Homeಮುಖಪುಟಗಣಪತಿ ಮೂರ್ತಿ ಬಳಿ ಇಟ್ಟಿದ್ದ ಬಾಳೆಹಣ್ಣು ಕೊಂಡೊಯ್ದ ಶಂಕೆ: ಮುಸ್ಲಿಂ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿ...

ಗಣಪತಿ ಮೂರ್ತಿ ಬಳಿ ಇಟ್ಟಿದ್ದ ಬಾಳೆಹಣ್ಣು ಕೊಂಡೊಯ್ದ ಶಂಕೆ: ಮುಸ್ಲಿಂ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿ ಹತ್ಯೆ

- Advertisement -
- Advertisement -

ಗಣಪತಿ ಮೂರ್ತಿ ಬಳಿ ನೈವೇದ್ಯಕ್ಕೆಂದು ಇಡಲಾಗಿದ್ದ ಬಾಳೆಹಣ್ಣನ್ನು ಕೊಂಡೊಯ್ದ ಶಂಕೆಯಲ್ಲಿ ಮುಸ್ಲಿಂ ಯುವಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಅಮಾನುಷವಾಗಿ ಥಳಿಸಲಾಗಿದ್ದು, ಆತ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಇಸಾರ್ ಮೊಹಮ್ಮದ್ (26) ಥಳಿತದಿಂದ ಮೃತಪಟ್ಟ ಯುವಕನಾಗಿದ್ದಾನೆ. ಈತ ದೆಹಲಿಯ ಸುಂದರ್ ನಗರಿ ಪ್ರದೇಶದಲ್ಲಿ ವಾಸಿಸುತ್ತಿದ್ದನು.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ 17 ವರ್ಷದ ಅಪ್ರಾಪ್ತ ಸೇರಿ 7 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ದುಷ್ಕರ್ಮಿಗಳನ್ನು ಕಮಲ್, ಮನೋಜ್, ಯೂನಸ್, ಕಿಶನ್, ಲಕ್ಕಿ ಮತ್ತು ಪಪ್ಪು ಎಂದು ಗುರುತಿಸಲಾಗಿದೆ.

ಸುಂದರ್ ನಗರಿ ಪ್ರದೇಶದ ಜಿ4 ಬ್ಲಾಕ್‌ನಲ್ಲಿ ಗಣೇಶ ಚತುರ್ಥಿ ಆಚರಣೆಗೆ ಗಣಪತಿ ವಿಗ್ರಹವನ್ನು ಪ್ರತಿಷ್ಠಾಪಿಸಲಾಗಿತ್ತು. ಕಿರಿದಾದ ಓಣಿಯಲ್ಲಿ ವೇದಿಕೆ ಸಜ್ಜುಗೊಳಿಸಲಾಗಿತ್ತು. ಸೆ.27ರಂದು ಬೆಳಗ್ಗೆ ಗಣಪತಿ ಮೂರ್ತಿಯ ಮುಂದೆ ಇಟ್ಟಿದ್ದ ಬಾಳೆಹಣ್ಣು ಇಸಾರ್ ಎತ್ತಿಕೊಂಡು ಬಂದಿದ್ದ ಎಂದು ಆರೋಪಿಸಿ 8- 10 ಮಂದಿ ಆತನನ್ನು ಹಿಡಿದು ವೇದಿಕೆಯಿಂದ ಕೇವಲ 20 ಅಡಿ ದೂರದಲ್ಲಿರುವ ವಿದ್ಯುತ್ ಕಂಬಕ್ಕೆ ಕಟ್ಟಿ ಸುಮಾರು ಎರಡು ಗಂಟೆಗಳ ಕಾಲ ತೀವ್ರವಾಗಿ ಥಳಿಸಿದ್ದಾರೆ. ಹಲ್ಲೆಯ ವೀಡಿಯೊಗಳನ್ನು ರೆಕಾರ್ಡ್ ಮಾಡಲಾಗಿದೆ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಅದನ್ನು ವೈರಲ್‌ ಮಾಡಲಾಗಿದೆ.

