Homeಮುಖಪುಟಬಿಜೆಪಿ ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ತರುವುದಿಲ್ಲ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

ಬಿಜೆಪಿ ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ತರುವುದಿಲ್ಲ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

- Advertisement -
- Advertisement -

ಮಹಿಳಾ ಮೀಸಲಾತಿ ಮಸೂದೆ ಜಾರಿ ಕುರಿತು ಸಂಸತ್ತಿನಲ್ಲಿ ನಡೆಯುತ್ತಿರುವ ಚರ್ಚೆಯ ನಡುವೆಯೇ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮಸೂದೆಯನ್ನು ಜಾರಿಗೆ ತರುವುದಿಲ್ಲ ಮತ್ತು ಅವರು ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಮಾತ್ರ ಅದನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬುಧವಾರ ಹೇಳಿದ್ದಾರೆ.

ಅವರು ಮಸೂದೆಯನ್ನು ಜಾರಿಗೆ ತರುವುದಿಲ್ಲ. ಅವರು ಮಸೂದೆ ಜಾರಿಗೆ ಬಯಸಿದ್ದರೆ ಅದನ್ನು ಮೊದಲೇ    ಮಾಡುತ್ತಿದ್ದರು ಎಂದು ನಿತೀಶ್ ಕುಮಾರ್‌ ಅವರು ಹೇಳಿದ್ದಾರೆ.

ಮಹಿಳಾ ಮೀಸಲಾತಿ ಅಗತ್ಯವಾಗಿದ್ದು, ನಾವು ಮೊದಲಿನಿಂದಲೂ ಅದನ್ನು ಒತ್ತಾಯಿಸುತ್ತಿದ್ದೇವೆ. ಅವರು ಅದನ್ನು ಜಾರಿಗೆ ತರುವುದಿಲ್ಲ. ನಾವು ಜಾತಿ ಆಧಾರಿತ ಜನಗಣತಿ ಮಾಡುವಂತೆ ಹೇಳಿದ್ದೇವೆ, ನಾವು ಇದನ್ನು ಒತ್ತಾಯಿಸಿದ್ದೇವೆ ಎಂದು ಬಿಹಾರ ಸಿಎಂ ಪಾಟ್ನಾದಲ್ಲಿ ಹೇಳಿದರು.

ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಲೋಕಸಭೆಯಲ್ಲಿ ಮಸೂದೆಯನ್ನು ಮಂಡಿಸಿದ್ದು, ಸೆಪ್ಟೆಂಬರ್ 21 ರಂದು ರಾಜ್ಯಸಭೆಯಲ್ಲಿ ಮಸೂದೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ಮಾತನಾಡಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮಸೂದೆಗೆ ಸಂಪೂರ್ಣವಾಗಿ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಸೋನಿಯಾ ಗಾಂಧಿಯವರು ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ಸದನದಲ್ಲಿ ಮಾತನಾಡುತ್ತಾ, ತಮ್ಮ ಪಕ್ಷವು ಮಸೂದೆಯನ್ನು ಬೆಂಬಲಿಸುತ್ತದೆ. ಆದರೆ ಮಹಿಳೆಯರಿಗೆ 33% ಕೋಟಾದೊಳಗೆ ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ನೀಡಬೇಕೆಂದು ಆಗ್ರಹಿಸಿದ್ದಾರೆ.

ತಮ್ಮ ಪತಿ ರಾಜೀವ್ ಗಾಂಧಿ ಅವರು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದ ಮೊದಲ ವ್ಯಕ್ತಿಯಾಗಿರುವುದರಿಂದ ಮಸೂದೆಯ ಕುರಿತು ಮಾತನಾಡುವುದು ನನಗೆ ಭಾವನಾತ್ಮಕ ಕ್ಷಣವಾಗಿದೆ ಎಂದು ಅವರು ಹೇಳಿದ್ದರು.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಪರವಾಗಿ ನಾನು ‘ನಾರಿ ಶಕ್ತಿ ವಂದನಾ ಅಧಿನಿಯಮವನ್ನು’  ಬೆಂಬಲಿಸುತ್ತೇನೆ. ಹೊಗೆ ತುಂಬಿದ ಅಡುಗೆ ಮನೆಯಿಂದ ಫ್ಲಡ್ ಲೈಟ್‌ ಸ್ಟೇಡಿಯಂವರೆಗೆ ಭಾರತದ ಮಹಿಳೆಯ ಪಯಣ ಬಹಳ ಸುದೀರ್ಘವಾದುದು, ಆದರೆ ಅವಳು ಕೊನೆಗೆ ಅದನ್ನು ತಲುಪಿದ್ದಾಳೆ ಎಂದು ಸೋನಿಯಾ ಗಾಂಧಿ ಹೇಳಿದ್ದರು.

ಇದನ್ನು ಓದಿ: ಮಹಿಳಾ ಮೀಸಲಾತಿ ಬಿಲ್‌: ಒಬಿಸಿಗಳನ್ನು ಸೇರ್ಪಡೆಗೆ ಸಂಸತ್ತಿನಲ್ಲಿ ಸೋನಿಯಾ ಗಾಂಧಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂಡಿಯಾ ಬ್ಲಾಕ್‌ನ ‘ಚಲೋ ದಿಲ್ಲಿ’ಗೆ ವೇದಿಕೆ ಸಜ್ಜು; ದೆಹಲಿಯಾದ್ಯಂತ ರಾರಾಜಿಸುತ್ತಿರುವ ಪ್ರತಿಭಟನೆಯ ಪೋಸ್ಟರ್‌ಗಳು 

ನವದೆಹಲಿ: ಚುನಾವಣಾ ಅಕ್ರಮಗಳು ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂಡಿಯಾ ಬ್ಲಾಕ್ ಆಯೋಜಿಸಿರುವ...

ನ್ಯಾಯಾಂಗದ ವಿರುದ್ಧ ಟೀಕೆ ಆರೋಪ: ಸಿಜೆಪಿ ವಕ್ತಾರ ಸೌರವ್ ದಾಸ್ ವಿರುದ್ಧ ತನಿಖೆಗೆ ಮದ್ರಾಸ್ ಹೈಕೋರ್ಟ್‌ನಲ್ಲಿ ಪಿಐಎಲ್

ಚೆನ್ನೈ: ಭಾರತದ ನ್ಯಾಯಾಂಗ, ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್‌ನ ಇತರ ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್...

ಕರ್ನಾಟಕ ಎಸ್‌ಐಆರ್: 192 ಕ್ಷೇತ್ರಗಳಲ್ಲಿ ಗೆಲುವಿನ ಅಂತರಕ್ಕಿಂತ ಹೆಚ್ಚು ಮತಗಳು ಡಿಲೀಟ್; 2028ಕ್ಕೆ ಯಾರಿಗೆ ಅಧಿಕಾರ?

ಜನಪರ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ವಿರೋಧ, ಆತಂಕ ಹಾಗೂ ಆರೋಪಗಳ ಹೊರತಾಗಿಯೂ ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಗಿದಿದೆ. 2026ರ ಅಕ್ಟೋಬರ್ 27ರಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಅಂತಿಮ ಮತದಾರರ...

ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ಶಶಿಕುಮಾರ್‌ಗೆ ಕೊಕ್; ಚೇತನ್ ಸಿಂಗ್ ರಾಥೋಡ್‌ಗೆ ತನಿಖೆಯ ಹೊಣೆ

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೇತೃತ್ವದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಎಸ್‌ಐಟಿ ಮುಖ್ಯಸ್ಥರಾಗಿದ್ದ ಐಜಿಪಿ ಎನ್. ಶಶಿಕುಮಾರ್...

ಇಸ್ರೇಲ್ ಚುನಾವಣೆ: ನೆತನ್ಯಾಹು, ಐಸೆನ್‌ಕೋಟ್ ಬಣಗಳಿಗೆ ಬಹುಮತದ ಕೊರತೆ; ಸರ್ಕಾರ ರಚನೆಯಲ್ಲಿ ಅರಬ್ ಪಕ್ಷಗಳೇ ನಿರ್ಣಾಯಕ!

ಇಸ್ರೇಲ್‌ನ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಆಡಳಿತಾರೂಢ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಮಾಜಿ ಸೇನಾ ಮುಖ್ಯಸ್ಥ ಗಡಿ ಐಸೆನ್‌ಕೋಟ್ ನೇತೃತ್ವದ ವಿರೋಧ ಪಕ್ಷದ ಬಣಗಳೆರಡಕ್ಕೂ ಭಾರಿ ಸವಾಲು ತಂದೊಡ್ಡಿದೆ. 120 ಸದಸ್ಯ ಬಲದ...

ನ.1ರ ಇಂಡಿಯಾ ಒಕ್ಕೂಟದ ರ‍್ಯಾಲಿಗೆ ಬೆಂಬಲ ಘೋಷಿಸಿದ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’

ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಸಲಿರುವ ಬೃಹತ್ ರ‍್ಯಾಲಿಗೆ ಪೀಪಲ್ ಅಗೆನೆಸ್ಟ್ ಎಸ್‌ಐಆರ್‌ ಬೆಂಬಲ ಘೋಷಿಸಿದೆ. ಪ್ರಜಾಪ್ರಭುತ್ವವನ್ನು ಉಳಿಸಲು, ಎಸ್‌ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ...

‘ನುಸುಳುಕೋರರನ್ನು’ ಹೊರಹಾಕಲು SIR ಎಂದಿತ್ತು ಬಿಜೆಪಿ ಮತ್ತು ಚು. ಆಯೋಗ : ಆರು ರಾಜ್ಯಗಳಲ್ಲಿ ಪತ್ತೆಯಾಗಿದ್ದು ಕೇವಲ 1,600 ವಿದೇಶಿಯರು ಮಾತ್ರ

'ನುಸುಳುಕೋರರನ್ನು' ಪತ್ತೆ ಹಚ್ಚುವುದು ಅಥವಾ 'ವಿದೇಶಿ ಅಕ್ರಮ ವಲಸಿಗರನ್ನು' ಪತ್ತೆ ಹಚ್ಚುವುದು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಹೇಳಿತ್ತು....

ಸಂತ್ರಸ್ತೆ ಮತ್ತು ಆರೋಪಿ ನಡುವಿನ ‘ಒಪ್ಪಂದ’ವನ್ನಷ್ಟೇ ಆಧರಿಸಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಪಕ್ಷಕಾರರ (ಸಂತ್ರಸ್ತೆ ಮತ್ತು ಆರೋಪಿ) ನಡುವಿನ ರಾಜಿ ಸಂಧಾನದ ಆಧಾರದ ಮೇಲೆ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದ್ದ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕೇವಲ ಒಪ್ಪಂದದ ಆಧಾರದ ಮೇಲೆ ಗಂಭೀರ ಅಪರಾಧಗಳನ್ನು...

DELHI SIR : 2026ರ ಮತದಾರರ ಪಟ್ಟಿಯಲ್ಲಿದ್ದರೂ ಕೂಡ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸುವಂತೆ ಸೂಚಿಸಿದ್ದು ಏಕೆ? ಚು. ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದಂತೆ, 2026ರ ಮತದಾರರ ಪಟ್ಟಿಯಲ್ಲಿದ್ದರೂ ಸಹ ಗಣತಿ ನಮೂನೆಗಳನ್ನು (enumeration forms) ಭರ್ತಿ ಮಾಡದ ಕಾರಣಕ್ಕಾಗಿ ಕರಡು ಪಟ್ಟಿಯಿಂದ ಹೆಸರನ್ನು ಕಳೆದುಕೊಂಡಿರುವ ವ್ಯಕ್ತಿಗಳು,...

ಮರ್ಯಾದೆಗೇಡು ಹತ್ಯೆ ಶಂಕೆ: ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿಯ ಸಹೋದರ ಬಂಧನ

ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನನ್ನು ಇಟ್ಟಿಗೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಮರ್ಯಾದೆಗೇಡು ಹತ್ಯೆ ಶಂಕೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಪತ್ನಿಯ ಹಿರಿಯ...