Homeಕರ್ನಾಟಕಕೋಲಾರ: SC-ST ವಿದ್ಯಾರ್ಥಿಗಳ ಕುಂದುಕೊರತೆ ನಿವಾರಿಸುವಂತೆ ಮೌನ ಪ್ರತಿಭಟನೆ

ಕೋಲಾರ: SC-ST ವಿದ್ಯಾರ್ಥಿಗಳ ಕುಂದುಕೊರತೆ ನಿವಾರಿಸುವಂತೆ ಮೌನ ಪ್ರತಿಭಟನೆ

- Advertisement -
- Advertisement -

ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ನೀಡಬೇಕಾದ ಕೆಲವು ಸೌಲಭ್ಯಗಳನ್ನು ನೀಡದ ಕಾರಣಕ್ಕೆ ಕೋಲಾರದ ಸ್ನಾತಕೋತ್ತರ ಕೇಂದ್ರ ಮಂಗಸಂದ್ರದಲ್ಲಿ ವಿದ್ಯಾರ್ಥಿಗಳಿಂದ ”ಮೌನ ಪ್ರತಿಭಟನೆ” ನಡೆಸಲಾಯಿತು.

ಈ ಪ್ರತಿಭಟನೆ ಬೆಳಗ್ಗೆ ಎಂಟು ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಿತು. ಪ್ರತಿಭಟನಾ ಸ್ಥಳಕ್ಕೆ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಡಾ. ಕುಮುದ ಡಿ ಅವರು ಬಂದು ವಿದ್ಯಾರ್ಥಿಗಳ ಮನವೊಲಿಸಲು ಪ್ರಯತ್ನಿಸಿದರು. ಆದರೆ ಅವರ ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ನಿಲ್ಲಿಸಲ್ಲ ಎಂದು ಹೇಳಿದರು.

ವಿದ್ಯಾರ್ಥಿಗಳ ಕುಂದು ಕೊರತೆಗಳ ಬಗ್ಗೆ ಸ್ಪಷ್ಟ ಮಾಹಿತಿ ನೀಡದ ಕಾರಣದಿಂದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ನಿರಂಜನ ವಾನಳ್ಳಿ ಯವರು ಬರಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದರು. ಆ ಬಳಿಕೆ ಪ್ರತಿಭಟನಾ ಸ್ಥಳಕ್ಕೆ ಕುಲಪತಿಗಳು ಭೇಟಿ ನೀಡಿದರು. ಈ ವೇಳೆ ಅವರಿಂದಲೂ ಸಹ ಸೂಕ್ತವಾದ ಮಾಹಿತಿಯಾಗಲಿ, ಭರವಸೆಯಾಗಲಿ ನೀಡದ ಕಾರಣ ಪ್ರತಿಭಟನೆಯು ಮುಂದುವರೆಯಿತು.

ವಿಶ್ವವಿದ್ಯಾಲಯದ ಮೌಲ್ಯಮಾಪಕರಾದ ಡಿ ಡೊಮಿನಿಕ್ ಅವರು ಮನವಿ ಪತ್ರವನ್ನು ಪಡೆದರು. ಆ ಬಳಿಕ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳ ಜೊತೆ ಮಾತನಾಡಿ ಸೂಕ್ತ ಕ್ರಮವನ್ನು ಕೈಗೊಳ್ಳಲಾಗುವುದೆಂದು ಬಾಯಿ ಮಾತಿನಲ್ಲಿ ಹೇಳಿದರು. ಆದರೆ ಯಾವುದೇ ರೀತಿಯ ಲಿಖಿತ ರೂಪದಲ್ಲಿ ಭರವಸೆಯನ್ನು ನೀಡದೇ ಇರುವುದು, ಈ ಮೌನ ಪ್ರತಿಭಟನೆಗೆ ಅರ್ಥವೇ ಇಲ್ಲದಂತಾಯಿತು ಎಂದು ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ನಮ್ಮ ಬೇಡಿಕೆಗಳ ಕುರಿತು ಕ್ರಮ ಕೈಗೊಳ್ಳದೆ ಇದ್ದರೆ ಮುಂದೆ ತೀವ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ವಿದ್ಯಾರ್ಥಿಗಳಿಗಳು ತಿಳಿಸಿದರು.

ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಕುಂದು ಕೊರತೆಗಳ ಕುರಿತು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಸಚಿವರಿಗೆ ಮನವಿ ಪತ್ರ ನೀಡಲಾಗಿದೆ.

1. SC-ST ವಿದ್ಯಾರ್ಥಿಗಳ ಪ್ರವೇಶ ಶುಲ್ಕದ ಕುರಿತು..

2. SC-ST ಸೆಲ್‌ನ ವಿಚಾರದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯ ಕೊರತೆ.

  • TSP-SSP ಹಣದ ಮಾಹಿತಿ
  • ಲ್ಯಾಪ್‌ಟಾಪ್ ವಿತರಣೆ ಕುರಿತು
  • ಆರೋಗ್ಯಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ನೀಡಬೇಕಾದ ಸೌಲಭ್ಯ ಕುರಿತು

3. ವಿದ್ಯಾರ್ಥಿ ನಿಲಯದಲ್ಲಿ ಉಳಿದುಕೊಂಡಿರುವಂತಹ SC-ST ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ನೀಡಬೇಕಾಗಿರುವ ಬೆಡ್ (ಹಾಸಿಗೆ) ಮತ್ತು ಇತರೆ ಸಾಮಗ್ರಿಗಳನ್ನು ಇಲ್ಲಿಯವರೆಗೆ ನೀಡದಿರುವುದು.

4. NET-KSET ಪರೀಕ್ಷೆಗೆ ನೀಡಬೇಕಾಗಿರುವ ಪುಸ್ತಕಗಳನ್ನು ಇನ್ನೂ ನೀಡದಿರುವುದು.

5. ವಿದ್ಯಾರ್ಥಿ ನಿಲಯದಲ್ಲಿ ಉಳಿದುಕೊಂಡಿರುವ SC-ST ವಿದ್ಯಾರ್ಥಿಗಳಿಗೆ ಸ್ಟೇ ಫಂಡ್ ನೀಡದಿರುವುದು.

6. ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡದ ಪುರುಷರ ವಿದ್ಯಾರ್ಥಿ ನಿಲಯದ ಕಟ್ಟಡ ನಿರ್ಮಾಣದ ಕುರಿತು.

ಈ ಎಲ್ಲಾ ರೀತಿಯ ಸೌಲಭ್ಯಗಳನ್ನು ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡದ ಸ್ನಾತಕೋತರ ವಿದ್ಯಾರ್ಥಿಗಳಿಗೆ ನೀಡಬೇಕು ಎಂದು ವಿದ್ಯಾರ್ಥಿಗಳು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...

ಇರಾನ್‌ನೊಂದಿಗೆ ವ್ಯವಹಾರ ನಡೆಸುವ ರಾಷ್ಟ್ರಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್

ಇರಾನ್ ಜೊತೆ ವ್ಯಾಪಾರ ನಡೆಸುವ ಯಾವುದೇ ದೇಶದ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ (ಜ.12) ಘೋಷಿಸಿದ್ದಾರೆ. "ತಕ್ಷಣದಿಂದಲೇ ಜಾರಿಗೆ ಬರುವಂತೆ, ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗೆ ವ್ಯವಹಾರ...

ಮಂಗಳೂರು | ಬಾಂಗ್ಲಾದೇಶಿಯೆಂದು ಆರೋಪಿಸಿ ವಲಸೆ ಕಾರ್ಮಿಕನ ಮೇಲೆ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಬಾಂಗ್ಲಾದೇಶಿ ಎಂದು ಆರೋಪಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಕೊಲೆ ಯತ್ನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರಿನ ಕಾವೂರು ಪೊಲೀಸರು ಸೋಮವಾರ (ಜ.12)...

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...