Homeಮುಖಪುಟಉ.ಪ್ರದೇಶ: ಚಲಿಸುತ್ತಿದ್ದ ಕಾರಿನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಮೂವರ ಬಂಧನ

ಉ.ಪ್ರದೇಶ: ಚಲಿಸುತ್ತಿದ್ದ ಕಾರಿನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಮೂವರ ಬಂಧನ

- Advertisement -
- Advertisement -

ಕಳೆದ ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದ ಕುಶಿನಗರದಲ್ಲಿ ಚಲಿಸುವ ವಾಹನದಲ್ಲಿ 16 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆಯ ನೆರೆಹೊರೆಯವರಾದ ಮೂವರು ಆರೋಪಿಗಳನ್ನು ಸೋಮವಾರ ಬಂಧಿಸಲಾಗಿದೆ.

”ಈ ಘಟನೆ ಸೆಪ್ಟೆಂಬರ್ 9 ರಂದು ನಡೆದಿದೆ. ಆರೋಪಿಗಳು ಗೋಶಾಲೆಯನ್ನು ಸ್ವಚ್ಛಗೊಳಿಸಲು ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು, ಆಕೆಗೆ ಚಾಕು ತೋರಿಸಿ ಹೆದರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅದಕ್ಕೂ ಮುನ್ನ ಗೋಶಾಲೆಯನ್ನು ಗುಡಿಸಲು ಕರೆದೊಯ್ದರು ಎಂದು ಸಂತ್ರಸ್ತೆ ತನ್ನ ಪೊಲೀಸ್ ದೂರಿನಲ್ಲಿ ಬರೆದಿದ್ದಾರೆ.

ಆನಂತರ, ಆತನ ಇಬ್ಬರು ಸಹಚರರು ಸ್ಥಳಕ್ಕೆ ಬಂದು, ಆಕೆಯನ್ನು ಅಪಹರಿಸಿ, ಚಲಿಸುವ ವಾಹನದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದರು. ನಂತರ ಮೂವರು ಆರೋಪಿಗಳು ಆಕೆಯನ್ನು ಗೋಶಾಲೆಯ ಹೊರಗೆ ಬಿಸಾಡಿದ್ದರು. ಪ್ರಜ್ಞೆ ಮರಳಿದ ನಂತರ ಬಾಲಕಿ ಮನೆಗೆ ತೆರಳಿ, ತನ್ನ ಪೋಷಕರಿಗೆ ನಡೆದ ಘಟನೆ ಬಗ್ಗೆ ವಿವರಿಸಿದಳು.

ಈ ಬಗ್ಗೆ ಕಪ್ತಂಗಂಜ್ ಪೊಲೀಸ್ ಠಾಣೆಯ ಪೊಲೀಸರು ಆರಂಭದಲ್ಲಿ ಎಫ್‌ಐಆರ್ ದಾಖಲಿಸಲಿಲ್ಲ. ಆನಂತರ ಸಂತ್ರಸ್ತೆ ಮತ್ತು ಆಕೆಯ ಕುಟುಂಬ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಘಟನೆ ಬಗ್ಗೆ ವಿವರಿಸಿದಾಗ ಅಧಿಕೃತ ದೂರು ದಾಖಲಿಸಲಾಯಿತು.

ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮೂವರು ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಮುಂಗಡ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಖುಷಿನಗರ ಜಿಲ್ಲಾ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಹರಿಯಾಣ: ಕುಟುಂಬಸ್ಥರ ಎದುರೇ ಮೂವರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...