ಸಾಹಿತಿಗಳಿಗೆ ಪತ್ರದ ಮೂಲಕ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಘಪರಿವಾರದ ಕಾರ್ಯಕರ್ತನೋರ್ವನನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ದಾವಣಗೆರೆಯ ಹಿಂದೂ ಜಾಗರಣ ವೇದಿಕೆ ಸಹ ಸಂಚಾಲಕನೆನ್ನಲಾದ ಶಿವಾಜಿ ರಾವ್ ಜಾದವ್ ಎಂಬಾತನನ್ನು ಸಿಸಿಬಿ ಪೊಲೀಸರು ಶುಕ್ರವಾರ ತಡ ರಾತ್ರಿಯೇ ವಶಕ್ಕೆ ಪಡೆದಿದ್ದು, ದಾವಣಗೆರೆಯಿಂದ ಬೆಂಗಳೂರಿಗೆ ಕರೆ ತಂದಿದ್ದಾರೆ. ಆರೋಪಿಯನ್ನು 10 ದಿನಗಳ ಕಾಲ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ಸಾಹಿತಿಗಳಾದ ಕುಂ. ವೀರಭಧ್ರಪ್ಪ, ಬಿ ಟಿ ಲಲಿತಾ ನಾಯಕ್, ಕೆ ಮರುಳಸಿದ್ದಪ್ಪ, ಡಾ .ಜಿ ರಾಮಕೃಷ್ಣ, ಪ್ರೊ. ಎಸ್ ಜಿ ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ವಿಮಲಾ, ಶ್ರೀಪಾದ ಭಟ್, ಸುರೇಂದ್ರ ರಾವ್ ಸೇರಿದಂತೆ ಕೆಲ ಸಾಹಿತಿಗಳಿಗೆ ಅನಾಮಧೇಯವಾಗಿ ಕೊಲೆ ಬೆದರಿಕೆ ಪತ್ರಗಳು ಬರುತ್ತಿದ್ದವು. ಈ ಪ್ರಕರಣಗಳ ಸಮಗ್ರ ತನಿಖೆಗಾಗಿ ಎಸಿಪಿ ದರ್ಜೆಯ ಅಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚನೆ ಮಾಡಲಾಗಿತ್ತು.ಇದೀಗ ಪ್ರಕರಣಕ್ಕೆ ಸಂಬಂಧಿಸಿ ಮೊದಲ ಬಂಧನವಾಗಿದೆ.


