Homeಕರ್ನಾಟಕಕಾವೇರಿ ನೀರು ಹಂಚಿಕೆ ವಿವಾದ: ನಾಳೆ ದೆಹಲಿಯಲ್ಲಿ ಮಹತ್ವದ ಸಭೆ

ಕಾವೇರಿ ನೀರು ಹಂಚಿಕೆ ವಿವಾದ: ನಾಳೆ ದೆಹಲಿಯಲ್ಲಿ ಮಹತ್ವದ ಸಭೆ

- Advertisement -
- Advertisement -

ಕಾವೇರಿ ನದಿನೀರು ಹಂಚಿಕೆ ವಿವಾದ, ರಾಜ್ಯದ ಯೋಜನೆಗಳು ಹಾಗೂ ಬರಪರಿಹಾರ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ದೆಹಲಿಯ ತಾಜ್ ಮಾನ್ ಸಿಂಗ್ ಹೋಟೆಲ್‌ನಲ್ಲಿ ನಾಳೆ(ಸೆ.20) ಬೆಳಗ್ಗೆ ಮಹತ್ವದ ಸಭೆ ಆಯೋಜಿಸಲಾಗಿದೆ.

ಸಭೆಯಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರದ ಸಚಿವರುಗಳು, ಲೋಕಸಭಾ ಸದಸ್ಯರು ಮತ್ತು ರಾಜ್ಯಸಭಾ ಸದಸ್ಯರುಗಳು ಭಾಗವಹಿಸಲಿದ್ದಾರೆ.

ಕರ್ನಾಟಕದ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿಬಿ ಜಯಚಂದ್ರ ಅವರು ಈಗಾಗಲೇ ನವದೆಹಲಿಯಲ್ಲಿ ವಾಸ್ತವ್ಯ ಹೊಡಿದ್ದು ನಾಳೆ ನಡೆಯಲಿರುವ ಸಭೆಗೆ ಪೂರ್ವಭಾವಿಯಾಗಿ ಚರ್ಚೆಯನ್ನು ಕೂಡ ಮಾಡುತ್ತಿದ್ದಾರೆ.

ಈ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ
ಡಿ‌‌.ಕೆ ಶಿವಕುಮಾರ್ ಅವರು ಇಂದು ಸಂಜೆ ನವದೆಹಲಿಗೆ ತೆರಳಲಿದ್ದಾರೆ ಎಂದು ಹೇಳಲಾಗಿದೆ.

ಇದನ್ನು ಓದಿ: ವೇತನ ಸಿಗದೆ ಇಡ್ಲಿ ಮಾರಾಟಕ್ಕಿಳಿದ ಚಂದ್ರಯಾನ-3ರ ಲಾಂಚ್‌ಪ್ಯಾಡ್ ನಿರ್ಮಿಸಲು ಸಹಕರಿಸಿದ್ದ ಇಂಜಿನಿಯರ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read