Homeಕರ್ನಾಟಕ'ಬೆಂಗಳೂರು ಬಂದ್‌' ವಾಪಸ್‌ ಪಡೆದ ಖಾಸಗಿ ವಾಹನ ಸಂಘಟನೆಗಳು

‘ಬೆಂಗಳೂರು ಬಂದ್‌’ ವಾಪಸ್‌ ಪಡೆದ ಖಾಸಗಿ ವಾಹನ ಸಂಘಟನೆಗಳು

- Advertisement -
- Advertisement -

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 40ಕ್ಕೂ ಹೆಚ್ಚು ಖಾಸಗಿ ಸಾರಿಗೆ ಸಂಘಟನೆಗಳು ಇಂದು (ಸೋಮವಾರ) ಬೆಂಗಳೂರು ಬಂದ್​ಗೆ ಕರೆ ಕೊಟ್ಟಿದ್ದವು. ಇದೀಗ ಬೆಂಗಳೂರು ಬಂದ್‌ ವಾಪಸ್‌ ಪಡೆಯಲಾಗಿದೆ.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನಗರದ ಫ್ರೀಡಂಪಾರ್ಕ್‌ನಲ್ಲಿ ನಡೆಯುತ್ತಿದ್ದ ಖಾಸಗಿ ವಾಹನ ಸಂಘಟನೆಗಳ ಸದಸ್ಯರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಪ್ರತಿಭಟನಾಕಾರರ ಭರವಸೆಗಳನ್ನು ಈಡೇರಿಸುವ ಭರವಸೆ ನೀಡಿದರು. ಈ ಹಿನ್ನೆಲೆ ಖಾಸಗಿ ಸಾರಿಗೆ ಒಕ್ಕೂಟ ಬಂದ್‌ ಕೈ ಬಿಟ್ಟಿದೆ.

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ರಾಮಲಿಂಗಾರೆಡ್ಡಿ ಅವರು, ಸಂಘಟನೆಗಳ ಬೇಡಿಕೆ ಆಲಿಸಿ ಬಳಿಕ ಮಾತನಾಡಿದ್ದು, ”ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟಗಳ ಬಹುತೇಕ ಬೇಡಿಕೆ ಈಡೇರಿಸುತ್ತೇವೆ” ಎಂದು ಹೇಳಿದ್ದಾರೆ.

”ಚಾಲಕರ ಅಭಿವೃದ್ಧಿ ನಿಗಮ ಸ್ಥಾಪನೆ ಬಗ್ಗೆ ಸಿಎಂ ಜತೆ ಚರ್ಚೆ ಮಾಡಿದ್ದೇನೆ. ನಿಗಮ ಮಂಡಳಿಯನ್ನು ಮಾಡೇ ಮಾಡುತ್ತೇವೆ. ಅವರ ಸಮಸ್ಯೆಗಳು ಈ ಸರ್ಕಾರ ಬಂದಾಗಿನಿಂದ ಇರೋದಲ್ಲ ಹಿಂದಿನಿಂದಲೂ ಇದೆ. ಆದರೆ ಶಕ್ತಿ ಯೋಜನೆಯಿಂದ ಸಮಸ್ಯೆಯಾಗಿದೆ ಎಂದು ಅವರು ಹೇಳುತ್ತಿದ್ದಾರೆ. ಓಲಾ-ಊಬರ್ ಕುರಿತ 4 ಕೇಸ್‌ಗಳು ಕೋರ್ಟ್‌ನಲ್ಲಿವೆ. ವಕೀಲರೊಂದಿಗೆ ಈ ಬಗ್ಗೆ ಚರ್ಚಿಸಿ ಬೇಗ ಬಗೆಹರಿಸುವ ಪ್ರಯತ್ನ ಮಾಡಲಾಗುವುದು. ಇದರ ಜೊತೆ ಬೈಕ್ ಟ್ಯಾಕ್ಸಿ ಕೇಸ್ ಸಹ ಕೋರ್ಟ್‌ನಲ್ಲಿದೆ. ಹೀಗಾಗಿ ಈ ಕೇಸ್‌ಗಳ ವೆಕೇಟ್ ಮಾಡಲು ವಕೀಲರ ಬಳಿ ಮಾತನಾಡಲಾಗುವುದು” ಎಂದು ತಿಳಿಸಿದರು.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಖಾಸಗಿ ಸಾರಿಗೆ ಒಕ್ಕೂಟದ ಪ್ರಮುಖ ನಟರಾಜ್ ಶರ್ಮಾ, ”ನಾವು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಸ್ವತಃ ಸಾರಿಗೆ ಸಚಿವರೇ ಆಗಮಿಸಿ ನಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾರೆ. ನಾಳೆಯಿಂದಲೇ ನಮ್ಮ ಬೇಡಿಕೆಗಳನ್ನು ಈಡೇರಿಸಲು ಮುಂದಾಗುವುದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾವು ಬಂದ್ ವಾಪಸ್ ಪಡೆದುಕೊಂಡಿದ್ದೇವೆ” ಎಂದು ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ...

0
ರಾಜಸ್ಥಾನದ ಬಿಜೆಪಿ ಸರಕಾರ ಅಧಿಕಾರಕ್ಕೇರಿದ ಆರು ತಿಂಗಳಲ್ಲೇ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಮುಖ್ಯಮಂತ್ರಿಯ ಅಧೀನದ ಇಲಾಖೆಯಲ್ಲಿನ ವಸತಿ ಯೋಜನೆಯಲ್ಲಿನ ಲೋಪದೋಷವನ್ನು ಕ್ಯಾಬಿನೆಟ್ ಸಚಿವರೋರ್ವರು ಬಹಿರಂಗಪಡಿಸಿದ್ದು, ಇದರಿಂದ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವಾಗಿದೆ...