Homeಮುಖಪುಟಹರಿಯಾಣ: ಕುಟುಂಬಸ್ಥರ ಎದುರೇ ಮೂವರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ

ಹರಿಯಾಣ: ಕುಟುಂಬಸ್ಥರ ಎದುರೇ ಮೂವರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ

- Advertisement -
- Advertisement -

ಹರಿಯಾಣದ ಪಾಣಿಪತ್‌ನಲ್ಲಿ ಕುಟುಂಬ ಸದಸ್ಯರ ಎದುರಲ್ಲೇ ಮೂವರು ಮಹಿಳೆಯರ ಮೇಲೆ ನಾಲ್ವರು ಮುಸುಕುಧಾರಿಗಳ ಗುಂಪು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬುಧವಾರ ನಡುರಾತ್ರಿ ನಡೆದಿದೆ.

ಈ ಬಗ್ಗೆ ಮಾಹಿತಿ ನೀಡಿದ ಪೊಲೀಸರು, ”ಆರೋಪಿಗಳು ಚಾಕು ಮತ್ತು ಇತರ ಹರಿತವಾದ ಅಯುಧಗಳನ್ನು ಹೊಂದಿದ್ದರು ಎಂದು ಹೇಳಲಾಗಿದೆ. ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಮನೆಗೆ ನುಗಿದ್ದ ಮುಷ್ಕರ್ಮಿಗಳು ಕುಟುಂಬದ ಇತರ ಸದಸ್ಯರನ್ನು ಕಟ್ಟಿ ಹಾಕಿ, 24, 25 ಮತ್ತು 35 ವರ್ಷ ವಯಸ್ಸಿನ ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ್ದಾರೆ. ನಂತರ ನಗದು ಹಾಗೂ ಚಿನ್ನಾಭರಣ ದೋಚಿದ್ದಾರೆ ಎಂದು ತಿಳಿಸಿದ್ದಾರೆ.

ಈ ಘಟನೆ ನಡೆದ ಸ್ಥಳದಿಂದ ತಪ್ಪಿಸಿಕೊಂಡು  ಹೋಗುವಾಗ ಒಂದು ಕಿ.ಮೀಟರ್ ದೂರದಲ್ಲಿ ಅಸ್ಪಶ್ಯ ಮಹಿಳೆ ಮೇಲೆ ದಾಳಿ ಮಾಡಲಾಗಿದ್ದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಆಕೆಯ ಪತಿ ಬಳಿ ಇದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ಕದ್ದು ಅರೋಪಿಗಳು ಪರಾರಿಯಾಗಿದ್ದಾರೆ.

ಸುಮಾರು ಒಂದು ತಿಂಗಳ ಹಿಂದೆ ಈ ಕುಟುಂಬಕ್ಕೆ ತಮ್ಮ ನಿವೇಶನಗಳನ್ನು ಖಾಲಿ ಮಾಡುವಂತೆ ಬೆದರಿಕೆ ಹಾಕಿದ್ದ ವ್ಯಕ್ತಿಗಳ ಗುಂಪೇ ಈ ಕೃತ್ಯ ಎಸಗಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

”ಎಲ್ಲರೂ ಮಲಗಿದ್ದಾಗ, ದುಷ್ಕರ್ಮಿಗಳು ತಮ್ಮ ಗಂಡ ಮತ್ತು ಮಕ್ಕಳನ್ನು ಹೊರಗೆ ಕರೆದೊಯ್ದು ಹಗ್ಗದಿಂದ ಕಟ್ಟಿ, ನಂತರ ಮೂವರು ಮಹಿಳೆಯರ ಮೇಲೆ ಸರದಿಯಲ್ಲಿ ಅತ್ಯಾಚಾರ ಎಸಗಿದ್ದಾರೆ” ಎಂದು ಮಹಿಳೆಯರು ಆರೋಪಿಸಿದ್ದಾರೆ.

”ಆಗ ಗ್ಯಾಂಗ್ ಅವರನ್ನು ಕೊಠಡಿಯೊಂದರಲ್ಲಿ ಲಾಕ್ ಮಾಡಿದೆ. ನಂತರ, ಅವರು ನಮ್ಮನ್ನು (ಮಹಿಳೆಯರನ್ನು) ವರಾಂಡಾಕ್ಕೆ ಎಳೆದುಕೊಂಡು ಸರದಿಯಲ್ಲಿ ಅತ್ಯಾಚಾರ ಮಾಡಿದರು. ದನಿ ಎತ್ತದಂತೆ ಬೆದರಿಸಿ ಬೆಳಗಿನ ಜಾವ 4 ಗಂಟೆಯವರೆಗೂ ಚಿತ್ರಹಿಂಸೆ ನೀಡುತ್ತಿದ್ದರು. ಆನಂತರ ನಗದು ಮತ್ತು ಬೆಳ್ಳಿ ಆಭರಣದೊಂದಿಗೆ ಪರಾರಿಯಾಗಿದ್ದಾರೆ” ಎಂದು ಸಂತ್ರಸ್ತರೊಬ್ಬರು ಪೊಲೀಸರಿಗೆ ತಿಳಿಸಿದರು.

ಇದನ್ನೂ ಓದಿ: ದಲಿತ ಬಾಲಕಿಯ ಮೇಲೆ ಅತ್ಯಾಚಾರ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...