Homeಮುಖಪುಟ'ಜೈಶ್ರೀರಾಮ್' ಘೋಷಣೆ ಕೂಗುವಂತೆ ಆಗ್ರಹಿಸಿ ಯುವಕನ ಮೇಲೆ ಹಲ್ಲೆ

‘ಜೈಶ್ರೀರಾಮ್’ ಘೋಷಣೆ ಕೂಗುವಂತೆ ಆಗ್ರಹಿಸಿ ಯುವಕನ ಮೇಲೆ ಹಲ್ಲೆ

- Advertisement -
- Advertisement -

‘ಜೈ ಶ್ರೀ ರಾಮ್’ ಎಂದು ಹೇಳಲು ನಿರಾಕರಿಸಿದ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಮುಂಬೈನ ಕಾಂದಿವಲಿ ಪೂರ್ವದ ಕ್ರಾಂತಿ ನಗರದಲ್ಲಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿ ಸೂರಜ್ ತಿವಾರಿ, ಅರುಣ್ ಪಾಂಡೆ, ಪಂಡಿತ್ ಮತ್ತು ರಾಜೇಶ್ ಅವರ ಮೇಲೆ ಸೆಕ್ಷನ್ 323, 34, 341 , 504 ಮತ್ತು 506ರಡಿಯಲ್ಲಿ ಕುರಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ಬಜರಂಗದಳದ ಜೊತೆ ನಂಟನ್ನು ಹೊಂದಿದ್ದಾರೆಂದು ದೂರುದಾರರು ಆರೋಪಿಸಿದ್ದಾರೆ.

ಎಫ್ಐಆರ್ ಪ್ರಕಾರ, ಮಹೀಂದ್ರಾ ಕಂಪನಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಕಾಂದಿವಲಿ ಪೂರ್ವದ ಕ್ರಾಂತಿನಗರದಲ್ಲಿ ನೆಲೆಸಿರುವ ಸಿದ್ಧಾರ್ಥ್ ಅಂಗುರೆ (34) ಎಂಬವರು ರಾತ್ರಿ 11.30 ಕ್ಕೆ ತಮ್ಮ ಕಚೇರಿಯಿಂದ ಮನೆಗೆ ತೆರಳುತ್ತಿದ್ದರು. ಮಾರ್ಗಮಧ್ಯೆ ಅವರು ಫೋನ್‌ನಲ್ಲಿ ಸಹೋದರನಿಗೆ ಕರೆ ಮಾಡಿ ಮಾತನಾಡುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ನಾಲ್ಕು ವ್ಯಕ್ತಿಗಳು ಅವರನ್ನು ರಸ್ತೆಯಲ್ಲಿ ತಡೆದು ‘ಜೈ ಶ್ರೀ ರಾಮ್’  ಘೋಷಣೆ ಕೂಗುವಂತೆ ಬಲವಂತ ಮಾಡಿದ್ದಾರೆ. ಇದಕ್ಕೆ ಅಂಗುರೆ ನಿರಾಕರಿಸಿದ್ದಾರೆ.

ಈ ವೇಳೆ ಆರೋಪಿಗಳು ಆತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ನಂತರ ದೈಹಿಕವಾಗಿ ಹಲ್ಲೆ ನಡೆಸಿ, ನೆಲದ ಮೇಲೆ ಎಳೆದೊಯ್ದಿದ್ದಾರೆ. ಈ ಘಟನೆಯನ್ನು ಅವರ ಸಹೋದರ ಫೋನ್‌ನಲ್ಲಿ ಕೇಳಿಸಿಕೊಂಡಿದ್ದು ತಕ್ಷಣ ಸ್ಥಳಕ್ಕೆ ಆಗಮಿಸಿ ಅಂಗುರೆಯನ್ನು ಆರೋಪಿಗಳಿಂದ ರಕ್ಷಿಸಿ  ಕಾಂದಿವಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ. ಡಿಸ್ಚಾರ್ಜ್ ಆದ ಬಳಿಕ ಅವರು ಇದೀಗ ಕುರಾರ್ ಪೊಲೀಸ್ ಠಾಣೆಗೆ ತೆರಳಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಮುಂಬೈ ಕಾಂಗ್ರೆಸ್ ಈ ಘಟನೆಯನ್ನು ಖಂಡಿಸಿದ್ದು,  ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ಸಂತ್ರಸ್ತರ ನೆರವಿಗೆ ಧಾವಿಸಿದ ವಂಚಿತ್ ಬಹುಜನ್ ಅಘಾಡಿ ದಾಳಿಕೋರರ ವಿರುದ್ಧ ಎಫ್‌ಐಆರ್ ದಾಖಲಿಸಲು ಸಹಾಯ ಮಾಡಿದ್ದಾರೆ. ಇದಲ್ಲದೆ ಸುಜಾತ್ ಅಂಬೇಡ್ಕರ್ ಅವರು ಪೊಲೀಸರೊಂದಿಗೆ ಮಾತನಾಡಿ ಈ ಬಗ್ಗೆ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಇದನ್ನು ಓದಿ: ಚಿತ್ರದುರ್ಗ ಜಿಲ್ಲೆಯಲ್ಲಿ ಅಮಾನವೀಯ ಘಟನೆ: ಅಂತರ್ಜಾತಿ ವಿವಾಹವಾದ ವಿಕಲಚೇತನ ಜೋಡಿಗೆ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...