Homeಕರ್ನಾಟಕಶ್ರೀರಾಮಸೇನೆ ನಿಷೇಧಿಸಿ, ಮುತಾಲಿಕ್‌ರನ್ನು ಗಡಿಪಾರು ಮಾಡಿ: ಸರ್ಕಾರಕ್ಕೆ ಭಾಸ್ಕರ್ ಪ್ರಸಾದ್ ಆಗ್ರಹ

ಶ್ರೀರಾಮಸೇನೆ ನಿಷೇಧಿಸಿ, ಮುತಾಲಿಕ್‌ರನ್ನು ಗಡಿಪಾರು ಮಾಡಿ: ಸರ್ಕಾರಕ್ಕೆ ಭಾಸ್ಕರ್ ಪ್ರಸಾದ್ ಆಗ್ರಹ

- Advertisement -
- Advertisement -

ಕೋಮುವಾದಿ ಸಂಘಟನೆಗಳು ದಲಿತ ಯುವಕರನ್ನು ದಾರಿ ತಪ್ಪಿಸಿ, ದುರ್ಬಳಕೆ ಮಾಡಿಕೊಳ್ಳುತ್ತಿವೆ, ಹಾಗಾಗಿ ಶ್ರೀರಾಮಸೇನೆ ಸಂಘಟನೆಯನ್ನು ನಿಷೇಧ ಮಾಡಬೇಕು ಮತ್ತು ಆ ಸಂಘಟನೆಯ ರಾಜ್ಯಧ್ಯಕ್ಷ ಪ್ರಮೋದ್ ಮುತಾಲಿಕ್ ಅವರನ್ನು ಗಡಿಪಾರು ಮಾಡಬೇಕು ಎಂದು ದಲಿತ ಸಂಘಟನೆ ಮುಖಂಡ ಭಾಸ್ಕರ್‌ ಪ್ರಸಾದ್ ಆಗ್ರಹಿಸಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಗೋವುಗಳನ್ನು ಸಾಗಿಸುವವರ ಮೇಲೆ ದಾಳಿ ನಡೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ದಲಿತ ಸಂಘಟನೆಗಳು ಸಭೆ ನಡೆಸಿದ ಬಳಿಕ ದೊಡ್ಡಬಳ್ಳಾಪುರ ಪೊಲೀಸರಿಗೆ ದೂರು ನೀಡಿದ್ದಾರೆ.

”ಭಯೋತ್ಪಾದಕ ಮತ್ತು ಕೋಮುವಾದಿ ಸಂಘಟನೆಯಾದ ಶ್ರೀ ರಾಮ ಸೇನೆಯನ್ನು ನಿಷೇಧ ಮಾಡಲು ಕ್ರಮ ವಹಿಸಬೇಕು. ಸಂಘಟನೆಯ ವಿರುದ್ದ SC/ST ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು” ಎಂದು ದೂರಿನಲ್ಲಿ ಕೋರಲಾಗಿದೆ.

”ದಿನಾಂಕ 24/9/2023ರಂದು ರಂದು ದೊಡ್ಡಬಳ್ಳಾಪುರದಲ್ಲಿ ಶ್ರೀರಾಮ ಸೇನೆ ಸಂಘಟನೆಯು ಮಾಡಿರುವ ದುಷ್ಕೃತ್ಯದ ಕುರಿತು ಈಗಾಗಲೇ ನಿಮ್ಮ ಠಾಣೆಯಲ್ಲಿ ದೂರು ದಾಖಲಾಗಿದ್ದು ತಪ್ಪಿತಸ್ಥರನ್ನು ದಸ್ತಗಿರಿ ಮಾಡಿರುವುದು ಶ್ಲಾಘನೀಯ. ಆದರೆ ಮುಂದೆ ಈ ರೀತಿಯ ಘಟನೆಗಳು ಮರುಕಳಿಸಿ ಸಮಾಜದ ಶಾಂತಿಗೆ ದಕ್ಕೆಯಾಗದಿರಲು ಮುಂಜಾಗ್ರತ ಕ್ರಮವನ್ನು ವಹಿಸುವ ಸಲುವಾಗಿ ನಾವು ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತಾ ಈ ದೂರು ನೀಡುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

”ಶ್ರೀರಾಮ ಸೇನೆಯು ಸಂವಿಧಾನ ವಿರೋಧಿ, ಸಮಾಜ ಘಾತುಕ ಹಾಗು ಭಯೋತ್ಪಾದಕ ಸಂಘಟನೆಯಾಗಿದ್ದು. ಈ ಸಂಘಟನೆಯನ್ನು ನಿಷೇಧಿಸಲು ಸರ್ಕಾರಕ್ಕೆ ಶಿಫಾರಸು ಮಾಡಲು ಕೋರುತ್ತೇವೆ. ತಪ್ಪಿತಸ್ಥರ ವಿರುದ್ಧ UAPA ಮತ್ತು NIA ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ದಲಿತ ಯುವಕರನ್ನು ದಾರಿ ತಪ್ಪಿಸಿ ಕೋಮುವಾದಿ ಸಂಘಟನೆಗಳಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ತಡೆಯಬೇಕು. ದಲಿತ ಯುವಕರು ಕೋಮುವಾದಿಗಳಾಗಿ ಬೆಳೆಯುವಲ್ಲಿ ಪ್ರಚೋದನೆ ಮಾಡುತ್ತಿರುವ ಶ್ರೀರಾಮ ಸೇನೆಯ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ಭಯೋತ್ಪಾದಕ ಮತ್ತು ಕೋಮುವಾದಿ ಸಂಘಟನೆಯಾದ ಶ್ರೀ ರಾಮ ಸೇನೆಯ ರಾಜ್ಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿರುದ್ಧವೂ ಪ್ರಕರಣವನ್ನು ದಾಖಲಿಸಿಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