G4 ಬ್ಲಾಕ್‌ನ ನಿವಾಸಿಯೊಬ್ಬರು ಈ ಬಗ್ಗೆ ಮಾತನಾಡಿದ್ದು,ಬೆಳಿಗ್ಗೆ 4.30 ರ ಸುಮಾರಿಗೆ ನಾನು ಜೋರಾಗಿ ಕಿರುಚಾಟ ಕೇಳಿ ಎಚ್ಚರಗೊಂಡೆ. ನಾನು ಹೊರಗೆ ಬಂದಾಗ ಜನರ ಗುಂಪೊಂದು ಯಾರನ್ನೋ ಅಮಾನುಷವಾಗಿ ಥಳಿಸುತ್ತಿರುವುದನ್ನು ಕಂಡು ಗಾಬರಿಯಾಯಿತು. ಈ ವೇಳೆ ನೆರೆಹೊರೆಗೆ ಎಚ್ಚರಿಸಿದೆ ಎಂದು ಹೇಳಿದ್ದಾರೆ.

ಇಸಾರ್ ಗಂಭೀರವಾಗಿ ಗಾಯಗೊಂಡು ಚಲಿಸಲು ಸಾಧ್ಯವಾಗಲಿಲ್ಲ. ಅವರನ್ನು ಮನೆಗೆ ಹೇಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದಿಲ್ಲ. ಘಟನೆ ನಡೆದ ಸ್ಥಳದಿಂದ ಕೇವಲ 200 ಮೀಟರ್ ದೂರದಲ್ಲಿ ಇಸಾರ್ ಅವರ ಮನೆ ಇದೆ. ಅಲ್ಲಿ ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಇಸಾರ್ ತಂದೆ ವಾಜಿದ್ ಹಣ್ಣು ಮಾರಾಟಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ನಾಲ್ವರು ಪುತ್ರಿಯರಿದ್ದಾರೆ. ಇಸಾರ್ ಅವರ ತಾಯಿ ಕೆಲವು ವರ್ಷಗಳ ಹಿಂದೆ ನಿಧನರಾಗಿದ್ದರು.

ಗಣಪತಿಗೆ ಅರ್ಪಿಸಿದ ಪ್ರಸಾದವನ್ನು ತೆಗೆದುಕೊಂಡಿದ್ದಾನೆಂದು ಅವರು ನನ್ನ ಮಗನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನಾನು ಅರಿತುಕೊಂಡೆ. ಅವರು ನನ್ನ ಮಗನ ಕೈ ಮತ್ತು ಕಾಲುಗಳನ್ನು ಬಿಗಿಯಾಗಿ ಕಟ್ಟಿಹಾಕಿದ್ದಾರೆ. ನೀರು ಕೇಳಿದರೂ ಕೊಡದೆ ಅವರು ಅವನಿಗೆ ಅಮಾನವೀಯವಾಗಿ ಥಳಿಸಿದ್ದಾರೆ. ನಮಗೆ ನ್ಯಾಯ ಬೇಕು. ನಾನು ಹಲವು ಬಾರಿ ಪ್ರಸಾದ ತಿಂದಿದ್ದೇನೆ. ಇಲ್ಲಿನ ಹಿಂದೂ ಬಾಂಧವರು ನನಗೆ ಪ್ರಸಾದ ಕೊಟ್ಟಿದ್ದಾರೆ. ನನ್ನ ಮಗನ ಅಗಲಿಕೆ ನಮ್ಮ ಜೀವನವನ್ನು ಛಿದ್ರಗೊಳಿಸಿದೆ ಎಂದು ಇಸಾರ್ ತಂದೆ ವಾಜಿದ್ ದಿ ವೈರ್‌ ಜೊತೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ.

