Homeಮುಖಪುಟಉತ್ತರಪ್ರದೇಶ: ಲೋಕಸಭೆ, ವಿಧಾನಸಭೆಗಳಲ್ಲಿ SC, ST, OBCಗಳಿಗಿಂತ ಹೆಚ್ಚು ಪ್ರಾತಿನಿಧ್ಯ ಪಡೆದ ಬ್ರಾಹ್ಮಣ, ಠಾಕೂರ್‌ ಮಹಿಳೆಯರು

ಉತ್ತರಪ್ರದೇಶ: ಲೋಕಸಭೆ, ವಿಧಾನಸಭೆಗಳಲ್ಲಿ SC, ST, OBCಗಳಿಗಿಂತ ಹೆಚ್ಚು ಪ್ರಾತಿನಿಧ್ಯ ಪಡೆದ ಬ್ರಾಹ್ಮಣ, ಠಾಕೂರ್‌ ಮಹಿಳೆಯರು

- Advertisement -
- Advertisement -

ಉತ್ತರಪ್ರದೇಶದಲ್ಲಿ 2009ರಿಂದ ನಡೆದ ಕಳೆದ 6 ಪ್ರಮುಖ ಚುನಾವಣೆಗಳಲ್ಲಿ ಸಂಖ್ಯಾತ್ಮಕವಾಗಿ ಪ್ರಾಬಲ್ಯ ಹೊಂದಿರುವ ಹಿಂದುಳಿದ ವರ್ಗಗಳ (ಒಬಿಸಿ) ಮಹಿಳೆಯರಿಗಿಂತ ಹೆಚ್ಚಾಗಿ ಸವರ್ಣೀಯ ಮಹಿಳೆಯರು, ಅದರಲ್ಲೂ ವಿಶೇಷವಾಗಿ ಬ್ರಾಹ್ಮಣ ಮತ್ತು ಠಾಕೂರ್ ಸಮುದಾಯದವರು ಶಾಸಕರು ಮತ್ತು ಸಂಸದರಾಗಿ ಆಯ್ಕೆಯಾಗಿದ್ದಾರೆ.

ಉತ್ತರಪ್ರದೇಶ ವಿಧಾನಸಭೆ 403 ಸದಸ್ಯ ಬಲವನ್ನು ಹೊಂದಿದೆ. ಇದು ದೇಶದ ಅತಿದೊಡ್ಡ ವಿಧಾನಸಭೆಯಾಗಿದೆ ಮತ್ತು ರಾಷ್ಟ್ರ ರಾಜಕೀಯದ ಮೇಲೆ ಅತಿ ಹೆಚ್ಚು ಪ್ರಭಾವ ಬೀರಬಲ್ಲ ರಾಜ್ಯವಾಗಿದೆ. ಉತ್ತರಪ್ರದೇಶದಿಂದ 80 ಸಂಸದರು ಲೋಕಸಭೆಗೆ ತೆರಳುತ್ತಾರೆ.

ಒಬಿಸಿಗಳನ್ನು ಹೊರತುಪಡಿಸಿ ಇತರ ಸಮುದಾಯದ ಮಹಿಳೆಯರಿಗೆ 33% ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ಬಿಲ್ ಬಗೆಗಿನ ಚರ್ಚೆಯ ನಡುವೆ 2012 ರಿಂದ ಉತ್ತರಪ್ರದೇಶ ರಾಜ್ಯದಲ್ಲಿ ಚುನಾಯಿತರಾದ ಎಲ್ಲಾ ಮಹಿಳಾ ಶಾಸಕರ ಜಾತಿ ಹಿನ್ನೆಲೆಯ ಬಗ್ಗೆ ದಿ ವೈರ್ ಪರಿಶೀಲಿಸಿದೆ. ಇದಕ್ಕೆ ಪೂರಕವಾಗಿ ಯುಪಿ ಸೆಕ್ರೆಟರಿಯೇಟ್‌ನಿಂದ ಮಾಹಿತಿಯನ್ನು ಸಂಗ್ರಹಿಸಿದೆ.

