Homeಮುಖಪುಟಕೆನಡಾದಲ್ಲಿನ ಭಾರತೀಯರಿಗೆ ಎಚ್ಚರವಿರುವಂತೆ ಸಲಹೆ ನೀಡಿದ ಕೇಂದ್ರ ಸರಕಾರ

ಕೆನಡಾದಲ್ಲಿನ ಭಾರತೀಯರಿಗೆ ಎಚ್ಚರವಿರುವಂತೆ ಸಲಹೆ ನೀಡಿದ ಕೇಂದ್ರ ಸರಕಾರ

- Advertisement -
- Advertisement -

ಕೆನಡಾದ ಪ್ರಜೆ ಮತ್ತು ಖಲಿಸ್ತಾನ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತ ಸರಕಾರದ ಏಜೆಂಟರ ಕೈವಾಡ ಶಂಕಿಸಿ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಹೌಸ್ ಆಫ್ ಕಾಮನ್ಸ್‌ನಲ್ಲಿ ಮಾತನಾಡಿದ ಬೆನ್ನಲ್ಲೇ ಭಾರತ ಮತ್ತು ಕೆನಡಾ ಸಂಬಂಧಗಳಲ್ಲಿ ಬಿರುಕು ಉಂಟಾಗಿದೆ.

ಇದರ ಬೆನ್ನಲ್ಲೇ ಕೆನಡಾದಲ್ಲಿರುವ ಭಾರತೀಯ ಪ್ರಜೆಗಳು ಮತ್ತು ವಿದ್ಯಾರ್ಥಿಗಳಿಗೆ ಭಾರತ ಸಲಹೆಯನ್ನು ನೀಡಿದೆ.

ಕೆನಡಾದಲ್ಲಿ ಭಾರತ ವಿರೋಧಿ ಚಟುವಟಿಕೆಗಳು ಮತ್ತು ರಾಜಕೀಯವಾಗಿ ಮನ್ನಣೆ ಪಡೆದ ದ್ವೇಷದ ಅಪರಾಧಗಳು ಮತ್ತು ಹಿಂಸಾಚಾರ ಸಾಧ್ಯತೆ ಕಂಡು ಬರುತ್ತಿರುವ ಹಿನ್ನೆಲೆ ಅಲ್ಲಿ ಇರುವ ಎಲ್ಲಾ ಭಾರತೀಯರು ಮತ್ತು ಕೆನಡಾಗೆ ತೆರಳಲು ಇಚ್ಚಿಸುವ ಭಾರತೀಯ ಪ್ರಜೆಗಳು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದ್ದಾರೆ.

ಇತ್ತೀಚೆಗೆ ಕೆನಡಾದಲ್ಲಿ ಭಾರತೀಯ ರಾಜತಾಂತ್ರಿಕ ಅಧಿಕಾರಿಗಳನ್ನು ಮತ್ತು ಭಾರತೀಯರನ್ನು ಗುರಿಯಾಗಿಸಿಕೊಳ್ಳಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ಕೆನಡಾದಲ್ಲಿ ಇಂತಹ ಬೆಳವಣಿಗೆಗಳು ಕಂಡು ಬರುತ್ತಿರುವ ಸ್ಥಳಗಳಿಗೆ ಪ್ರಯಾಣಿಸದಂತೆ ಭಾರತೀಯ ಪ್ರಜೆಗಳಿಗೆ ಸಲಹೆ ನೀಡಲಾಗಿದೆ. ಭಾರತೀಯ ಹೈಕಮಿಷನ್ ಕೆನಡಾದ ಅಧಿಕಾರಿಗಳೊಂದಿಗೆ ಭಾರತೀಯ ಸಮುದಾಯದ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ವಿಚಾರಿಸುತ್ತಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಈ ಮೊದಲು ಖಾಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಗೆ ಸಂಬಂಧಿಸಿದಂತೆ ಉಭಯ ರಾಷ್ಟ್ರಗಳ ನಡುವೆ ನಡೆಯುತ್ತಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೆನಡಾ ಸರ್ಕಾರವು ಭಾರತಕ್ಕೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಸಲಹೆ ನೀಡಿತ್ತು.

ಅನಿವಾರ್ಯವಿಲ್ಲದಿದ್ದರೆ ಭಾರತಕ್ಕೆ ಪ್ರಯಾಣಿಸಬೇಡಿ ಎಂದು ಕೆನಡಾ ತನ್ನ ಪ್ರಜೆಗಳಿಗೆ ಸಲಹೆ ನೀಡಿತ್ತು. ಕುಟುಂಬ, ವ್ಯವಹಾರ ಶೈಕ್ಷಣಿಕ ಉದ್ದೇಶಗಳಿಗೆ ಭಾರತಕ್ಕೆ ಪ್ರಯಾಣಿಸುವ ಬಗ್ಗೆ ನೀವು ಮತ್ತೊಮ್ಮೆ ಯೋಚಿಸಬೇಕು. ನಿಮ್ಮ ಸುರಕ್ಷತೆಗೆ ಮತ್ತು ಭದ್ರತೆಗೆ ಅಪಾಯಬರಬಹುದು. ನೀವು ಈಗಾಗಲೇ ಅಲ್ಲಿದ್ದರೆ, ಅಲ್ಲಿರುವ ಅಗತ್ಯತೆಯ ಬಗ್ಗೆ ಯೋಚಿಸಿ. ಅನಗತ್ಯವಾಗಿ ಅಲ್ಲಿರಬೇಡಿ, ಅಲ್ಲಿಂದ ಹೊರಡಿ ಎಂದು ಮಾರ್ಗ ಸೂಚಿಯಲ್ಲಿ ಹೇಳಲಾಗಿದೆ. ಕೆನಡಾ ಸರ್ಕಾರದ ವೆಬ್ಸೈಟ್ನಲ್ಲಿ ಪ್ರಕಟವಾದ ಸಲಹೆಯು ಭಾರತದಲ್ಲಿ ವಾಸಿಸುವ ಕೆನಡಾದ ಪ್ರಜೆಗಳು ಎಚ್ಚರಿಕೆಯಿಂದಿರುವಂತೆ  ಹೇಳಲಾಗಿತ್ತು.

ಇದನ್ನು ಓದಿ: ನಂ.1 ಬೌಲರ್‌ ಸ್ಥಾನಕ್ಕೆ ಮರಳಿದ ಮೊಹಮ್ಮದ್‌ ಸಿರಾಜ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...