HomeUncategorizedನಮ್ಮ ಗೌರಿಗೆ ನ್ಯೂಸಿಯಂ ಗೌರವ

ನಮ್ಮ ಗೌರಿಗೆ ನ್ಯೂಸಿಯಂ ಗೌರವ

- Advertisement -
- Advertisement -

ನಮ್ಮೆಲ್ಲರ ಪ್ರೀತಿಯ ಸಂಗಾತಿ, ದಿಟ್ಟ ಪತ್ರಕರ್ತೆ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಅವರನ್ನು ಅಮೇರಿಕಾದ ನ್ಯೂಸಿಯಂ ತನ್ನ ಪತ್ರಕರ್ತರ ಸ್ಮಾರಕಕ್ಕೆ ಸೇರ್ಪಡೆ ಮಾಡಿ ಗೌರವಿಸಿದೆ. ಇಡೀ ದೇಶದಲ್ಲಿ ಇಂತಹ ಗೌರವಕ್ಕೆ ಪಾತ್ರರಾದ ಮತ್ತೊಬ್ಬ ಪತ್ರಕರ್ತ ತ್ರಿಪುರಾದ ಸುದೀಪ್ ದತ್ತ ಭೌಮಿಕ್.
ನ್ಯೂಸಿಯಂ ಎಂಬುದು ಅಮೇರಿಕಾದ ‘ಫ್ರೀಡಂ ಫೋರಂ ಇಸ್ಟಿಟ್ಯೂಟ್’ ಅಡಿಯಲ್ಲಿರುವ ಪತ್ರಿಕಾ ಮ್ಯೂಸಿಯಂ. ವಿಶ್ವದಾದ್ಯಂತ ಪತ್ರಕರ್ತರು ಎದುರಿಸುತ್ತಿರುವ ಅಪಾಯಗಳನ್ನು ಎತ್ತಿತೋರಿಸುವ ಮೂಲಕ ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಈ ಸಂಸ್ಥೆ ಜಾಗೃತಿ ಮೂಡಿಸುತ್ತಿದೆ. ಪತ್ರಿಕಾ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಯೋಜನೆಯ ಭಾಗವಾಗಿಯೇ ಈ ಮ್ಯೂಸಿಯಂ ಸ್ಥಾಪಿಸಲಾಗಿದೆ. ಪತ್ರಿಕಾ ವೃತ್ತಿಗಾಗಿ ತಮ್ಮ ಪ್ರಾಣವನ್ನೇ ಕಳೆದುಕೊಂಡ ಪತ್ರಕರ್ತರನ್ನು ಈ ಸ್ಮಾರಕಕ್ಕೆ ಆಯ್ಕೆ ಮಾಡಿಕೊಳ್ಳುತ್ತದೆ.
ನ್ಯೂಸಿಯಂ ಸ್ಮಾರಕವು ಪತ್ರಕರ್ತರು ತಮ್ಮ ಕರ್ತವ್ಯದ ಅವಧಿಯಲ್ಲಿ ಮರಣಕ್ಕೊಳಪಟ್ಟ ಪತ್ರಕರ್ತರನ್ನು ಸ್ಮರಿಸುತ್ತದೆ. ಪತ್ರಿಕಾ ವೃತ್ತಿಯಲ್ಲಿ ಅಪಾಯಗಳನ್ನು ಎದುರಿಸಿ ದಿಟ್ಟ ಪತ್ರಕರ್ತರಾಗಿ ಪ್ರಾಣಕಳೆದುಕೊಂಡ ಪತ್ರಕರ್ತರನ್ನು ಗುರುತಿಸಿ ಪ್ರತಿ ವರ್ಷ ತನ್ನ ವಾರ್ಷಿಕ ಸಮಾರಂಭದಲ್ಲಿ ಗೌರವಿಸುತ್ತದೆ. ಸ್ಮಾರಕಕ್ಕೆ ಆಯ್ಕೆಯಾದ ನೂರಾರು ಪತ್ರಕರ್ತರ ಛಾಯಾಚಿತ್ರಗಳನ್ನು ಮತ್ತು ವಿವರವಾದ ಮಾಹಿತಿಯನ್ನು ಸಹ ನ್ಯೂಸಿಯಂ ಒಳಗೊಂಡಿದೆ. ನ್ಯೂಸಿಯಂ ಪತ್ರಿಕೋದ್ಯಮದ ಅಪಾಯಕಾರಿ ಕಾರ್ಯಾಚರಣೆಗಳ ಕಲಾಕೃತಿಯನ್ನು ಪ್ರದರ್ಶಿಸುತ್ತದೆ.

