Homeಕರ್ನಾಟಕಬೆಳಗಾವಿ: ನಿಜಗುಣಾನಂದ ಸ್ವಾಮೀಜಿಗೆ ಹಿಂದುತ್ವವಾದಿಗಳಿಂದ ಕೊಲೆ ಬೆದರಿಕೆ ಪತ್ರ

ಬೆಳಗಾವಿ: ನಿಜಗುಣಾನಂದ ಸ್ವಾಮೀಜಿಗೆ ಹಿಂದುತ್ವವಾದಿಗಳಿಂದ ಕೊಲೆ ಬೆದರಿಕೆ ಪತ್ರ

- Advertisement -
- Advertisement -

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಅವರಿಗೆ ಅನಾಮಿಕನಿಂದ ಕೊಲೆ ಬೆದರಿಕೆ ಪತ್ರ ಬಂದಿದೆ. ಕೊಲೆ ಬೆದರಿಕೆ ಪತ್ರ ಆಗಸ್ಟ್- 8ರಂದೇ ಈ ಪತ್ರ ಬಂದಿದ್ದು ವಿಷಯ ತಡವಾಗಿ ಬಹಿರಂಗವಾಗಿದೆ.

ಈ ಬೆದರಿಕೆ ಪತ್ರದಲ್ಲಿ ”2020ರಲ್ಲಿ ನಿನ್ನ ಹತ್ಯೆ ತಪ್ಪಿರಬಹುದು, 2023ರಲ್ಲಿ ತಪ್ಪುವುದಿಲ್ಲ. ನಿನ್ನ ಪಾಪದ ಕೊಡ ತುಂಬಿದೆ, ಬೇಗ ನಿನ್ನ ತಿಥಿ ಬಗ್ಗೆ ಭಕ್ತರಿಗೆ ಹೇಳು. ನಮ್ಮ ಧರ್ಮದ ದೇವತೆಗಳನ್ನು ನಿಂದಿಸುವ ನಿನ್ನ ಘೋರ ಹತ್ಯೆ ಆಗುತ್ತೆ. ನಿನ್ನ ಅಂತಿಮ ದಿನಗಳು ಆರಂಭವಾಗಿವೆ. ಇನ್ನು ದಿನಗಳನ್ನು ಎಣಿಸು” ಎಂದು ಪೋಸ್ಟ್ ಮೂಲಕ ಜೀವ ಬದರಿಕೆ ಪತ್ರ ಮಠಕ್ಕೆ ಬಂದಿದೆ. ತಮಗೆ ಬೆದರಿಕೆ ಪತ್ರ ಬಂದಿರುವ ಕುರಿತು ಶ್ರೀಗಳು ತಮ್ಮ ಭಕ್ತರಿಗೆ ವಿಷಯ ತಿಳಿಸಿದ್ದಾರೆ.

”ನಮ್ಮ ಧರ್ಮದೇವತೆಗಳನ್ನು ನಿಂದಿಸುವ ನಿನಗೆ ಘೋರವಾದ ಹತ್ಯೆ ಬರಲಿದೆ” ಎಂದು ಪತ್ರದಲ್ಲಿ ಬರೆಯಲಾಗಿದೆ. ಕೊಣೆಯಲ್ಲಿ ”ಓಂ ಶ್ರೀ ಕಾಳಿಕಾದೇವಿ ನಮಃ” ”ಸಹಿಷ್ಣು ಹಿಂದೂ” ಎಂದು ಬರೆಯಲಾಗಿದೆ.

2020ರಲ್ಲಿ ಹತ್ಯೆ ಮಾಡುವುದಾಗಿ ಸ್ವಾಮೀಜಿಗೆ ಜೀವ ಬೆದರಿಕೆ ಪತ್ರವೊಂದು ಬಂದಿತ್ತು. ಇದೀಗ ಮತ್ತೆ ಜೀವ ಬೆದರಿಕೆ ಪತ್ರ ಬಂದಿದ್ದು, ಈವರೆಗೂ 5ಕ್ಕೂ ಹೆಚ್ಚು ಬಾರಿ ಶ್ರೀಗಳಿಗೆ ಜೀವ ಬೆದರಿಕೆ ಪತ್ರ ಬರೆದಿದ್ದಾರೆ. ತಮ್ಮ ಖಡಕ್ ಮಾತುಗಳಿಂದಲೇ ರಾಜ್ಯದಲ್ಲಿ ಖ್ಯಾತಿಗಳಿಸಿರುವ ನಿಜಗುಣಾನಂದ ಸ್ವಾಮೀಜಿ ಪ್ರಮುಖ ಲಿಂಗಾಯತ ಸ್ವಾಮೀಜಿಗಳಲ್ಲಿ ಒಬ್ಬರು. ದಶಕಗಳಿಂದ ಬಸವಣ್ಣನವರ ವಿಚಾರಧಾರೆಯ ಪ್ರಚಾರಕರಾಗಿದ್ದಾರೆ. ತಮ್ಮ ವಿಚಾರಗಳನ್ನು ಬಿತ್ತುತ್ತಾ ಬಂದಿದ್ದಾರೆ. ಮೂರ್ತಿ ಪೂಜೆ, ಮೌಢ್ಯ ವಿರೋಧಿ ವಿಚಾರಗಳನ್ನು ಅವರ ಪ್ರವಚನದಲ್ಲಿ ಕಾಣಬಹುದಾಗಿದೆ.

