Homeಮುಖಪುಟಭಾರತದಲ್ಲಿ ಗಾಂಧಿ-ಗೋಡ್ಸೆ ದೃಷ್ಟಿಕೋನದ ನಡುವೆ ಹೋರಾಟ ನಡೆಯುತ್ತಿದೆ: ಯುರೋಪ್‌ನಲ್ಲಿ ರಾಹುಲ್ ಹೇಳಿಕೆ

ಭಾರತದಲ್ಲಿ ಗಾಂಧಿ-ಗೋಡ್ಸೆ ದೃಷ್ಟಿಕೋನದ ನಡುವೆ ಹೋರಾಟ ನಡೆಯುತ್ತಿದೆ: ಯುರೋಪ್‌ನಲ್ಲಿ ರಾಹುಲ್ ಹೇಳಿಕೆ

- Advertisement -
- Advertisement -

ಭಾರತದಲ್ಲಿ ರಾಜಕೀಯವು ಹೋರಾಟವು ಒಂದು “ಮಹಾತ್ಮ ಗಾಂಧಿಯವರ ದೃಷ್ಟಿಕೋನ” ಮತ್ತು ಅವರ ಹಂತಕ “ನಾಥುರಾಮ್ ಗೋಡ್ಸೆ ಅವರ ದೃಷ್ಟಿಕೋನದ” ನಡುವೆ  ನಡೆಯುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹೇಳಿದ್ದಾರೆ.

ಪ್ರಸ್ತುತ ಯುರೋಪ್‌ ರಾಷ್ಟ್ರಗಳ ಪ್ರವಾಸದಲ್ಲಿರುವ ರಾಹುಲ್‌ ಗಾಂಧಿ, ದೇಶದಲ್ಲಿ ಒಡಕು ಮೂಡಿಸುತ್ತಿದ್ದಾರೆ ಮತ್ತು ಬಂಡವಾಳಶಾಹಿ ಹಿತಾಸಕ್ತಿಗಳಿಗೆ ಆಶ್ರಯ ನೀಡುತ್ತಿದ್ದಾರೆಂದು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸೆಪ್ಟೆಂಬರ್ 8 ರಂದು ಬ್ರಸೆಲ್ಸ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಯುರೋಪಿಯನ್ ಸಂಸದರೊಂದಿಗಿನ ತಮ್ಮ ಸಭೆಯ ಕುರಿತು ಮಾಹಿತಿ ನೀಡಿದ್ದು, ಸಭೆಯಲ್ಲಿ ಭಾರತದ ಪ್ರಜಾಪ್ರಭುತ್ವವು ಪ್ರಸ್ತುತ ಆರ್ಥಿಕ ಮತ್ತು ಸಾಮಾಜಿಕ ರಂಗಗಳಲ್ಲಿ ಎದುರಿಸುತ್ತಿರುವ ಸವಾಲುಗಳನ್ನು ಚರ್ಚಿಸಲಾಗಿದೆ . ಭಾರತ ಎದುರಿಸುತ್ತಿರುವ ಆರ್ಥಿಕ ಸವಾಲುಗಳು, ಇತರ ಸವಾಲುಗಳು, ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲಿನ ಸಾಮಾನ್ಯ ರೀತಿಯ ದಾಳಿ ಬಗ್ಗೆ ಅವರಿಗೆ ಅರಿವು ನೀಡಿರುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ.

ಎಲ್ಲರಿಗೂ ತಿಳಿದಿರುವಂತೆ ನಮ್ಮ ದೇಶದ ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲೆ ಪೂರ್ಣ ಪ್ರಮಾಣದ ಆಕ್ರಮಣ ನಡೆದಿದೆ  ಮತ್ತು  ಅಲ್ಪಸಂಖ್ಯಾತ , ದಲಿತ ಸಮುದಾಯಗಳು, ಬುಡಕಟ್ಟು, ಕೆಳ ಜಾತಿಯ ಸಮುದಾಯಗಳು ದಾಳಿಗೆ ಒಳಗಾಗಿದ್ದಾರೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ನಮ್ಮ ದೇಶದ ಸ್ವರೂಪವನ್ನು ಬದಲಾಯಿಸುವ ಪ್ರಯತ್ನ ನಡೆಯುತ್ತಿದೆ. ಸಂವಿಧಾನದಲ್ಲಿ ನಮ್ಮ ದೇಶವನ್ನು ರಾಜ್ಯಗಳ ಒಕ್ಕೂಟ ಎಂದು ವಿವರಿಸಲಾಗಿದೆ ಮತ್ತು ನಮ್ಮ ಒಕ್ಕೂಟದ ಅತ್ಯಂತ ಮುಖ್ಯ ಅಂಶವೆಂದರೆ ನಮ್ಮ ಒಕ್ಕೂಟದ ಸದಸ್ಯರ ನಡುವಿನ ಸಂಭಾಷಣೆಯಾಗಿದೆ. ಆದರೆ ಈಗ ಪರ್ಯಾಯ ದೃಷ್ಟಿ ಇದೆ, ಅದು ಬಿಜೆಪಿ ದೃಷ್ಟಿಕೋನವಾಗಿದೆ, ಇದು ಅಧಿಕಾರವನ್ನು ಕೇಂದ್ರೀಕರಿಸುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದ್ದಾರೆ.

