ಅರಣ್ಯ ಇಲಾಖೆ ಅಧಿಕಾರಿಗೆ ಶಾಸಕ ಹರೀಶ್ ಪೂಂಜಾ ಅವಾಚ್ಯ ಶಬ್ದಗಳಿಂದ ನಿಂದಿಸಿದ ವೀಡಿಯೊವನ್ನು ಕಾಂಗ್ರೆಸ್ ಹಂಚಿಕೊಂಡಿದ್ದು, ”ಅವಾಚ್ಯ ಶಬ್ದಗಳನ್ನು ಬಳಸುತ್ತಾ, ಅಸಭ್ಯವಾಗಿ ನಡೆದುಕೊಳ್ಳುವುದು ಬಿಜೆಪಿಯ ಅಸಲಿ ಸಂಸ್ಕೃತಿ” ಎಂದು ಕಿಡಿಕಾರಿದೆ.
ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದಲ್ಲಿ ನಿರ್ಮಾಣ ಹಂತದ ಮನೆ ತೆರವಿಗೆ ಮುಂದಾದ ಅರಣ್ಯ ಇಲಾಖೆ ಅಧಿಕಾರಿಗೆ ಶಾಸಕ ಹರೀಶ್ ಪೂಂಜಾ ಅವಾಚ್ಯ ಶಬ್ದಗಳಿಂದ ನಿಂದಿಸಿದ ವೀಡಿಯೊವನ್ನು ಕಾಂಗ್ರೆಸ್ ಹಂಚಿಕೊಂಡಿದೆ.
ಸಂಸ್ಕೃತಿ, ಸಂಪ್ರದಾಯ, ಪರಂಪರೆ ಎಂದು ದೊಡ್ಡ ದೊಡ್ಡ ಪದಗಳನ್ನು ಬಳಸುವ ಬಿಜೆಪಿಯ ಅಸಲಿ ಸಂಸ್ಕೃತಿ
ಅವಾಚ್ಯ ಶಬ್ದಗಳನ್ನು ಬಳಸುತ್ತಾ, ಅಸಭ್ಯವಾಗಿ ನಡೆದುಕೊಳ್ಳುವುದು!ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಬಿಜೆಪಿ ಶಾಸಕ ಹರೀಶ್ ಪೂಂಜಾ ಬೀದಿ ಪೋಕರಿಗಳಿಗಳಂತೆ ಅರಣ್ಯ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ಶಾಸಕನಾದವನಿಗೆ… pic.twitter.com/opkpWWhoWV
— Karnataka Congress (@INCKarnataka) October 10, 2023
”ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಬಿಜೆಪಿ ಶಾಸಕ ಹರೀಶ್ ಪೂಂಜಾ ಬೀದಿ ಪೋಕರಿಗಳಿಗಳಂತೆ ಅರಣ್ಯ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ” ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
”ಸಂಸ್ಕೃತಿ, ಸಂಪ್ರದಾಯ, ಪರಂಪರೆ ಎಂದು ದೊಡ್ಡ ದೊಡ್ಡ ಪದಗಳನ್ನು ಬಳಸುವ ಬಿಜೆಪಿಯ ಅಸಲಿ ಸಂಸ್ಕೃತಿ ಅವಾಚ್ಯ ಶಬ್ದಗಳನ್ನು ಬಳಸುತ್ತಾ, ಅಸಭ್ಯವಾಗಿ ನಡೆದುಕೊಳ್ಳುವುದು” ಎಂದು ಕಾಂಗ್ರೆಸ್ ಕಿಡಿಕಾರಿದೆ.
”ಶಾಸಕನಾದವನಿಗೆ ಯಾವುದೇ ಸಮಸ್ಯೆಗಳಿಗೆ ಕಾನೂನಾತ್ಮಕ, ಸಂವಿಧಾನಾತ್ಮಕವಾಗಿ ಪರಿಹಾರ ಕಂಡುಕೊಳ್ಳಲು ಅವಕಾಶವೂ ಇದೆ, ಅಧಿಕಾರವೂ ಇದೆ, ಆದರೆ ಪುಡಿ ರೌಡಿಗಳಂತೆ ಹೈಡ್ರಾಮ ಮಾಡುವುದು ಬಿಜೆಪಿಯವರ ರಕ್ತದಲ್ಲೇ ಬಂದಿರುವ ಗುಣ ಎನಿಸುತ್ತಿದೆ” ಎಂದು ಕಾಂಗ್ರೆಸ್ ಟೀಕೆ ಮಾಡಿದೆ.
ಇದನ್ನೂ ಓದಿ: ಕದ್ದ ಭೂಮಿಯಲ್ಲಿ ಇಸ್ರೇಲ್ ನಿರ್ಮಾಣ, ಭಾರತವು ಪ್ಯಾಲೆಸ್ತೀನ್ ಪರ ನಿಲ್ಲಬೇಕು- ನಟ ಚೇತನ್ ಆಗ್ರಹ