2009, 2014 ಮತ್ತು 2019ರ ಸಾರ್ವತ್ರಿಕ ಚುನಾವಣೆಗಳಲ್ಲಿ ಯುಪಿಯಲ್ಲಿ ಚುನಾಯಿತರಾದ ಮಹಿಳಾ ಸಂಸದರು ಶಾಸಕರ ಜಾತಿ ಹಿನ್ನೆಲೆಯನ್ನು ಪರಿಶೀಲಿಸಿದೆ. 2012, 2017 ಮತ್ತು 2022ರಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣೆಗಳು ಮತ್ತು ಕಾಲಕಾಲಕ್ಕೆ ನಡೆದ ಉಪಚುನಾವಣೆಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಪರಿಗಣಿಸಲಾಗಿದೆ.

403 ಸದಸ್ಯ ಬಲದ ಯುಪಿ ವಿಧಾನಸಭೆಗೆ ಚುನಾಯಿತರಾದ ಮಹಿಳೆಯರ ಸಂಖ್ಯೆ 2012-2017ರ ಅವಧಿಯಲ್ಲಿ 40, 2017-2022ರಲ್ಲಿ 46 ಮತ್ತು 2022 ರಿಂದ ಇಂದಿನವರೆಗೆ ಅವಧಿಯಲ್ಲಿ 48ಕ್ಕೆ ಏರಿದೆ. ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದಾಗ 2012ರಲ್ಲಿ 35, 2017ರಲ್ಲಿ 42 ಹಾಗೂ 2022ರಲ್ಲಿ 47 ಮಹಿಳೆಯರು ಆಯ್ಕೆಯಾಗಿದ್ದರು. ಉಳಿದವರು ಉಪಚುನಾವಣೆಗಳಲ್ಲಿ ಆಯ್ಕೆಯಾಗಿದ್ದರು.

2012ರಿಂದ ಚುನಾಯಿತರಾದ ಒಟ್ಟು 134 ಮಹಿಳಾ ಅಭ್ಯರ್ಥಿಗಳಲ್ಲಿ 46 ಮಂದಿ ಪರಿಶಿಷ್ಟ ಜಾತಿಗೆ ಸೇರಿದವರು. ಅವರೆಲ್ಲರೂ ಮೀಸಲು ಕ್ಷೇತ್ರಗಳಲ್ಲಿ ಗೆದ್ದಿದ್ದಾರೆ. 42 ಬ್ರಾಹ್ಮಣ ಸಮುದಾಯದ, 39 ಮಹಿಳೆಯರು OBC ಸಮುದಾಯದ ಶಾಸಕರಾಗಿದ್ದರು. 2012 ರಿಂದ ಬರೀ 7 ಮಂದಿ ಮುಸ್ಲಿಂ ಮಹಿಳಾ ಶಾಸಕರು ವಿಧಾನಸಭೆಗೆ ಪ್ರವೇಶಿಸಿದ್ದರು.

2012ರಿಂದ ಆಯ್ಕೆಯಾದ 107 ಮಹಿಳಾ ಶಾಸಕರಲ್ಲಿ OBCಗಳು 31 ಮಂದಿಯಾಗಿದ್ದರೆ, 32 ಮಂದಿ ಬ್ರಾಹ್ಮಣ, ಠಾಕೂರ್‌ ಸಮುದಾಯದ ಮಹಿಳಾ ಶಾಸಕರಿದ್ದರು. ಇದು ಕಡಿಮೆ ಜನಸಂಖ್ಯೆಯಿದ್ದರು ಸವರ್ಣಿಯರಾದ ಬ್ರಾಹ್ಮಣ ಮತ್ತು ಠಾಕೂರ್ ಸಮುದಾಯದ ಹೆಚ್ಚಿನ ಪ್ರಾತಿನಿಧ್ಯವನ್ನು ಬಹಿರಂಗಪಡಿಸುತ್ತದೆ.