”ಕೋಮುವಾದಿ ಸಂಘಟನೆಗಳಿಂದ ದಲಿತ ಯುವಕರನ್ನು ಆಚೆ ತಂದು ಅವರುಗಳು ಸಂವಿಧಾನದ ಅಡಿಯಲ್ಲಿ ತಮ್ಮ ಹಕ್ಕುಗಳನ್ನು ಹೊಂದಲು ಅಗತ್ಯ ಸಭೆಗಳನ್ನು ನಡೆಸಲು ಮತ್ತು ಅಗತ್ಯ ಸವಲತ್ತುಗಳನ್ನು ಕಲ್ಪಿಸಲು ಸರ್ಕಾರಕ್ಕೆ ಶಿಫಾರಸು ಮಾಡಲು ಈ ದೂರಿನೊಂದಿಗೇ ಕೋರುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂನೊಂದಿಗೆ ಮಾತನಾಡಿದ ದಲಿತ ಮುಖಂಡ ಭಾಸ್ಕರ್ ಪ್ರಸಾದ್ ಅವರು, ”ಇತ್ತೀಚೆಗೆ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋಸ್ ಮುತಾಲಿಕ್ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಇಲ್ಲಿಯ ದಲಿತ ಯುವಕರಲ್ಲಿ ಕೋಮುವಿಷವನ್ನು ತುಂಬಿದ್ದಾರೆ. ದಲಿತ ಯುವಕರನ್ನು ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

”ದೊಡ್ಡಬಳ್ಳಾಪುರದಲ್ಲಿ ದನಗಳನ್ನು ಹಿಂದಿನಿಂದಲೂ ಸಾಗಿಸಲಾಗುತ್ತದೆ, ಈಗಲೂ ಸಾಗಿಸಲಾಗುತ್ತಿದೆ. ಆದರೆ ಇಷ್ಟುದಿನ ಬಜರಂಗದಳ, ಶ್ರೀರಾಮ ಸೇನೆಯಂತಹ ಸಂಘಟನೆಗಳಿಗೆ ಹಪ್ತಾ ಹೋಗುತ್ತಿದ್ದರಿಂದ ಈವರೆಗೆ ದನಗಳನ್ನು ಸಾಗಿಸಲು ಸಮಸ್ಯೆಯಾಗಿರಲಿಲ್ಲ. ಆದರೆ ಇದೀಗ ಹಪ್ತಾ ನೀಡಿಲ್ಲ ಎನ್ನುವ ಕಾರಣಕ್ಕೆ ದನಗಳನ್ನು ಸಾಗಿಸುವ ಮುಸ್ಲಿಂ ಸಮುದಾಯದವರ ಮೇಲೆ ದಾಳಿ ನಡೆಸಲಾಗುತ್ತಿದೆ. ಈ ದಾಳಿಗೆ ದಲಿತ ಯುವಕರನ್ನು ಬಳಸಿಕೊಳ್ಳಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

”ದಲಿತ ಯುವಕರಿಗೆ ಉದ್ಯೋಗ ನೀಡುವ ಮೂಲಕ ಕೋಮುವಾದಿ ಸಂಘಟನೆಗಳಿಂದ ದೂರ ಉಳಿಯುವಂತೆ ಮಾಡಬೇಕು ಎಂದು ಈ ಮೂಲಕ ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಬಜರಂಗದಳ ಸೇರಿದಂತೆ ಅನೇಕ ಸಂಘಟನೆಗಳನ್ನು ನಿಷೇಧ ಮಾಡುತ್ತೇವೆ ಎಂದು ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಹೇಳಿಕೊಂಡಿತ್ತು. ಆದರೆ ಇದೀಗ ಅಧಿಕಾರಕ್ಕೆ ಬಂದಿದ್ದಾರೆ ಆದಷ್ಟು ಬೇಗ ಬಜರಂಗದಳ ಶ್ರೀರಾಮ್ ಸೇನೆಯಂತಹ ಸಂಘಟನೆಗಳನ್ನು ನಿಷೇಧ ಮಾಡಬೇಕು” ಎಂದು ಭಾಸ್ಕರ್ ಪ್ರಸಾದ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಪ್ರಚೋದನಕಾರಿ ಭಾಷಣ: ಹಿಂದುತ್ವ ನಾಯಕ ಮಿಲಿಂದ್ ಎಕ್ಬೋಟೆ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...