Homeಮುಖಪುಟಗೇಮಿಂಗ್ App ಪ್ರಕರಣ: ರಣಬೀರ್ ಕಪೂರ್‌ಗೆ ಇಡಿಯಿಂದ ಸಮನ್ಸ್

ಗೇಮಿಂಗ್ App ಪ್ರಕರಣ: ರಣಬೀರ್ ಕಪೂರ್‌ಗೆ ಇಡಿಯಿಂದ ಸಮನ್ಸ್

- Advertisement -
- Advertisement -

ಗೇಮಿಂಗ್ ಆಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಣಬೀರ್ ಕಪೂರ್‌ಗೆ ಶುಕ್ರವಾರ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.

ಗೇಮ್‌ ಆಪ್‌ಗೆ ಪ್ರಚಾರ ನೀಡುವ ಹಲವಾರು ಜಾಹೀರಾತುಗಳಲ್ಲಿ ನಟ ಕಾಣಿಸಿಕೊಂಡಿದ್ದಾರೆ. ಒಂದು ಅಪರಾಧದ ಆದಾಯದಿಂದ ಅವರಿಗೆ ದೊಡ್ಡ ಮೊತ್ತದ ಹಣವನ್ನು ನೀಡಲಾಗಿದೆ ಎಂದು ತನಿಖಾ ಸಂಸ್ಥೆ ಹೇಳಿಕೊಂಡಿದೆ.

ಮಹಾದೇವ್‌ ಆನ್‌ಲೈನ್ ಬುಕ್‌ ಆಪ್‌ಗೆ ರಣಬೀರ್ ಕಪೂರ್ ಸೋಷಿಯಲ್‌ ಮೀಡಿಯಾ ಇನ್‌ಪ್ಲೂಯನ್ಸರ್‌ ಆಗಿದ್ದಾರೆ. ಅಲ್ಲದೆ ಈ ಆಪ್‌ಗಾಗಿ ಪ್ರಚಾರ ಕೈಗೊಳ್ಳಲು ಹಣವನ್ನು ಸ್ವೀಕರಿಸಿದ್ದಾರೆ ಎಂದು ವಿಚಾರಣೆಗೆ ಹಾಜರಾಗುವಂತೆ ರಣಬೀರ್‌ ಕಪೂರ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್‌ ನೀಡಿದೆ.

ಬಾಲಿವುಡ್ ನಟರು, ಗಾಯಕರು ಮತ್ತು ಹಾಸ್ಯನಟರು ಸೇರಿದಂತೆ ಹಲವಾರು ಖ್ಯಾತ ಸೆಲೆಬ್ರಿಟಿಗಳಿಗೆ ಪ್ರಕರಣದಲ್ಲಿ ಸಮನ್ಸ್ ನೀಡುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

ಕಳೆದ ತಿಂಗಳು ಆನ್‌ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸು ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾ ಸಂಸ್ಥೆ  417 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.

ಛತ್ತೀಸ್‌ಗಢದ ಭಿಲಾಯಿ ಮೂಲದ ಕಂಪನಿಯ ಪ್ರವರ್ತಕರು ಇಂತಹ 4-5 ಆ್ಯಪ್‌ಗಳನ್ನು ನಡೆಸುತ್ತಿದ್ದು, ಅವರೆಲ್ಲರೂ ದಿನಕ್ಕೆ ಸುಮಾರು 200 ಕೋಟಿ ಲಾಭ ಗಳಿಸುತ್ತಿದ್ದಾರೆ ಎಂದು ತನಿಖಾ ಸಂಸ್ಥೆ ತಿಳಿಸಿದೆ.

ಗೇಮಿಂಗ್ ಅಪ್ಲಿಕೇಶನ್‌ನ್ನು ಯುಎಇಯ ಕೇಂದ್ರ ಕಚೇರಿಯಿಂದ ನಡೆಸಲಾಗುತ್ತಿದೆ ಎಂದು ತನಿಖಾ ಸಂಸ್ಥೆ ತನಿಖೆ ತೋರಿಸಿದೆ. ಆ್ಯಪ್ ಶ್ರೀಲಂಕಾ, ನೇಪಾಳದಲ್ಲೂ ತನ್ನ ಕಾಲ್ ಸೆಂಟರ್‌ಗಳನ್ನು ಹೊಂದಿದೆ ಎನ್ನಲಾಗಿದೆ.

ಹೊಸ ಬಳಕೆದಾರರನ್ನು ಆಕರ್ಷಿಸಲು ಬೆಟ್ಟಿಂಗ್ ವೆಬ್‌ಸೈಟ್‌ಗಳ ಜಾಹೀರಾತಿಗಾಗಿ ಭಾರತದಲ್ಲಿ ದೊಡ್ಡ ಮೊತ್ತದ ವೆಚ್ಚವನ್ನು ಮಾಡುತ್ತಿತ್ತು ಎಂದು ಕೂಡ ತನಿಖೆಯಿಂದ ಬಯಲಾಗಿದೆ.

ಇದನ್ನು ಓದಿ: ರಸಾಯನಶಾಸ್ತ್ರ ವಿಭಾಗದ ಮೂವರು ವಿಜ್ಞಾನಿಗಳಿಗೆ ನೊಬೆಲ್ ಬಹುಮಾನ ಘೋಷಣೆ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...