2012ರಿಂದ 84 ಮಹಿಳಾ ಶಾಸಕರು ಮೊದಲ ಬಾರಿಗೆ ಚುನಾಯಿತರಾಗಿದ್ದರೆ, 19 ಮಂದಿ ಎರಡು ಬಾರಿ ಆಯ್ಕೆಯಾಗಿದ್ದಾರೆ ಮತ್ತು ನಾಲ್ವರು ಮೂರು ಬಾರಿ ಗೆಲವು ಕಂಡವರು. ಎರಡು ಬಾರಿ ಚುನಾಯಿತರಾದ 19 ಮಹಿಳಾ ಶಾಸಕರ ಪೈಕಿ ಒಬಿಸಿ ಮತ್ತು ಮೇಲ್ಜಾತಿಯ ತಲಾ 6 ಮಂದಿ ಮತ್ತು ಏಳು ಮಂದಿ ದಲಿತ ಸಮುದಾಯದ ಮಹಿಳಾ ಶಾಸಕರಿದ್ದರು. ಮೂರು ಬಾರಿ ಆಯ್ಕೆಯಾದ ಶಾಸಕರಲ್ಲಿ ಒಬ್ಬರು ಒಬಿಸಿ, ಒಬ್ಬರು ದಲಿತ ಮತ್ತು ಇಬ್ಬರು ಬ್ರಾಹ್ಮಣ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ನರೇಂದ್ರ ಮೋದಿ ಸರ್ಕಾರವು ಪರಿಚಯಿಸಿದ 33% ಮಹಿಳಾ ಮೀಸಲಾತಿ ಮಸೂದೆಯನ್ನು ಸಂಸತ್ತಿನ ಎರಡೂ ಸದನಗಳಲ್ಲಿ ಅಂಗೀಕರಿಸಲಾಯಿತು. ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಒಬಿಸಿ ಮುಸ್ಲಿಂ ಮಹಿಳೆಯರಿಗೆ ಇದೇ ರೀತಿಯ ಕೋಟಾವನ್ನು ನೀಡುವಂತೆ ಒತ್ತಾಯಿಸಿದ್ದಾರೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ OBC ಮತ್ತು ಮುಸ್ಲಿಂ ಮಹಿಳೆಯರಿಗೆ ಮೀಸಲಾತಿ ಇಲ್ಲದಿದ್ದರೆ, ನಿರ್ದಿಷ್ಟವಾಗಿ ಹಿಂದುಳಿದ ಮತ್ತು ಅಂಚಿನಲ್ಲಿರುವ ಜಾತಿಗಳು ಮತ್ತು ಸಮುದಾಯಗಳಲ್ಲಿ ಶ್ರೇಣೀಕೃತ, ಜಾತಿ-ಪೀಡಿತ ಸಮಾಜದಲ್ಲಿ ಮಸೂದೆಯ ಉದ್ದೇಶವು ಅಪೂರ್ಣವಾಗಲಿದೆ ಎಂದು ವಿರೋಧ ಪಕ್ಷದ ಸಂಸದರು ಕಳವಳ ವ್ಯಕ್ತಪಡಿಸಿದ್ದರು.

ಹೊಸ ಮಸೂದೆಯು ಸಾಂವಿಧಾನಿಕವಾಗಿ ಈಗಾಗಲೇ SC ಮತ್ತು ST ಸಮುದಾಯಗಳಿಗೆ ಮೀಸಲಿಟ್ಟಿರುವ ಸ್ಥಾನಗಳಲ್ಲಿ SC ಮತ್ತು ST ಮಹಿಳೆಯರಿಗೆ ಮೂರನೇ ಒಂದು ಮೀಸಲು ಒದಗಿಸುತ್ತದೆ ಮತ್ತು OBCಗಳು ಅಥವಾ ಮುಸ್ಲಿಮರಿಗೆ ಮೀಸಲಾತಿ ನೀಡಿಲ್ಲ. OBC ಮಹಿಳೆಯರಿಗೆ ಮೀಸಲಾತಿ ಬೇಡಿಕೆಯನ್ನು ಉತ್ತರ ಪ್ರದೇಶ ಮತ್ತು ಬಿಹಾರ ಸೇರಿ ಪ್ರಮುಖ ರಾಜ್ಯಗಳಲ್ಲಿ ಎಲ್ಲಾ ಪ್ರಮುಖ ವಿರೋಧ ಪಕ್ಷಗಳು ಆಗ್ರಹಿಸಿದೆ.