ಪರ್ಯಾಯ ದೃಷ್ಟಿ ಕೋನವು  ಸಂಪತ್ತು ಕೇಂದ್ರೀಕೃತವಾಗಬೇಕು ಮತ್ತು ಒಕ್ಕೂಟದ ಸದಸ್ಯರ ನಡುವಿನ ಸಂಭಾಷಣೆಯನ್ನು ದಮನ ಮಾಡಬೇಕು ಎಂದು ಹೇಳುತ್ತದೆ. ಭಾರತದಲ್ಲಿರುವುದು ಎರಡು ದೃಷ್ಟಿಕೋನಗಳ ನಡುವಿನ ಹೋರಾಟವಾಗಿದೆ. ಒಂದು ಮಹಾತ್ಮಾ ಗಾಂಧಿಯವರ ದೃಷ್ಟಿ ಮತ್ತು ಇನ್ನೊಂದು ನಾಥೂರಾಂ ಗೋಡ್ಸೆ ಅವರ ದೃಷ್ಟಿಕೋನವಾಗಿದೆ. ನಾಥೂರಾಂ ಗೋಡ್ಸೆ, ಗಾಂಧೀಜಿಯನ್ನು ಹತ್ಯೆ ಮಾಡಿದ ವ್ಯಕ್ತಿ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಭಾರತದಲ್ಲಿ ನಾವು ಮಾಡುತ್ತಿರುವುದು ಪ್ರಜಾಸತ್ತಾತ್ಮಕ ಹೋರಾಟ ಮತ್ತು ಇದು ನಮ್ಮ ಜವಾಬ್ದಾರಿಯಾಗಿದೆ. ನಮ್ಮ ಸಂಸ್ಥೆಗಳ ಮೇಲೆ ಮತ್ತು ನಮ್ಮ ಸ್ವಾತಂತ್ರ್ಯದ ಮೇಲೆ ಆಕ್ರಮಣವನ್ನು ನಿಲ್ಲಿಸುತ್ತೇವೆ ಎಂಬ ಭರವಸೆಯನ್ನು ಪ್ರತಿಪಕ್ಷಗಳು ನೀಡುತ್ತದೆ  ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಯುರೋಪ್‌ನಲ್ಲಿರುವ ಭಾರತೀಯರನ್ನು ಭೇಟಿ ಮಾಡಲು ಮತ್ತು ಅವರು ಭಾರತವನ್ನು ಹೇಗೆ ನೋಡುತ್ತಾರೆ ಮತ್ತು ಭವಿಷ್ಯದಲ್ಲಿ ಏನು ಮಾಡಬೇಕೆಂದು ಅರ್ಥೈಸಲು ಬಂದಿದ್ದೇನೆ. ನಾನು ಸಾವಿರಾರು ಯುವಕರನ್ನು ಭೇಟಿಯಾಗಿದ್ದೇನೆ. ಅವರು ಹೇಳಿದ ಮೂರು ವಿಷಯಗಳೆಂದರೆ, ನಿರುದ್ಯೋಗ, ಬಡತನದ ಮಟ್ಟದಲ್ಲಿ ಭಾರಿ ಹೆಚ್ಚಳ ಮತ್ತು ಸಂಪೂರ್ಣವಾಗಿ ಅಸಮಾನ ಆದಾಯ ಹಂಚಿಕೆಗಳಾಗಿದೆ. ಇದರಿಂದಾಗಿ ಕೆಲ ಜನರು  ಹೆಚ್ಚು ಶ್ರೀಮಂತರಾಗುತ್ತಾರೆ ಮತ್ತು ಹೆಚ್ಚಿನ ಜನರು ಮತ್ತೆ ಬಡತನಕ್ಕೆ ತಳ್ಳಲ್ಪಡತ್ತಾರೆ ಎಂದು ಹೇಳಿದ್ದಾರೆ.

ಬೆಲೆಗಳ ಏರಿಕೆ ಮತ್ತು ಹಣದುಬ್ಬರ ಇವೆ. ನಿಜವಾದ ಸಂಗತಿಯೆಂದರೆ ಭಾರತವು ಕಳೆದ 40 ವರ್ಷಗಳಲ್ಲಿ ಅತಿ ಹೆಚ್ಚು ನಿರುದ್ಯೋಗವನ್ನು ಹೊಂದಿದೆ. ಆರ್ಥಿಕ ನೀತಿ ತಪ್ಪಾಗಿದೆ. ಸರ್ಕಾರಕ್ಕೆ ಸಾಕಷ್ಟು ಮಾಧ್ಯಮ ಬೆಂಬಲವಿದೆ. ಆದ್ದರಿಂದ ಆ ರೀತಿಯ ವಿಷಯಗಳು ಹೊರಬರುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಜಿ20 ಶೃಂಗಸಭೆಯ ಔತಣ ಕೂಟಕ್ಕೆ ಖರ್ಗೆಗಿಲ್ಲ ಆಹ್ವಾನ 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...