿರಲಿ,  ದಯವೇ ಧರ್ಮದ ಮೂಲವಯ್ಯ ಎಂದು ಹೇಳಿದ್ದಾರೆ.

ಇದನ್ನು ಓದಿ: ವಿಶೇಷ ಅಧಿವೇಶನ: ಚೀನಾ ಗಡಿ ಸಂಘರ್ಷ ಸೇರಿ 9 ಅಂಶಗಳ ಚರ್ಚೆಗೆ ಆಗ್ರಹಿಸಿ ಸೋನಿಯಾ ಗಾಂಧಿ ಪತ್ರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ನಾನು ಆರ್‌ಎಸ್‌ಎಸ್ ಸದಸ್ಯ, ಕರೆದರೆ ಸಂಸ್ಥೆಗೆ ಹಿಂತಿರುಗಲು ಸಿದ್ಧ..’; ಬೀಳ್ಕೊಡುಗೆ ಸಮಾರಂಭದಲ್ಲಿ ಘೋಷಿಸಿದ ಹೈಕೋರ್ಟ್‌...

0
ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಸೋಮವಾರ ನಿವೃತ್ತರಾದ ನ್ಯಾಯಮೂರ್ತಿ ಚಿತ್ತ ರಂಜನ್ ದಾಶ್ ಅವರು, 'ನಾನು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸದಸ್ಯ' ಎಂದು ಹೇಳಿದ್ದಾರೆ. ನ್ಯಾಯಾಧೀಶರು ಮತ್ತು ಬಾರ್‌ ಕೌನ್ಸಿಲ್‌ ಸದಸ್ಯರ ಸಮ್ಮುಖದಲ್ಲಿ...