Homeಮುಖಪುಟಪ್ರಶ್ನೆ ಕೇಳಿದ ಮಹಿಳಾ ವರದಿಗಾರ್ತಿಗೆ ಅವಮಾನಿಸಲು ಮುಂದಾದ ಅಣ್ಣಾಮಲೈ: ಪತ್ರಕರ್ತರಿಂದ ಖಂಡನೆ

ಪ್ರಶ್ನೆ ಕೇಳಿದ ಮಹಿಳಾ ವರದಿಗಾರ್ತಿಗೆ ಅವಮಾನಿಸಲು ಮುಂದಾದ ಅಣ್ಣಾಮಲೈ: ಪತ್ರಕರ್ತರಿಂದ ಖಂಡನೆ

- Advertisement -
- Advertisement -

ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರು, ಪ್ರಶ್ನೆ ಕೇಳಿದ ಮಹಿಳಾ ವರದಿಗಾರ್ತಿಯನ್ನು ಕರೆದು ಅವಮಾನಿಸಲು ಮುಂದಾಗಿ, ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದಾರೆ.

”ಅಣ್ಣಾಮಲೈ ಅವರು ರಾಜ್ಯ ಘಟಕದ ಅಧ್ಯಕ್ಷರಾಗಿಲ್ಲದಿದ್ದರೆ ಬಿಜೆಪಿಯಲ್ಲೇ ಇರುತ್ತೀರಾ?” ಎಂದು ಮಹಿಳಾ ವರದಿಗಾರ್ತಿ ಅಣ್ಣಾಮಲೈ ಅವರನ್ನು ಕೇಳಿದಾಗ, ಇಂತಹ ಪ್ರಶ್ನೆಯನ್ನು ಯಾರು ಕೇಳಿದ್ದಾರೆ ಎನ್ನುವುದು ಎಲ್ಲರಿಗೂ ತಿಳಿಯಬೇಕು ಹಾಗಾಗಿ ಅವರು ತಮ್ಮ ಬಳಿ ಬಂದು ನಿಲ್ಲುವಂತೆ ಹೇಳಿದ್ದಾರೆ.

”ನನಗೆ ಇಂತಹ ಪ್ರಶ್ನೆಯನ್ನು ಕೇಳಿದವರು ಯಾರು? ಅವರು ನನ್ನ ಪಕ್ಕದಲ್ಲಿ ಬಂದು ನಿಲ್ಲಿ.. ಟಿವಿ ಮೂಲಕ ಜನ ನೋಡಲಿ. ಪ್ರಶ್ನೆ ಕೇಳಲು ಒಂದು ಮಾರ್ಗವಿದೆ. ಇಂತಹ ಪ್ರಶ್ನೆ ಕೇಳಿದ ವ್ಯಕ್ತಿ ಯಾರೆಂದು 8 ಕೋಟಿ ಜನರಿಗೆ ತಿಳಿಯಬೇಕು” ಎಂದು ಅಣ್ಣಾಮಲೈ ಹೇಳಿದ್ದಾರೆ.

ಅಣ್ಣಾಮಲೈ ಅವರು ಮಹಿಳಾ ವರದಿಗಾರ್ತಿಗೆ ಕ್ಯಾಮೆರಾಗಳ ಮುಂದೆ ನಿಲ್ಲುವಂತೆ ಕೇಳುತ್ತಲೇ ಇದ್ದರು ಆದರೆ ಸಹ ವರದಿಗಾರರು ಅವರನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದರು.

”ನಾನು ಪೂರ್ಣ ಸಮಯದ ರಾಜಕಾರಣಿ ಅಲ್ಲ. ರೈತನಾಗಿರಲು ನಾನು ಬಯಸುತ್ತೇನೆ.. ಆನಂತರ ರಾಜಕಾರಣಿ ಮತ್ತು ನಂತರ ಬಿಜೆಪಿಯೊಂದಿಗೆ” ಎಂದು ಅವರು ಹೇಳಿದರು.

ಅಣ್ಣಾಮಲೈ ಅವರು ವರದಿಗಾರ್ತಿಗೆ ಆ ರೀತಿ ಹೇಳಿದ್ದಕ್ಕೆ ಸಹ ವರದಿಗಾರರು ಆಕ್ಷೇಪ ವ್ಯಕ್ತಪಡಿಸಿದರು. ಆ ಬಳಿಕ ಅಣ್ಣಾಮಲೈ ಅವರು ”ವರದಿಗಾರರಿಗೆ ಸರಿಯಾದ ರೀತಿಯಲ್ಲಿ ಪ್ರಶ್ನೆಗಳನ್ನು ಕೇಳುವಂತೆ ಸಲಹೆ ನೀಡುತ್ತಿದ್ದೇನೆ” ಎಂದು ಹೇಳಿದರು.

”ಒಳ್ಳೆಯ ಉದ್ದೇಶದಿಂದ ನಾನು ನಿಮಗೆ ಸಲಹೆ ನೀಡುತ್ತಿದ್ದೇನೆ ಸಹೋದರಿ” ಎಂದು ಬಿಜೆಪಿ ನಾಯಕ ಹೇಳಿದರು.

ಕೊಯಮತ್ತೂರು ಪ್ರೆಸ್ ಕ್ಲಬ್ ಅಣ್ಣಾಮಲೈ ಅವರ ಕ್ರಮವನ್ನು ಖಂಡಿಸಿದೆ. ಪತ್ರಿಕೋದ್ಯಮ ನೀತಿಯನ್ನು ಸಾರುವ ಮೊದಲು ಅಣ್ಣಾಮಲೈ ಅವರು ನಾಯಕರಾಗುವ ನೀತಿಯನ್ನು ಕಲಿತು ಗೌರವಯುತವಾಗಿ ನಡೆದುಕೊಳ್ಳಬೇಕು. ಪತ್ರಿಕೋದ್ಯಮವು ನಾಗರಿಕರು ಮತ್ತು ಸಾರ್ವಜನಿಕ ಜೀವನದಲ್ಲಿ ಇರುವವರ ನಡುವೆ ಸೇತುವೆಯಾಗಿ ನಿಂತಿದೆ ಎಂದು ಕೊಯಮತ್ತೂರು ಪ್ರೆಸ್ ಕ್ಲಬ್ ಅಧ್ಯಕ್ಷ ಎ.ಆರ್.ಬಾಬು ಹೇಳಿದರು.

ಇದನ್ನೂ ಓದಿ: ಅಣ್ಣಾಮಲೈ ವಿರುದ್ಧ ಆಕ್ರೋಶ: ಬಿಜೆಪಿ ಜೊತೆಗಿನ ಮೈತ್ರಿ ಮುರಿದ ಎಐಎಡಿಎಂಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...