ಪತ್ರದಲ್ಲೇನಿದೆ?

”ನಿಜಗುಣಾನಂದ ಸ್ವಾಮೀಜಿ ನಿನ್ನ ಸಾವು 2020ರಲ್ಲಿ ತಪ್ಪಿರಬಹುದು. 2023ರಲ್ಲಿ ತಪ್ಪುವುದಿಲ್ಲ. ನಿನ್ನ ಪಾಪದ ಮಾತಿನ ಕೊಡ ತುಂಬಿದೆ. ಆದಷ್ಟು ಬೇಗ ನಿನ್ನ ಭಕ್ತಾದಿಗಳಿಗೆ ನಿನ್ನ ತಿಥಿ ಬಗ್ಗೆ ಹೇಳು. ನಮ್ಮಧರ್ಮದೇವತೆಗಳನ್ನು ನಿಂದಿಸುವ ನಿನಗೆ ಘೋರವಾದ ಹತ್ಯೆಯೇ ಬರುತ್ತದೆ. ನಿನ್ನ ಅಂತಿಮ ದಿನಗಳು ಪ್ರಾರಂಭವಾಗಿವೆ. ದಿನಗಳನ್ನು ಎಣಿಸು. ಓಂ ಶ್ರೀ ಕಾಳಿಕಾದೇವಿ ನಮಃ, ಓಂ ಶ್ರೀ ಕಾಳಿಕಾದೇವಿ ನಮಃ” ಎಂದು ಬಿಳಿ ಹಾಳೆಯಲ್ಲಿ ಬರೆದು, ಅದನ್ನು ಪ್ಯಾಕೇಟ್‌ನಲ್ಲಿಟ್ಟು ಕಳಿಸಲಾಗಿದೆ.

ನಿಜಗುಣಾನಂದ ಶ್ರೀಗಳು ದಶಕಗಳಿಂದ ಬಸವಾದಿ ಶರಣ ತತ್ವಗಳನ್ನು ಪ್ರಚುರಪಡಿಸುವಲ್ಲಿ ನಿರತರಾಗಿದ್ದಾರೆ. ಬೈಲೂರಿನ ಮಠವನ್ನು ಕೇಂದ್ರವಾಗಿಸಿಕೊಂಡು ತಮ್ಮ ವಿಚಾರಗಳನ್ನು ಬಿತ್ತುತ್ತಿದ್ದಾರೆ. ಅವರ ಪ್ರವಚನದಲ್ಲಿ ಮೌಡ್ಯ ವಿರೋಧಿ, ಕಂದಾಚಾರ ವಿರೋಧಿ, ಮೂರ್ತಿ ಪೂಜೆಯ ವಿರುದ್ಧ ಟೀಕೆಗಳು ಸಾಮಾನ್ಯವಾಗಿವೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿರುವ ನಿಜಗುಣಾನಂದ ಸ್ವಾಮೀಜಿ, ”ಕಳೆದ 15 ದಿನಗಳ ಹಿಂದೆ ಕೊಲೆ ಬೆದರಿಕೆ ಪತ್ರ ಬಂದಿದೆ. ಒಂದೇ ತರಹ ಬರಹದ ಪತ್ರಗಳು ಬೇರೆ ಬೇರೆ ಭಾಗಗಳಿಂದ ಬರುತ್ತಿವೆ. ಈಗಾಗಲೇ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇನೆ. ಕಳೆದ ಐದು ವರ್ಷಗಳಿಂದ ಸತತವಾಗಿ ಕೊಲೆ ಬೆದರಿಕೆ ಪತ್ರಗಳು ಬರುತ್ತಿವೆ. ಪತ್ರ ಬರೆಯುವವರ ಹಾಗೂ ನನ್ನ ಮಧ್ಯೆ ಯಾವುದೇ ದ್ವೇಷ ಇಲ್ಲ. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿವೆ. ಇಂತಹ ಕೊಲೆ ಬೆದರಿಕೆ ಪತ್ರಗಳನ್ನು ನಾನು ಪ್ರೇಮಪತ್ರಗಳೆಂದು ಭಾವಿಸಿದ್ದೇನೆ. ನನಗೆ ಸಾವಿನ ಬಗ್ಗೆ ಭಯವಿಲ್ಲ, ಸೇವೆ ಮಾಡುವುದು ನಿಲ್ಲುತ್ತದೆ ಎನ್ನುವ ಕೊರಗಷ್ಟೇ. ನಾನು ಸಮಾಜದ ಮಗ. ಈ ರೀತಿಯ ಪತ್ರಗಳಿಂದ ಭಕ್ತರಲ್ಲಿ ಆತಂಕ ಸಹಜ. ಪೊಲೀಸರು, ಸರ್ಕಾರ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬಲಪಂಥೀಯ ಸಂಘಟನೆಯಿಂದ ಜೀವಬೆದರಿಕೆ: ವಿಚಾರವಾದಿಗಳಿಗೆ ರಕ್ಷಣೆ ಒದಗಿಸಲು ಮುಂದಾದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...