Homeಕರ್ನಾಟಕ'ಬಸ್ಸಿಗೆ ಬೆಂಕಿ ಹಾಕುತ್ತೇನೆ, ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆʼ ಎಂದ ಪುನೀತ್ ಕೆರೆಹಳ್ಳಿ ವಿರುದ್ಧ ಕಾಂಗ್ರೆಸ್ ದೂರು

‘ಬಸ್ಸಿಗೆ ಬೆಂಕಿ ಹಾಕುತ್ತೇನೆ, ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆʼ ಎಂದ ಪುನೀತ್ ಕೆರೆಹಳ್ಳಿ ವಿರುದ್ಧ ಕಾಂಗ್ರೆಸ್ ದೂರು

- Advertisement -
- Advertisement -

”ರಾಜ್ಯ ಸರಕಾರ ನನ್ನ ಮನವಿ ಸ್ವೀಕರಿಸದಿದ್ದರೆ ಬಸ್ಸಿಗೆ ಬೆಂಕಿ ಹಾಕುತ್ತೇನೆ, ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ” ಎಂದು ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಹೇಳಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಬೆಂಗಳೂರು ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿ ವಿಧಾನಸೌಧ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ರಾಜ್ಯ ಸರಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ಅಸ್ವಸ್ಥಗೊಂಡ ಹಿನ್ನಲೆಯಲ್ಲಿ ಪೊಲೀಸರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ತನ್ನ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದ್ದ ಪುತ್ತೂರು‌ ಪುತ್ತಿಲ ಪರಿವಾರದ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಅವರ ನಿಯೋಗದೊಂದಿಗೆ ಮಾತನಾಡುತ್ತಿದ್ದ ಪುನೀತ್‌, ”ನಾನು ನಿಮಗೆ ನಿಮ್ಮ ತಮ್ಮನಾಗಿ ಬೇಕು ಅಂದ್ರೆ, ಕಾಂಗ್ರೆಸ್‌ ಸರಕಾರದ ಯಾವುದಾದರೂ ಪ್ರತಿನಿಧಿ ನನ್ನನ್ನು ಭೇಟಿಯಾಗಿ, ನನ್ನ ಮನವಿಯನ್ನು ಸೀಕರಿಸಬೇಕು. ಅವರು ಬರದೇ ಇದ್ದರೆ ಬಸ್ಸಿಗೆ ಬೆಂಕಿ ಹಾಕುವ… ಪೊಲೀಸರನ್ನು ಜಾಗ ಬಿಡಲಿಕ್ಕೆ ಹೇಳಿ, ನಾನು ಹೋಗ್ತೇನೆ. ನನ್ನನ್ನು ಇಲ್ಲಿಂದ ಬಿಡುಗಡೆಗೊಳಿಸಿದರೆ ಮತ್ತೆ ಸತ್ಯಾಗ್ರಹ ಏಕೆ ಮಾಡಲಿ? ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ” ಎಂದು ಪುನೀತ್ ಕೆರೆಹಳ್ಳಿ ಹೇಳಿರುವ ವೀಡಿಯೊ ವೈರಲ್ ಆಗಿದೆ.

ಹಿಂದೂತ್ವ ಸಂಘಟನೆಯ ನಾಯಕನೆಂದು ಹೇಳಿಕೊಳ್ಳುವ ಪುನೀತ್ ಕೆರೆಹಳ್ಳಿ, ಈಗಾಗಲೇ ಅನೇಕ ಸಮಾಜ ವಿರೋಧಿ ಕೃತ್ಯಗಳಲ್ಲಿ ಭಾಗಿಯಾಗಿರುವ ಮಾಹಿತಿ ಇದೆ. ಆದರೆ ಈತ ಈಗ ಉಪವಾಸ ಸತ್ಯಾಗ್ರಹವನ್ನು ನಡೆಸುತ್ತಿದ್ದಾನೆ. ಈತನಿಗೆ ಅನೇಕ ಹಿಂದುತ್ವ ಸಂಘಟನೆಗಳ ನಾಯಕರು ಹಾಗೂ ಬಿಜೆಪಿ ಮುಖಂಡರು ಬೆಂಬಲ ವ್ಯಕ್ತಪಡಿಸಿದ್ದಾರೆ.

ಎಲ್ಲರ ಎದುರಿಗೆ ಬಹಿರಂಗವಾಗಿ ”ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ ಹಾಗೂ ಬಸ್ಸಿಗೆ ಬೆಂಕಿ ಹಚ್ಚುತ್ತೇನೆ” ಎಂದು ಕಾನೂನು ಸುವ್ಯವಸ್ಥೆಗೆ ಬಹಿರಂಗ ಸವಾಲು ಹಾಕಿದ್ದಾರೆ. ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.

”ರಾಜ್ಯದ ಆಡಳಿತ ಕೇಂದ್ರ ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ ಎಂಬುವ ಪದ ಬಳಿಸಿರುವುದೇ ಅತ್ಯಂತ ಕಾನೂನು ವಿರೋಧಿ ಕೃತ್ಯ. ಆತನ ಹೇಳಿಕೆಯ ಹಿನ್ನೆಲೆಯಲ್ಲಿ ಈ ಕೂಡಲೇ ಪ್ರಕರಣ ದಾಖಲಿಸಿಕೊಂಡು ಅವನಿಗೆ ಬೆಂಬಲ ವ್ಯಕ್ತಪಡಿಸಿರುವ ವ್ಯಕ್ತಿಗಳ ವಿರುದ್ಧವೂ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಪುನೀತ್ ಕೆರೆಹಳ್ಳಿ ಮೇಲಿನ ಗೂಂಡಾ ಕಾಯ್ದೆ ರದ್ದು, ಜೈಲಿನಿಂದ ಬಿಡುಗಡೆ: ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...