Homeಮುಖಪುಟಕೊಪ್ಪಳ: ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಅಮಿತ್‌‌ ಶಾ ಹೆಸರಿನಲ್ಲಿ ವಂಚನೆ

ಕೊಪ್ಪಳ: ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಅಮಿತ್‌‌ ಶಾ ಹೆಸರಿನಲ್ಲಿ ವಂಚನೆ

- Advertisement -
- Advertisement -

ಬೈಂದೂರಿನ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ 7 ಕೋಟಿ ವಂಚನೆ ಮಾಡಿದ ಚೈತ್ರಾ ಕುಂದಾಪುರ ಮತ್ತು ಟೀಂನ್ನು ಸಿಸಿಬಿ ಪೊಲೀಸರು ಬಂಧಿಸಿದ ಬೆನ್ನಲ್ಲೇ ಮತ್ತೊಂದು ಟಿಕೆಟ್‌ಗಾಗಿ ನಡೆದ ಡೀಲ್‌ ಬಹಿರಂಗವಾಗಿದೆ.

ಕೊಪ್ಪಳದ ಕನಕಗಿರಿ ಮೀಸಲು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಮಾಡಿದ ಆರೋಪದಡಿ ಮೂವರ ವಿರುದ್ಧ ಇಲ್ಲಿನ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ತಿಮ್ಮಾರೆಡ್ಡಿ ಎಂಬುವರು ಜುಲೈ 19ರಂದು ಈ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ. ತಿಮ್ಮಾರೆಡ್ಡಿ ಪತ್ನಿ ಗಾಯತ್ರಿಗೆ ಟಿಕೆಟ್‌ ಕೊಡಿಸುವುದಾಗಿ 21ಲಕ್ಷ ರೂ.ನಗದು ವಂಚನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ತಿಮ್ಮಾರೆಡ್ಡಿಗೆ, ಬೆಂಗಳೂರಿನ ಜೀತು ಎಂಬಾತನ ಮೂಲಕ ದೆಹಲಿ ಮೂಲದ ವಿಶಾಲನಾಗ್ ಎಂಬವ ಪರಿಚಯವಾಗಿದ್ದ. ವಿಶಾಲನಾಗ್ ತನ್ನನ್ನು ಬಿಜೆಪಿಯ ಕೇಂದ್ರ ಚುನಾವಣಾ ಸರ್ವೆ ತಂಡದ ಮುಖಸ್ಥ ಎಂದು ಪರಿಚಯ ಮಾಡಿಕೊಂಡಿದ್ದಾನೆ.

ಬಿಜೆಪಿ ಟಿಕೆಟ್ ನೀಡಲು ಅಮಿತ್ ಶಾ ಮತ್ತು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನಮಗೆ ಸರ್ವೆ ಮಾಡಲು ಹೇಳಿದ್ದಾರೆ. ಸರ್ವೆಯಲ್ಲಿ ನಿಮ್ಮ ಪತ್ನಿಯ ಹೆಸರು ಎರಡನೇ ಸ್ಥಾನದಲ್ಲಿದೆ. ಮೊದಲ ಸ್ಥಾನಕ್ಕೆ ತಂದು ಟಿಕೆಟ್ ಕೊಡಿಸುತ್ತೇನೆ. ಇದಕ್ಕಾಗಿ ನಮ್ಮ ಸರ್ವೆ ತಂಡಕ್ಕೆ ಹಣ ನೀಡಬೇಕು ಎಂದಿದ್ದ. ಇದರಂತೆ ಈತನ ಮತು ನಂಬಿ 21 ಲಕ್ಷ ಹಣವನ್ನು ತಿಮ್ಮಾರೆಡ್ಡಿ ನೀಡಿದ್ದರು.

ಈ ಸಂಬಂಧ ವಿಶಾಲನಾಗ್, ಗೌರವ್ ಮತ್ತು ಜೀತು ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಕುರಿತು ಮಾತನಾಡಿದ ತಿಮ್ಮಾರೆಡ್ಡಿ, ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ವಿಶಾಲನಾಗ್‍ಗೆ ಹಣವನ್ನು ನೀಡಿದ್ದೆ. ವಿಶಾಲನಾಗ್ ಟಿಕೆಟ್‌ ಕೊಡಿಸುತ್ತೇನೆಂದು ನಾಲ್ಕು ದಿನ ದೆಹಲಿಗೂ ಕರೆಸಿಕೊಂಡಿದ್ದ. ಅಂತಿಮವಾಗಿ ಟಿಕೆಟ್ ಘೋಷಣೆಯಾದಾಗ ನನ್ನ ಪತ್ನಿಯ ಹೆಸರು ಇರಲಿಲ್ಲ. ಈ ಬಗ್ಗೆ ಕೇಳಲು ಕರೆ ಮಾಡಿದರೆ ಸ್ವೀಕರಿಸಲಿಲ್ಲ. ಬಳಿಕ ಕೆಲ ದಿನ ಬಿಟ್ಟು ಹಣ ಕೊಡುತ್ತೇನೆ ಎಂದು ಹೇಳಿದ್ದಾನೆ. ಆದರೆ ಇದುವರೆಗೂ ಹಣ ನೀಡಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: Social darvinismಗೆ ನಾವು ಅವಕಾಶ ಕೊಡಬಾರದು: ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...