2023ರ ಸಾಲಿನ ಸಾಹಿತ್ಯ ಕ್ಷೇತ್ರದ ನೊಬೆಲ್ ಬಹುಮಾನವನ್ನು ಘೋಷಣೆ ಮಾಡಲಾಗಿದ್ದು, ನಾರ್ವೆಯ ಲೇಖಕ, ಕಾದಂಬರಿಕಾರ ಮತ್ತು ನಾಟಕಕಾರ ಜಾನ್ ಫೋಸ್ಸೆ 2023ರ ಸಾಹಿತ್ಯ ನೊಬೆಲ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಸ್ವೀಡಿಷ್ ಅಕಾಡೆಮಿಯ ಖಾಯಂ ಕಾರ್ಯದರ್ಶಿ ಮ್ಯಾಟ್ಸ್ ಮಾಲ್ಮ್ ಗುರುವಾರ ಸ್ಟಾಕ್ಹೋಮ್‌ನಲ್ಲಿ ಪ್ರಶಸ್ತಿಯನ್ನು ಘೋಷಿಸಿದ್ದಾರೆ. ನೊಬೆಲ್ ಪ್ರಶಸ್ತಿಗಳು 11 ಮಿಲಿಯನ್ ಸ್ವೀಡಿಷ್ ಕ್ರೋನರ್ ನಗದು ಬಹುಮಾನವನ್ನು ಒಳಗೊಂಡಿವೆ.
64 ವರ್ಷದ ಫೋಸ್ಸೆ ಎರಡು ಡಜನ್‌ಗಿಂತಲೂ ಹೆಚ್ಚು ನಾಟಕಗಳನ್ನು ಬರೆದಿದ್ದರು. ನಾಲ್ಕು ದಶಕಗಳ ಕಾಲ ಕಾದಂಬರಿಗಳು, ಪ್ರಬಂಧಗಳು, ಕವನ ಸಂಕಲನಗಳು ಮತ್ತು ಮಕ್ಕಳ ಪುಸ್ತಕಗಳನ್ನು ಕೂಡ ಪ್ರಕಟಿಸಿದ್ದಾರೆ. ಇವರ ಲೇಖನ, ಬರಹಗಳು 40 ಭಾಷೆಗಳಲ್ಲೂ ಭಾಷಾಂತರ ಮಾಡಲಾಗಿದೆ.
2023ರ ಸಾಲಿನ ರಸಾಯನಶಾಸ್ತ್ರ ವಿಭಾಗಕ್ಕೆ ನೊಬೆಲ್ ಪ್ರಶಸ್ತಿಯನ್ನು ನಿನ್ನೆ ಘೋಷಿಸಲಾಗಿತ್ತು. ವಿಜ್ಞಾನಿಗಳಾದ ಮೌಂಗಿ ಬವೆಂಡಿ, ಲೂಯಿಸ್ ಬ್ರೂಸ್ ಮತ್ತು ಅಲೆಕ್ಸಿ ಎಕಿಮೊವ್ ಅವರಿಗೆ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ ಸಿಕ್ಕಿತ್ತು.
2023ರ ಭೌತಶಾಸ್ತ್ರದ ನೊಬೆಲ್ ಬಹುಮಾನವನ್ನು ವಿಜ್ಞಾನಿಗಳಾದ ಪಿಯರೆ ಅಗೊಸ್ಟಿನಿ, ಫೆರೆಂಕ್ ಕ್ರೌಸ್ಜ್ ಮತ್ತು ಆನ್ನೆ ಎಲ್ ಹುಲ್ಲಿಯರ್ ಅವರಿಗೆ ನೀಡಲಾಗಿದೆ.
ಇದಲ್ಲದೆ ಕೋವಿಡ್ -19 ವಿರುದ್ಧ ಹೋರಾಡಲು ಮೊದಲು ಲಸಿಕೆ ಅಭಿವೃದ್ಧಿಪಡಿಸಿದ ವಿಜ್ಞಾನಿಗಳಾದ ಕ್ಯಾಟಲಿನ್ ಕಾರಿಕೊ ಹಾಗೂ ಡ್ರ್ಯೂ ವೈಸ್‌ಮನ್ ಅವರಿಗೆ ಕೂಡ 2023ನೇ ಸಾಲಿನ ವೈದ್ಯಕೀಯ ವಿಭಾಗದ ನೋಬೆಲ್ ಪುರಸ್ಕಾರ ದೊರೆತಿದೆ.
ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ಈ ಬಹುಮಾನವನ್ನು ನೀಡಲಿದೆ. ಈ ವಾರದಲ್ಲಿ ವೈದ್ಯಕೀಯ, ಭೌತಶಾಸ್ತ್ರ ರಸಾಯನ ಶಾಸ್ತ್ರ ಮತ್ತು ಸಾಹಿತ್ಯ ವಿಭಾಗಕ್ಕೆ ಬಹುಮಾನವನ್ನು ನೀಡಲಾಗಿದೆ.
ಇದನ್ನು ಓದಿ: ಬಿಹಾರ: ಪೊಲೀಸ್ ದಾಳಿ ವೇಳೆ ಬಾಲಕ ಸಾವು; ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಆಕ್ರೋಶಿತ ಗುಂಪು