ಮತ್ತೊಬ್ಬ ಸ್ಥಳೀಯ ಶ್ಯಾಮ್ ಅವರು ಈ ಬಗ್ಗೆ ಮಾತನಾಡಿದ್ದು, ಇಸಾರ್ ಪರಿಚಿತ, ಕಳ್ಳತನ ಮಾಡಿದ್ದಾನೆಂದು ಅವನನ್ನು ಥಳಿಸಲಾಯಿತು ಎಂದು ಕೆಲವರು ಹೇಳಿಕೊಂಡಿದ್ದಾರೆ. ಅವನು ನಿರಪರಾಧಿ ಎಂದು ನಾನು ಬಲವಾಗಿ ನಂಬುತ್ತೇನೆ. ಅವನು ಇತರರಿಗೆ ಸಹಾಯ ಮಾಡುತ್ತಿದ್ದ ಮತ್ತು ಅವನು ಕಳ್ಳತನ ಈವರೆಗೆ ಮಾಡಿದ ಬಗ್ಗೆ ಯಾವುದೇ ಸಾಕ್ಷಿ ಇಲ್ಲ ಎಂದು ಹೇಳಿದ್ದಾರೆ.

ಈಶಾನ್ಯ ಡಿಸಿಪಿ ಜಾಯ್ ಎನ್ ಟಿರ್ಕಿ ಈ ಬಗ್ಗೆ ಮಾತನಾಡಿದ್ದು , ಮುಂಜಾನೆ 5 ಗಂಟೆಯ ಸುಮಾರಿಗೆ ಅವರು ಇಸಾರ್‌ನನ್ನು ಹಿಡಿದಿದ್ದಾರೆ. ಕಳ್ಳನೆಂದು ಭಾವಿಸಿ ಆತನಿಗೆ ಪ್ರಶ್ನೆಗಳನ್ನು ಕೇಳಿದರು ಆದರೆ ಅವರು ಮಾನಸಿಕವಾಗಿ ಅಸ್ವಸ್ಥರಾಗಿದ್ದರಿಂದ ಸರಿಯಾಗಿ ಉತ್ತರಿಸಲು ಸಾಧ್ಯವಾಗಲಿಲ್ಲ. ನಂತರ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ ಎಂದು ಹೇಳಿದ್ದಾರೆ.

ಇಸಾರ್‌ನ ನೆರೆಹೊರೆಯವರು ಮತ್ತು ಕುಟುಂಬದ ಸದಸ್ಯರು ಅವರು ಮಾನಸಿಕವಾಗಿ ಅಸ್ವಸ್ಥರಾಗಿದ್ದರು ಎಂಬ ಹೇಳಿಕೆಯನ್ನು ಸುಳ್ಳು ಎಂದು ಹೇಳಿದ್ದಾರೆ.

ನೆರೆಹೊರೆಯವರಾದ ಮೊಹಮ್ಮದ್ ಸಮೀಮ್ ಈ ಕುರಿತು ಮಾತನಾಡಿದ್ದು, ಇಸಾರ್ ಯಾವುದೇ ಮಾನಸಿಕ ಅಸ್ವಸ್ಥ ಯುವಕ ಅಲ್ಲ. ನಾನು ಅವರನ್ನು ಬಹಳ ಸಮಯದಿಂದ ಬಲ್ಲೆ. ಅವರ ಮೇಲಿನ ಕಳ್ಳತನದ ಆರೋಪ ನಿರಾಧಾರ. ಅವರು ಕೇವಲ ಮುಸ್ಲಿಂ ಮತ್ತು ಪ್ರಸಾದ ತೆಗೆದುಕೊಂಡ ಕಾರಣಕ್ಕಾಗಿ ಈ ಕ್ರೌರ್ಯಕ್ಕೆ ಒಳಗಾಗಿ ಹತ್ಯೆಯಾಗಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಗುಜರಾತ್‌: ದಲಿತ ಇಂಜಿನಿಯರ್‌ಗೆ ಜಾತಿ ನಿಂದಿಸಿ ಥಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...