ಲೋಕಸಭೆಯ ಮಟ್ಟದಲ್ಲಿಯೂ, 2009, 2014 ಮತ್ತು 2019ರಲ್ಲಿ ನಡೆದ ಕೊನೆಯ ಮೂರು ಸಾರ್ವತ್ರಿಕ ಚುನಾವಣೆಗಳಲ್ಲಿ OBC ಮಹಿಳೆಯರು ಮತ್ತು ದಲಿತ ಮಹಿಳೆಯರಿಗಿಂತ ಸವರ್ಣಿಯ ಮಹಿಳೆಯರು ಹೆಚ್ಚಿನ ಪ್ರಾತಿನಿಧ್ಯ ಪಡೆದುಕೊಂಡಿದ್ದಾರೆ. 2009ರಲ್ಲಿ 11 ಮಹಿಳಾ ಸಂಸದರು ಯುಪಿಯಲ್ಲಿ ಚುನಾಯಿತರಾದರು ಅದರಲ್ಲಿ ಆರು ಸವರ್ಣಿಯ, ಇಬ್ಬರು ಮುಸ್ಲಿಮ್ ಸಂಸದರು, ಇಬ್ಬರು ದಲಿತ ಸಮುದಾಯಗಳು ಮತ್ತು ಒಬ್ಬರು ಒಬಿಸಿ ಸಮುದಾಯದಿಂದ ಆಯ್ಕೆಯಾಗಿದ್ದರು.

2014ರಲ್ಲಿ 13 ಮಹಿಳಾ ಸಂಸದರು ಚುನಾಯಿತರಾಗಿದ್ದರು. ಅವರಲ್ಲಿ ತಲಾ ಐದು ದಲಿತ ಮತ್ತು ಒಬಿಸಿ ಸಮುದಾಯದಿಂದ ಆಯ್ಕೆಯಾದರೆ, ಮೂವರು ಸವರ್ಣಿಯ ಸಮುದಾಯದ ಮಹಿಳೆಯರು ಸಂಸದರಾಗಿ ಆಯ್ಕೆಯಾಗಿದ್ದರು.

2019ರಲ್ಲಿ ಚುನಾಯಿತರಾದ 11 ಮಹಿಳಾ ಸಂಸದರಲ್ಲಿ ತಲಾ ಐದು ಮಂದಿ ಒಬಿಸಿ ಮತ್ತು ಬ್ರಾಹ್ಮಣ ಸಮುದಾಯದ ಸಂಸದರು ಮತ್ತು ಒಬ್ಬರು ದಲಿತ ಸಮುದಾಯದವರಾಗಿದ್ದರು. ಈ ಅಂಕಿ ಅಂಶಗಳನ್ನು ನೋಡಿದಾಗ ಉತ್ತರಪ್ರದೇಶದಲ್ಲಿ ಬ್ರಾಹ್ಮಣ , ಠಾಕೂರ್ ಸಮುದಾಯದ ಜನರ ಸಂಖ್ಯೆ ಕಡಿಮೆಯಿದ್ದರೂ ಅವರು ಇತರ ಒಬಿಸಿ ಮುಸ್ಲಿಮರಿಗಿಂತ ಹೆಚ್ಚು ರಾಜಕೀಯ ಪ್ರಾತಿನಿಧ್ಯವನ್ನು ಗಿಟ್ಟಿಸಿಕೊಂಡಿದ್ದಾರೆ.

ಇದನ್ನು ಓದಿ: ‘ದಿ ವೈರ್’ ಸಂಪಾದಕರಿಂದ ವಶಪಡಿಸಿಕೊಂಡ ಎಲೆಕ್ಟ್ರಾನಿಕ್ಸ್ ಸಾಧನಗಳನ್ನು ಹಿಂತಿರುಗಿಸಲು ಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...