Homeಕರ್ನಾಟಕಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಐದು ಸಮಿತಿ ರಚನೆ

ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಐದು ಸಮಿತಿ ರಚನೆ

- Advertisement -
- Advertisement -

ರಾಜ್ಯ ಸರ್ಕಾರ ಈ ಹಿಂದೆ ಹೇಳಿದಂತೆ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಮುಂದಾಗಿದೆ. ಇದೀಗ ರಾಜ್ಯ ಪಠ್ಯಕ್ರಮದ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಐದು ಸಮಿತಿಗಳನ್ನು ರಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

ಒಟ್ಟು ಐದು ಸಮಿತಿಗಳನ್ನು ರಚನೆ ಮಾಡಲಾಗಿದೆ. ಕನ್ನಡ ಪ್ರಥಮ ಭಾಷೆ, ಕನ್ನಡ ದ್ವಿತೀಯ ಭಾಷೆ, ಕನ್ನಡ ತೃತೀಯ ಭಾಷೆ, 6, 7ನೇ ತರಗತಿಯ ಸಮಾಜ ವಿಜ್ಞಾನ ಹಾಗೂ 8, 9, 10ನೇ ತರಗತಿಯ ಸಮಾಜ ವಿಜ್ಞಾನಕ್ಕೆ ಪ್ರತ್ಯೇಕವಾಗಿ ಸಮಿತಿಗಳನ್ನು ರಚಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ನಿವೃತ್ತ ಪ್ರಾಧ್ಯಾಪಕ ಮಂಜುನಾಥ ಜೆ. ಹೆಗಡೆ ಅವರನ್ನು ಐದೂ ಸಮಿತಿಗಳ ಸಂಯೋಜಕರನ್ನಾಗಿ ನೇಮಿಸಲಾಗಿದೆ.

ಬಿಜೆಪಿ ಆಡಳಿತ ಅವಧಿಯಲ್ಲಿ ರೋಹಿತ್‌ ಚಕ್ರತೀರ್ಥ ಸಮಿತಿ ಮಾಡಿದ ಪಠ್ಯಪುಸ್ತಕಗಳ ಎಲ್ಲ ತಿದ್ದುಪಡಿಯನ್ನೂ ರಾಜ್ಯ ಕಾಂಗ್ರೆಸ್ ಸರ್ಕಾರ ರದ್ದು ಮಾಡಲಾಗಿತ್ತು. ತಿದ್ದುಪಡಿಗೂ ಮೊದಲು ಇದ್ದ ಪಠ್ಯ ಕ್ರಮವನ್ನೇ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಅನುಸರಿಸಲು ಸೂಚಿಸಲಾಗಿತ್ತು. ಈಗ ಪಠ್ಯ ಪರಿಷ್ಕರಣೆಗೆ ಸಮಿತಿಗಳನ್ನು ರಚಿಸಲಾಗಿದ್ದು, ಮೂರು ತಿಂಗಳ ಅವಕಾಶ ನೀಡಲಾಗಿದೆ. ಸಮಿತಿಗಳು ಕೊಡುವ ಪರಿಷ್ಕರಣಾ ವರದಿಯ ಶಿಫಾರಸುಗಳನ್ನು 2024-25ನೇ ಸಾಲಿನಿಂದ ಜಾರಿಗೆ ತರಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಸಮಿತಿಗಳ ಅಧ್ಯಕ್ಷರುಗಳ ವಿವರ:

ಪ್ರಥಮ ಭಾಷೆ ಕನ್ನಡ: ಅಂಜನಪ್ಪ, ಪ್ರಾಧ್ಯಾಪಕರು, ತುಂಗಾಕಾಲೇಜು, ತೀರ್ಥಹಳ್ಳಿ.

ದ್ವಿತೀಯ ಭಾಷೆ ಕನ್ನಡ: ಎಚ್.ಎಸ್.ಸತ್ಯನಾರಾಯಣ್‌, ಉಪನ್ಯಾಸಕ, ಸರ್ಕಾರಿ ಬಾಲಕಿಯರ ಪಿಯು

ಕಾಲೇಜು ಬಸವನಹಳ್ಳಿ, ಚಿಕ್ಕಮಗಳೂರು.

ತೃತೀಯ ಭಾಷೆ ಕನ್ನಡ: ಮಂಜಣ್ಣ, ಪ್ರಾಧ್ಯಾಪಕ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ದಾವಣಗೆರೆ.

6,7ನೇ ತರಗತಿ ಸಮಾಜ ವಿಜ್ಞಾನ: ಎಂ.ಕಿರಣ್‌, ಸಹಾಯಕ ಪ್ರಾಧ್ಯಾಪಕರು, ಕೇಂದ್ರೀಯ ವಿವಿ ಕಲಬುರಗಿ.

8-10ನೇ ತರಗತಿ ಸಮಾಜ ವಿಜ್ಞಾನ: ಅಶ್ವತ್ಥನಾರಾಯಣ, ನಿವೃತ್ತ ಪ್ರಾಧ್ಯಾಪಕರು ಬೆಂಗಳೂರು.

ಇದನ್ನೂ ಓದಿ: ಈ ವರ್ಷವೇ ಪಠ್ಯ ಪರಿಷ್ಕರಣೆಯಾಗಲಿದೆ: ಸಚಿವ ಮಧು ಬಂಗಾರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....