Homeಮುಖಪುಟಬುಡಕಟ್ಟು ಬಾಲಕಿಯರಲ್ಲಿ ಹೆಚ್ಚಿದ ಬಾಲ್ಯವಿವಾಹ, ವಿಚ್ಛೇದನ: ವರದಿ

ಬುಡಕಟ್ಟು ಬಾಲಕಿಯರಲ್ಲಿ ಹೆಚ್ಚಿದ ಬಾಲ್ಯವಿವಾಹ, ವಿಚ್ಛೇದನ: ವರದಿ

- Advertisement -
- Advertisement -

ಪುಣೆ, ಅಹ್ಮದ್‌ನಗರ, ಔರಂಗಾಬಾದ್ ಮತ್ತು ಅಮರಾವತಿ ಜಿಲ್ಲೆಗಳಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳಾದ ಪಾರ್ಧಿಗಳು, ಭಿಲ್‌ಗಳು ಮತ್ತು ಥಕರ್‌ ಸಮುದಾಯದ ಹೆಣ್ಣುಮಕ್ಕಳು ಬಾಲ್ಯ ವಿವಾಹಗಳು ಮತ್ತು ಹೆಚ್ಚಿನ ವಿಚ್ಛೇದನದಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಚೈಲ್ಡ್‌ ರೈಟ್ಸ್‌ ಆಂಡ್ ಯೂ (CRY) ವರದಿ ತಿಳಿಸಿದೆ.

ಈ ಸಮುದಾಯಗಳಲ್ಲಿನ ಬಾಲಕಿಯರನ್ನು ಹಣಕಾಸಿನ ಕಾರಣಗಳಿಗಾಗಿ ಸಣ್ಣ ಪ್ರಾಯದಲ್ಲಿ ವಿವಾಹ ಮಾಡಿಸಿಕೊಡಲಾಗುತ್ತದೆ. ಸಾಲಗಳನ್ನು ಮರುಪಾವತಿಸಲು ಅಥವಾ ಕುಟುಂಬದಲ್ಲಿ ಯಾರಾದರು ವ್ಯಕ್ತಿಗಳು ಬಂಧನದಲ್ಲಿದ್ದರೆ ಅವರನ್ನು  ಜಾಮೀನಿನ ಮೇಲೆ ಬಿಡುಗಡೆಗೆ ಹಣಕ್ಕಾಗಿ ಅಪ್ರಾಪ್ತ ಹೆಣ್ಣುಮಕ್ಕಳನ್ನು ವಿವಾಹ ಮಾಡಿಸಿಕೊಡಲಾಗುತ್ತದೆ.

ಹಣದ ವ್ಯವಹಾರವು ವರನ ಕುಟುಂಬಗಳ ಆರ್ಥಿಕ ಸ್ಥಿತಿಯನ್ನು ಅವಲಂಬಿಸಿರುತ್ತದೆ ಮತ್ತು ಬಾಲಕಿಯರ ಸೌಂದರ್ಯ ಮತ್ತು ದೈಹಿಕ ಲಕ್ಷಣಗಳನ್ನು ಅವಲಂಬಿಸಿರುತ್ತದೆ.  ಮೊತ್ತವು ರೂ 25,000 ರಿಂದ ರೂ 50,000 ವರೆಗೆ ಇರುತ್ತದೆ ಮತ್ತು ಕೆಲವೊಮ್ಮೆ ಒಂದು ಲಕ್ಷಕ್ಕೂ ಹೆಚ್ಚು ಇರಬಹುದು. ಅನೇಕ ಪ್ರಕರಣಗಳಲ್ಲಿ ಕುಟುಂಬದ ಋಣ ತೀರಿಸಲು ಹೆಣ್ಣು ಮಕ್ಕಳಿಗೆ ಮದುವೆ ಮಾಡಲಾಗುತ್ತದೆ ಎಂದು ವರದಿ ಹೇಳಿದೆ.

ಸಾಲವನ್ನು ಮರುಪಾವತಿಸಲು ಸಾಧ್ಯವಾಗದಿದ್ದಾಗ, ಕಟುಂಬವು ಬಾಲಕಿಯರನ್ನು  ತನ್ನ ಒಪ್ಪಿಗೆಯಿಲ್ಲದೆ ಸಾಲಗಾರನ ಮನೆಗೆ ಸೆಟಲ್‌ಮೆಂಟ್‌ಗಾಗಿ  ಎಂದು ಮದುವೆ ಮಾಡಿಸಿಕೊಡುತ್ತಾರೆ. ಅನೇಕ ಸಂದರ್ಭಗಳಲ್ಲಿ ಜೈಲಿನಲ್ಲಿರುವ ವ್ಯಕ್ತಿಯನ್ನು ಬಿಡುಗಡೆ ಮಾಡಲು ಅಗತ್ಯವಿರುವ ಹಣವನ್ನು ಪಡೆಯಲು ಬಾಲಕಿಯರನ್ನು ಮದುವೆ ಮಾಡಿಸಿಕೊಡಲಾಗುತ್ತದೆ ಎಂದು ವರದಿ ಹೇಳಿದೆ.

