Homeಮುಖಪುಟರಾಜಕೀಯವನ್ನು ಹೊರತುಪಡಿಸಿ ನನ್ನ ಎಲ್ಲಾ ವ್ಯವಹಾರಗಳು ನಷ್ಟದಲ್ಲಿದೆ: ಬಿಜೆಪಿ ಸಂಸದ

ರಾಜಕೀಯವನ್ನು ಹೊರತುಪಡಿಸಿ ನನ್ನ ಎಲ್ಲಾ ವ್ಯವಹಾರಗಳು ನಷ್ಟದಲ್ಲಿದೆ: ಬಿಜೆಪಿ ಸಂಸದ

- Advertisement -
- Advertisement -

ಗುಜರಾತ್‌ನ ಭಾರತೀಯ ಜನತಾಪಕ್ಷದ(ಬಿಜೆಪಿ) ಸಂಸದ ಭರತ್‌ ಸಿನ್ಹ ದಾಭಿ  ರಾಜಕೀಯವನ್ನು ಹೊರತುಪಡಿಸಿ ನನ್ನ ಎಲ್ಲಾ ವ್ಯವಹಾರಗಳು ನಷ್ಟದಲ್ಲಿವೆ ಮತ್ತು ಅಂತಿಮವಾಗಿ ಮುಚ್ಚಲ್ಪಟ್ಟಿದೆ ಎಂದು ಹೇಳುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದಾರೆ.

ಹೇಮಚಂದ್ರಾಚಾರ್ಯ ವಿಶ್ವವಿದ್ಯಾಲಯದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ದಾಬಿ, ನಾನು 26 ವ್ಯವಹಾರಗಳನ್ನು ನಡೆಸಿದ್ದೆ, ಆದರೆ ಎಲ್ಲವು ಕೂಡ ನಷ್ಟವಾಗಿ ಮುಚ್ಚಿದ್ದೇನೆ. ಆದರೆ ಇದು (ರಾಜಕೀಯ) ಚೆನ್ನಾಗಿ ಸಾಗಿದೆ. ಸರಪಂಚ್‌ನಿಂದ ಸಂಸತ್ತಿನವರೆಗೆ ಬಂದಿದ್ದೇನೆ. ನನಗೆ ಈಗ ಯಾವುದೇ ಸಮಸ್ಯೆ ಇಲ್ಲಎಂದು ದಾಭಿ ಹೇಳಿದ್ದಾರೆ.

ಸಂಸದರ ಹೇಳಿಕೆಯನ್ನು ಪ್ರತಿಪಕ್ಷ ಕಾಂಗ್ರೆಸ್ ಟೀಕಿಸಿದೆ. ಕಾಂಗ್ರೆಸ್ ವಕ್ತಾರ ಮನೀಶ್ ದೋಷಿ ಅವರು ಈ ಕುರಿತು ಪ್ರತಿಕ್ರಿಯಿಸಿ,  ಬಿಜೆಪಿ ಸಂಸದರು ಹೇಳಿರುವುದು ಅವರಿಗೆ ಸೀಮಿತವಾಗಿಲ್ಲ ಏಕೆಂದರೆ ರಾಜಕೀಯವು ಬಿಜೆಪಿಗೆ ಹಲವು ವರ್ಷಗಳಿಂದ ವ್ಯಾಪಾರವಾಗಿದೆ. ಭರತ್‌ಸಿನ್ಹ ದಾಭಿ ಅವರು ತಮ್ಮ ವ್ಯಾಪಾರವು ಸರಪಂಚ್‌ನಿಂದ ಸಂಸದರವರೆಗೆ ಉತ್ತಮವಾಗಿ ನಡೆಯುತ್ತಿದೆ ಎಂದು ಹೇಳುತ್ತಿದ್ದರೂ, ಅವರು ಇನ್ನೂ ಗಳಿಕೆಯಲ್ಲಿ ಇತರ ಬಿಜೆಪಿ ನಾಯಕರಿಗಿಂತ ಇನ್ನೂ ಹಿಂದೆ ಉಳಿದಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿ ರಾಜಕೀಯವನ್ನು ತನ್ನ ವ್ಯಾಪಾರವನ್ನಾಗಿ ಮಾಡಿಕೊಂಡಿದೆ. ಇದು ಬಿಜೆಪಿಯ ವ್ಯವಹಾರದ ಮಾದರಿಯಾಗಿದ್ದು, ಅದನ್ನು ನಾಯಕರೊಬ್ಬರು ಸಾರ್ವಜನಿಕ ವೇದಿಕೆಯಲ್ಲಿ ಪ್ರಸ್ತುತಪಡಿಸಿದ್ದಾರೆ. ಕೇಸರಿ ಪಕ್ಷವು ರಾಜಕೀಯವನ್ನು ವ್ಯಾಪಾರವಾಗಿ ತೆಗೆದುಕೊಂಡು ದೇಶದ ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನು ಓದಿ: ನ್ಯೂಸ್ ಕ್ಲಿಕ್‌ ವಿರುದ್ಧದ ಪ್ರಕರಣ: 25 ಪತ್ರಕರ್ತರನ್ನು 2ನೇ ಬಾರಿಗೆ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...

ಇರಾನ್‌ನೊಂದಿಗೆ ವ್ಯವಹಾರ ನಡೆಸುವ ರಾಷ್ಟ್ರಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್

ಇರಾನ್ ಜೊತೆ ವ್ಯಾಪಾರ ನಡೆಸುವ ಯಾವುದೇ ದೇಶದ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ (ಜ.12) ಘೋಷಿಸಿದ್ದಾರೆ. "ತಕ್ಷಣದಿಂದಲೇ ಜಾರಿಗೆ ಬರುವಂತೆ, ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗೆ ವ್ಯವಹಾರ...

ಮಂಗಳೂರು | ಬಾಂಗ್ಲಾದೇಶಿಯೆಂದು ಆರೋಪಿಸಿ ವಲಸೆ ಕಾರ್ಮಿಕನ ಮೇಲೆ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಬಾಂಗ್ಲಾದೇಶಿ ಎಂದು ಆರೋಪಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಕೊಲೆ ಯತ್ನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರಿನ ಕಾವೂರು ಪೊಲೀಸರು ಸೋಮವಾರ (ಜ.12)...

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...