Homeಮುಖಪುಟಪಾಟ್ನಾ: ಹೆಚ್ಚಿನ ಬಡ್ಡಿ ನೀಡಿದಿದ್ದಕ್ಕೆ ದಲಿತ ಮಹಿಳೆಯನ್ನು ಬೆತ್ತಲುಗೊಳಿಸಿ, ಮೂತ್ರ ಕುಡಿಸಿ, ಹಲ್ಲೆ

ಪಾಟ್ನಾ: ಹೆಚ್ಚಿನ ಬಡ್ಡಿ ನೀಡಿದಿದ್ದಕ್ಕೆ ದಲಿತ ಮಹಿಳೆಯನ್ನು ಬೆತ್ತಲುಗೊಳಿಸಿ, ಮೂತ್ರ ಕುಡಿಸಿ, ಹಲ್ಲೆ

- Advertisement -
- Advertisement -

ದಲಿತ ಮಹಿಳೆಯೊಬ್ಬರು ಸಾಲ ಹಿಂದಿರುಗಿಸಿಸರೂ, ಹೆಚ್ಚಿನ ಬಡ್ಡಿ ನೀಡವಂತೆ ಒತ್ತಾಯಿಸಿ ಹಲ್ಲೆ ಮಾಡಿದ್ದಲ್ಲೇ, ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಘಟನೆ ಬಿಹಾರದ ಪಾಟ್ನಾ ಜಿಲ್ಲೆಯ ಮೋಸಿಂಪುರ ಗ್ರಾಮದಲ್ಲಿ ನಡೆದಿದೆ.

ಸಾಲ ನೀಡಿದ ವ್ಯಕ್ತಿಗೆ ಹಣವನ್ನು ಹಿಂದಿರುಗಿಸಿದ್ರೂ ಮಹಿಳೆಗೆ ಹೆಚ್ಚಿನ ಬಡ್ಡಿ ನೀಡುವಂತೆ ಒತ್ತಾಯಿಸಿದ್ದಾರೆ. ಆದರೆ ಇದಕ್ಕೆ ಮಹಿಳೆ ನಿರಕಾರಿಸಿದ್ದು, ಇದರಿಂದ ಕೋಪಗೊಂಡ ಸಾಲ ನೀಡಿದ ವ್ಯಕ್ತಿ ಮಹಿಳೆಗೆ ಕ್ರೂರವಾಗಿ ಹಲ್ಲೆ ಮಾಡಿ, ವಿವಸ್ತ್ರಗೊಳಿಸಿದ್ದಾನೆ ಎಂದು ಹೇಳಲಾಗಿದೆ.

”ಈ ವೇಳೆ ಸಾಲ ನೀಡಿದ ವ್ಯಕ್ತಿಯ ಮಗ ಮಹಿಳೆಯ ಬಾಯಿಗೆ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ಪತಿ ಪಾಟ್ನಾ ಜಿಲ್ಲೆಯ ಮೋಸಿಂಪುರ ಗ್ರಾಮದ ಪ್ರಮೋದ್ ಸಿಂಗ್ ಅವರಿಂದ 1,500 ಸಾಲ ಪಡೆದಿದ್ದರು” ಎಂದು ಪೊಲೀಸರು ಹೇಳಿದ್ದಾರೆ.

”ದಂಪತಿಗಳು ಸಾಲ ಪಡೆದ ಹಣವನ್ನು ಬಡ್ಡಿ ಸಹಿತ ಮರುಪಾವತಿ ಮಾಡಿದ್ದರು. ಆದರೆ ಪ್ರಮೋದ್ ಸಿಂಗ್ ಹೆಚ್ಚುವರಿ ಬಡ್ಡಿ ನೀಡುವಂತೆ ಒತ್ತಾಯಿಸಿದ್ದಾನೆ. ಇದಕ್ಕೆ ದಂಪತಿಗಳು ಒಪ್ಪದಿದ್ದಾಗ ಪ್ರಮೋದ್ ಸಿಂಗ್​​ನ ಮಗ ಮತ್ತು ಆತ ಸಹಾಯಕರು ಹಲ್ಲೆ ಮಾಡಿದ್ದಾರೆ” ಎಂದು ಪೊಲೀಸ್​​ ವರದಿ ಹೇಳಿದೆ.

”ಶನಿವಾರ ರಾತ್ರಿ ಮನೆಯ ಹೊರಗೆ ನೀರು ತುಂಬಿಸುತ್ತಿರುವಾಗ ಪ್ರಮೋದ್, ಆತನ ಮಗ ಅಂಶು ಮತ್ತು ಇತರ ನಾಲ್ವರು ಪುರುಷರು ತಮ್ಮೊಂದಿಗೆ ಬರುವಂತೆ ಒತ್ತಾಯಿಸಿದ್ದಾರೆ” ಎಂದು ಮಹಿಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

”ನಾನು ಎಲ್ಲಿಗೂ ಬರುವುದಿಲ್ಲ ಎಂದು ಹೇಳಿದಾಗ ಆಕೆಗೆ ದೊಣ್ಣೆಯಿಂದ ಥಳಿಸಿದ್ದು, ಗ್ರಾಮದ ಹೊರಗೆ ಕರೆದುಕೊಂಡು ಹೋಗಿ ವಿವಸ್ತ್ರಗೊಳಿಸಿದ್ದಾರೆ. ನಂತರ ಪ್ರಮೋದ್ ಸಿಂಗ್ ತನ್ನ ಮಗ ಅಂಶುಗೆ ನನ್ನ ಬಾಯಿಗೆ ಮೂತ್ರ ಮಾಡು ಎಂದು ಹೇಳಿದ್ದಾನೆ” ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.

ನಂತರ ಮಹಿಳೆ ಅಲ್ಲಿಂದ ಹೇಗೋ ತಪ್ಪಿಸಿಕೊಂಡು ಬಂದಿದ್ದಾಳೆ. ಇನ್ನು ಈಕೆ ಬೆತ್ತಲೆಯಾಗಿ ಓಡಿಕೊಂಡು ಬರುವುದನ್ನು ಗ್ರಾಮಸ್ಥರು ನೋಡಿದ್ದಾರೆ. ಮಹಿಳೆಯ ತಲೆಗೆ ಗಂಭೀರ ಗಾಯಗಳಾಗಿದ್ದು, ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲು ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರಪ್ರದೇಶ: ವೈದ್ಯನನ್ನು ಥಳಿಸಿ ಹತ್ಯೆ; ಬಿಜೆಪಿ ನಾಯಕನ ಸಂಬಂಧಿಯಿಂದ ಕೃತ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...