HomeUncategorizedಕೇಂದ್ರ ಸಚಿವರನ್ನು ಪಕ್ಷದ ಕಚೇರಿಯಲ್ಲಿ ಕೂಡಿ ಹಾಕಿದ ಬಿಜೆಪಿ ಕಾರ್ಯಕರ್ತರು

ಕೇಂದ್ರ ಸಚಿವರನ್ನು ಪಕ್ಷದ ಕಚೇರಿಯಲ್ಲಿ ಕೂಡಿ ಹಾಕಿದ ಬಿಜೆಪಿ ಕಾರ್ಯಕರ್ತರು

- Advertisement -
- Advertisement -

ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಸುಭಾಸ್ ಸರ್ಕಾರ್ ಅವರನ್ನು ಪಶ್ಚಿಮ ಬಂಗಾಳದ ಬಂಕುರಾದಲ್ಲಿನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಕೂಡಿ ಹಾಕಿರುವ ಘಟನೆ ನಡೆದಿದ್ದು,  ಸಚಿವರು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ.

ಬಂಕುರಾ ಕ್ಷೇತ್ರದ ಸಂಸದರಾಗಿರುವ ಸರ್ಕಾರ್ ಅವರು ಬಿಜೆಪಿ ಕಚೇರಿಯಲ್ಲಿಇರುವಾಗ ಘೋಷಣೆ ಕೂಗುತ್ತಾ ಬಂದ ಬಿಜೆಪಿ ಕಾರ್ಯಕರ್ತರ ಗುಂಪು  ಜಿಲ್ಲಾ ಕಚೇರಿಗೆ ನುಗ್ಗಿ ಕಚೇರಿಗೆ ಬೀಗ ಹಾಕಿದ್ದಾರೆ. ಸರ್ಕಾರ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಪ್ರಾಮುಖ್ಯತೆ ನೀಡುತ್ತಿಲ್ಲ ಮತ್ತು ತನಗೆ ಆಪ್ತರಾಗಿರುವವರನ್ನು ಜಿಲ್ಲಾ ಸಮಿತಿಯ ಸದಸ್ಯರನ್ನಾಗಿ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರಲ್ಲಿ ಒಬ್ಬರಾದ ಮೋಹಿತ್ ಶರ್ಮಾ ಆರೋಪಿಸಿದ್ದಾರೆ.

ಬಂಕುರಾದ ಅವರ ಸ್ವಕ್ಷೇತ್ರದಲ್ಲಿ ಈ ಘಟನೆ ನಡೆದಿದ್ದು, ಕ್ಷೇತ್ರದಲ್ಲಿನ ಬಿಜೆಪಿ ಕಾರ್ಯಕರ್ತರ ಆಂತರಿಕ ಕಚ್ಚಾಟ ಬಯಲಾಗಿದೆ. ಬಂಕುರಾ ಪೊಲೀಸರು ಸ್ಥಳಕ್ಕೆ ಬಂದು ಸಚಿವರನ್ನು ರಕ್ಷಿಸಿದ್ದಾರೆ.

ಘಟನೆಗೆ ಸಂಘಟನಾತ್ಮಕ  ವೈಷಮ್ಯ ಮತ್ತು ಪಕ್ಷದೊಳಗಿನ ಬಣ ರಾಜಕೀಯ ಕಾರಣ ಎಂದು ಪಕ್ಷದ ಮೂಲಗಳು ತಿಳಿಸಿವೆ. ಬಿಜೆಪಿಯ ಎರಡು ಗುಂಪುಗಳ ಕಾರ್ಯಕರ್ತರ ಮಾತಿನ ಚಕಮಕಿಯಿಂದಾಗಿ ಸ್ಥಳದಲ್ಲಿ ಭಾರೀ ಗೊಂದಲ ಉಂಟಾಗಿತ್ತು.

ಪೊಲೀಸರು ರಕ್ಷಿಸಿದ ನಂತರ ಸರ್ಕಾರ್ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಸರ್ಕಾರ್ ಅವರನ್ನು ಬಿಜೆಪಿ ಪಕ್ಷದ ಕಾರ್ಯಕರ್ತರು ಅವರ ಸ್ವಯಂ ಕ್ಷೇತ್ರದ ಪಕ್ಷದ ಕಚೇರಿಯಲ್ಲಿ ಕೂಡಿ ಹಾಕಿದ್ದರು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇದನ್ನು ತಿಳಿಸಿ: ವಂಚನೆ ಪ್ರಕರಣ: ಪ್ರಚೋದನಾಕಾರಿ ಭಾಷಣಗಾರ್ತಿ ಚೈತ್ರಾ ಕುಂದಾಪುರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...