Homeಮುಖಪುಟಭಗವದ್ಗೀತೆ, ಕುರಾನ್, ಬೈಬಲ್‌ಗಿಂತ ನಮಗೆ ಸಂವಿಧಾನವೇ ಹೆಚ್ಚು: ಲೋಕಸಭೆಯಲ್ಲಿ ಅಧೀರ್ ಚೌಧರಿ

ಭಗವದ್ಗೀತೆ, ಕುರಾನ್, ಬೈಬಲ್‌ಗಿಂತ ನಮಗೆ ಸಂವಿಧಾನವೇ ಹೆಚ್ಚು: ಲೋಕಸಭೆಯಲ್ಲಿ ಅಧೀರ್ ಚೌಧರಿ

- Advertisement -
- Advertisement -

‘INDIA’ ಮತ್ತು ‘ಭಾರತ್’ ನಡುವೆ ಅನಗತ್ಯ ಬಿರುಕು ಮೂಡಿಸಲು ಪ್ರಯತ್ನಿಸಬಾರದು, ಏಕೆಂದರೆ ಭಾರತದ ಸಂವಿಧಾನದ ಪ್ರಕಾರ ಎರಡಕ್ಕೂ ಯಾವುದೇ ವ್ಯತ್ಯಾಸವಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಮಂಗಳವಾರ ಹೇಳಿದ್ದಾರೆ.

ಐದು ದಿನಗಳ ವಿಶೇಷ ಅಧಿವೇಶನದ ಎರಡನೇ ದಿನದಂದು ಲೋಕಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಚೌಧರಿ, ”ಸಂವಿಧಾನದ ಮುನ್ನುಡಿಯನ್ನು ಓದುತ್ತಾ, ಇದು ನಮಗೆ ಭಗವದ್ಗೀತೆ ಕುರಾನ್ ಮತ್ತು ಬೈಬಲ್‌ನಂತಹ ಪವಿತ್ರ ಗ್ರಂಥಗಳಿಗಿಂತ ಕಡಿಮೆಯಿಲ್ಲ” ಎಂದು ಹೇಳಿದರು.

”ಈ ಸಂವಿಧಾನವು ನಮಗೆ ಗೀತಾ, ಕುರಾನ್ ಮತ್ತು ಬೈಬಲ್‌ಗಿಂತ ಕಡಿಮೆಯಿಲ್ಲ. 1ನೇ ವಿಧಿ ಹೇಳುತ್ತದೆ, INDIA, ಅದು ಭಾರತ, ರಾಜ್ಯಗಳ ಒಕ್ಕೂಟವಾಗಿರುತ್ತದೆ…” ಅಂದರೆ INDIA ಮತ್ತು ಭಾರತಕ್ಕೆ ಯಾವುದೇ ವ್ಯತ್ಯಾಸವಿಲ್ಲ. ಎರಡರ ನಡುವೆ ಅನಗತ್ಯವಾಗಿ ಬಿರುಕು ಮೂಡಿಸಲು ಪ್ರಯತ್ನಿಸದಿದ್ದರೆ, ಅದು ಉತ್ತಮವಾಗಿರುತ್ತದೆ” ಎಂದು ಹೇಳಿದರು.

ಸಾಮಾನ್ಯವಾಗಿ ‘ಇಂಡಿಯಾದ ರಾಷ್ಟ್ರಪತಿ’ ಎಂದು ಬಳಸಲಾಗುತ್ತದೆ. ಆದರೆ G20 ಔತಣಕೂಟದ ಆಹ್ವಾನದಲ್ಲಿ ‘ಭಾರತದ ಅಧ್ಯಕ್ಷ’ ಹೆಸರಿನಲ್ಲಿ ಕಳುಹಿಸಲಾಯಿತು. ಇದು INDIA ಮತ್ತು ಭಾರತ ನಡುವಿನ ರಾಜಕೀಯ ಗದ್ದಲಕ್ಕೆ ಕಾರಣವಾಯಿತು. ಇಂದು ಲೋಕಸಭೆಯಲ್ಲಿ ಈ ವಿಚಾರವನ್ನು ಕಾಂಗ್ರೆಸ್ ನಾಯಕ ಚೌಧರಿ ಪ್ರಸ್ತಾಪಿಸಿದರು. 26 ವಿರೋಧ ಪಕ್ಷಗಳು ಒಗ್ಗೂಡಿ ತನ್ನನ್ನು ತಾನು ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟ (I.N.D.I.A) ಎಂದು ಒfಕೂಟ ರಚನೆ ಮಾಡಿದವು. ಹಾಗಾಗಿ ಈ ‘INDIA’ ಎನ್ನುವ ಹೆಸರಿನ ಮೇಲೆ ಕೇಂದ್ರ ಬಿಜೆಪಿ ದಾಳಿ ನಡೆಸುತ್ತಿದೆ.

ಈ ಮಧ್ಯೆ ‘ನಾರಿ ಶಕ್ತಿ ವಂದನ್ ಅಧಿನಿಯಮ್’ (ಮಹಿಳಾ ಮೀಸಲಾತಿ ಮಸೂದೆ)ಯ ಶ್ರೇಯವನ್ನು ನಮ್ಮದು ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

”ಮಹಿಳಾ ಮೀಸಲಾತಿಯನ್ನು ಪಿಎಂ ರಾಜೀವ್ ಗಾಂಧಿ ಅವರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಂದರು. ಅಂದಿನಿಂದ, ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಮೀಸಲಾತಿ ನೀಡಲು ಕಾಂಗ್ರೆಸ್ ಕಾನೂನು ತರಲು ಪ್ರಯತ್ನಿಸುತ್ತಿದೆ. ಇದು ಕೆಲವೊಮ್ಮೆ ಲೋಕಸಭೆಯಲ್ಲಿ ಅಂಗೀಕಾರವಾಗುತ್ತಿತ್ತು, ಆದರೆ ರಾಜ್ಯಸಭೆಯಲ್ಲಿ ವಿಫಲವಾಗಿದೆ ಮತ್ತು ಪ್ರತಿಯಾಗಿ. ಮನಮೋಹನ್ ಸರ್ಕಾರ ತಂದ ಮಸೂದೆ ಇನ್ನೂ ಸಕ್ರಿಯವಾಗಿದೆ” ಚೌಧರಿ ಪ್ರತಿಪಾದಿಸಿದರು.

ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆ: ಪ್ರಧಾನಿ ಮೋದಿಗೆ ‘ಬೇಷರತ್ ಬೆಂಬಲ’ ನೀಡಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...