ವಾಷಿಂಗ್ಟನ್‍ನಲ್ಲಿ ನಡೆದ ವಾರ್ಷಿಕ ಸಮಾರಂಭದಲ್ಲಿ ಭಾರತದ ಇಬ್ಬರು ಪತ್ರಕರ್ತರನ್ನು ಒಳಗೊಂಡು 18 ಪತ್ರಕರ್ತರನ್ನು ಸೇರಿಸಿಕೊಳ್ಳಲಾಯಿತು. ಆಯ್ಕೆಯಾದ ಈ ಪತ್ರಕರ್ತರ ಪೈಕಿ 8 ಮಹಿಳಾ ಪತ್ರಕರ್ತೆಯರೂ ಕೂಡ ಇದ್ದಾರೆ. ಗËರಿ ಮೇಡಂ ಅವರನ್ನು ನ್ಯೂಸಿಯಂ ವಿಶೇಷವಾಗಿ ಗುರುತಿಸಿದೆ. ‘ಇವರು ತಮ್ಮ ‘ಗೌರಿ ಲಂಕೇಶ್’ ವಾರ ಪತ್ರಿಕೆಯ ಸಂಪಾದಕರಾಗಿದ್ದರು, ಜಾತಿ ಪದ್ದತಿ ಹಾಗೂ ಹಿಂದೂ ಮೂಲಭೂತವಾದದ ವಿರುದ್ಧದ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಹಿಂದೂ ರಾಷ್ಟ್ರೀಯವಾದಿಗಳನ್ನು ನೇರವಾಗಿ ಟೀಕಿಸಿದ್ದ ಕರ್ನಾಟಕದ ದಿಟ್ಟ ಪತ್ರಕರ್ತೆ’ ಎಂದು ನ್ಯೂಸಿಯಂ ಹೇಳಿದೆ.
ಹಾಗೆಯೇ ತ್ರಿಪುರಾದ ಸ್ಥಳೀಯ ದಿನಪತ್ರಿಕೆ ಪತ್ರಕರ್ತರಾದ ‘ಸುದೀಪ್ ದತ್ತಾ ಭೌಮಿಕ್ ಅವರು ಸ್ಥಳೀಯ ಅರೆಸೇನಾ ಮುಖ್ಯಸ್ಥ ತಪನ್ ದೇವ್ ವರ್ಮಾ ಭಾಗಿಯಾಗಿದ್ದ ಹಲವಾರು ಆರ್ಥಿಕ ಅಕ್ರಮಗಳು ಹಾಗೂ ಭ್ರಷ್ಟಾಚಾರ ಪ್ರಕರಣಗಳನ್ನು ಬಹಿರಂಗಪಡಿಸಿದ್ದರು, ಇವರನ್ನು ದೇವ್ ವರ್ಮಾ ಅಂಗರಕ್ಷಕರೇ ಹತ್ಯೆ ಮಾಡಿದ್ದಾರೆ’ ಎಂದು ನ್ಯೂಸಿಯಂ ತಿಳಿಸಿದೆ.
ಭೌಮಿಕ್ ಅವರು ಪೊಲೀಸರ ಭ್ರಷ್ಟಾಚಾರ ಕುರಿತು ತನಿಖಾ ವರದಿಯನ್ನು ಪ್ರಕಟಿಸಿದ್ದರು. 2017ರ 21ರಂದು ತಪನ್ ದೇವ್ ವರ್ಮಾರನ್ನು ಭೇಟಿ ಮಾಡಿದ್ದರು. ಭೇಟಿಯಾದ ಒಂದು ವಾರದ ನಂತರ ಭೌಮಿಕ್ ಅರೆಸೇನಾ ಪಡೆಯಲ್ಲಿರುವ ಭ್ರಷ್ಟಾಚಾರದ ಬಗ್ಗೆ ವರದಿ ಪ್ರಕಟಿಸಿದ್ದರು. ತ್ರಿಪುರ ಬೆಟಾಲಿಯನ್ ಕಮಾಂಡೆಂಟ್ ತಪನ್ ದೇವ್ ವರ್ಮಾ ಅಸ್ತಿತ್ವದಲ್ಲೇ ಇರುವ ಕಂಪನಿಯಿಂದ 10 ಕೋಟಿ ಮೌಲ್ಯದ ವಸ್ತುಗಳನ್ನು ಖರೀದಿಸಿರುವುದಾಗಿ ಖೊಟ್ಟಿ ಬಿಲ್ಲುಗಳನ್ನು ಸೃಷ್ಟಿಸಿ, ಹಣ ಗುಳುಂ ಮಾಡಿದ್ದರು. ತಮ್ಮ ಬಂಡವಾಳ ಬಯಲಾಗಿದ್ದರಿಂದ ಕೆರಳಿದ ಬಟಾಲಿಯನ್ ಕಮಾಂಡೆಂಟ್, ಪತ್ರಕರ್ತ ಭೌಮಿಕ್ ಅವರನ್ನು ತಮ್ಮ ಅಂಗರಕ್ಷಕರ ಮೂಲಕ ಕೊಲ್ಲಿಸಿದ್ದರು. ಭಾರೀ ಹೋರಾಟದ ನಂತರ ಬಂಧನಕ್ಕೊಳಗಾಗಿರುವ ಕಮಾಂಡೆಂಟ್ ಸದ್ಯ ಜೈಲಿನಲ್ಲಿದ್ದಾನೆ.
ಸತ್ಯದ ಪರವಾಗಿ ದಿಟ್ಟವಾಗಿ ನಿಂತ ಪತ್ರಕರ್ತರ ಪಾಲಿಗೆ ಭಾರತ ಅತ್ಯಂತ ಅಪಾಯಕಾರಿ ದೇಶವಾಗಿ ಪರಿಣಮಿಸಿದೆ. ಪತ್ರಿಕಾ ಸ್ವಾತಂತ್ರ್ಯದ ಕ್ರಮಾಂಕದಲ್ಲಿ ಭಾರತ ನೆರೆಯ ಪಾಕಿಸ್ತಾನ, ಶ್ರೀಲಂಕಾ ದೇಶಗಳಿಗಿಂತಲೂ ಕೆಳಕ್ಕೆ ಜಾರಿ ಇದೀಗ 138ನೇ ಸ್ಥಾನಕ್ಕೆ ಕುಸಿದಿರುವುದು ಪರಿಸ್ಥಿತಿಯ ಗಂಭೀರತೆಯನ್ನು ಸೂಚಿಸುತ್ತದೆ.

– ಸೋಮಶೇಖರ್ ಚಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...