ಸಮುದಾಯಗಳಲ್ಲಿ ಬಾಲ್ಯವಿವಾಹಗಳು ಸಾಕಷ್ಟು ಹೆಚ್ಚಿವೆ. 10 ವರ್ಷದಿಂದ 15 ವರ್ಷ ವಯಸ್ಸಿನ ಬಾಲಕಿಯರು ಬೇಗನೆ ಮದುವೆಯಾಗುತ್ತಾರೆ. ಹಣಕಾಸಿನ ಸಾಲವನ್ನು ಇತ್ಯರ್ಥಪಡಿಸಲು ಮದುವೆ ಮಾಡುತ್ತಾರೆ. ಮದುವೆಯಾದ ಒಂದು ಅಥವಾ ಎರಡು ವರ್ಷಗಳ ನಂತರ ಹೆಣ್ಣುಮಕ್ಕಳನ್ನು ತ್ಯಜಿಸುವ ಘಟನೆ ಸಾಮಾನ್ಯವಾಗಿದೆ. ಈ ಬಾಲಕಿಯರಿಗೆ ತಮ್ಮ ಹೆತ್ತವರು ಮರುಮದುವೆಯನ್ನು ಕೂಡ ಮಾಡುತ್ತಾರೆ ಮತ್ತಷ್ಟು ಶೋಷಣೆಗೆ ಒಳಗಾಗುತ್ತಾರೆ ಎಂದು ವರದಿ ತಿಳಿಸಿದೆ.

CRY ನಡೆಸಿದ ಅಧ್ಯಯನದ ಪ್ರಕಾರ, 2020 ಮತ್ತು 2022ರ ನಡುವೆ, ಪಾರ್ಧಿ, ಭಿಲ್ ಮತ್ತು ಥಾಕರ್ ಸಮುದಾಯದ ಒಟ್ಟು 396 ಬಾಲಕಿಯರ ಮರುಮದುವೆ ನಡೆದಿದೆ.

ಪಾರ್ಧಿಗಳು, ಭಿಲ್‌ಗಳು ಮತ್ತು ಥಕರ್‌ ಬುಡಕಟ್ಟು ಸಮುದಾಯದ ಜನರು ರಾಜ್ಯ ಮಟ್ಟದಲ್ಲಿ ಹಾಗೂ ಸಮಾಜದ ಇತರ ಹಂತಗಳಲ್ಲಿ ಬಹುತೇಕ ಪ್ರಾತಿನಿಧ್ಯವಿಲ್ಲದೆ, ಅವರು ತಮ್ಮ ವೈಯಕ್ತಿಕ ಗುರುತನ್ನು ಕಳೆದುಕೊಳ್ಳುವ ಅಪಾಯದಲ್ಲಿದ್ದಾರೆ CRY ವರದಿ ತಿಳಿಸಿದೆ.

CRY  ಜನರಲ್ ಮ್ಯಾನೇಜರ್ ಕುಮಾರ್ ನಿಲೇಂದು ಅವರ ಪ್ರಕಾರ, ಅಲೆಮಾರಿ ಸಮುದಾಯಗಳು ಸಾಮಾನ್ಯವಾಗಿ ವಿಭಿನ್ನ ರೀತಿಯ ಕಷ್ಟಗಳನ್ನು ಎದುರಿಸುತ್ತವೆ ಮತ್ತು ಆದ್ದರಿಂದ ಈ ಸಮುದಾಯಗಳ ಮಕ್ಕಳು ಹೆಚ್ಚು ಹಿಂದುಳಿದಿದ್ದಾರೆ ಎಂದು ಹೇಳಿದೆ. CRY ಈ ಸಮುದಾಯಗಳ ಮಕ್ಕಳ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಿದೆ ಮತ್ತು ನಾವು ಅದನ್ನು ಮಾಡುವಲ್ಲಿ ತುಲನಾತ್ಮಕವಾಗಿ ಯಶಸ್ವಿಯಾಗಿದ್ದೇವೆ ಎಂದು ಹೇಳಿಕೊಂಡಿದೆ.

ಇದನ್ನು ಓದಿ: ಸಂಸದ ಎ ರಾಜಾ ಒಡೆತನದ 55ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡ ಇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2025 ರ ಏಷ್ಯಾ ಪವರ್ ಇಂಡೆಕ್ಸ್‌: ಮೊದಲೆರಡು ಸ್ಥಾನದಲ್ಲಿ ಅಮೆರಿಕ-ಚೀನಾ, ಭಾರತಕ್ಕೆ ಮೂರನೇ ಶ್ರೇಯಾಂಕ

2025 ರ ಏಷ್ಯಾ ಪವರ್ ಇಂಡೆಕ್ಸ್‌ನಲ್ಲಿ ಭಾರತ ಮೂರನೇ ಶ್ರೇಯಾಂಕವನ್ನು ಪಡೆದುಕೊಂಡಿದೆ. ಆದರೆ, ಯುನೈಟೆಡ್ ಸ್ಟೇಟ್ಸ್-ಚೀನಾ ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನವನ್ನು ಪಡೆದುಕೊಂಡಿವೆ ಎಂದು ಜಾಗತಿಕವಾಗಿ ಪ್ರಸಿದ್ಧವಾದ ಚಿಂತಕರ ಚಾವಡಿ ತನ್ನ...

ಸಾಮೂಹಿಕ ಶರಣಾಗತಿ ಘೋಷಿಸಿದ ಎಂಎಂಸಿ-ವಲಯ ಮಾವೋವಾದಿಗಳು; ಭದ್ರತೆ ಒದಗಿಸುವಂತೆ ಮನವಿ

ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾವೋವಾದಿಗಳು ಜನವರಿ 1, 2026 ರಂದು ಸಾಮೂಹಿಕವಾಗಿ ಶರಣಾಗಲು ಸಿದ್ಧರಿರುವುದಾಗಿ ಘೋಷಿಸಿದ್ದಾರೆ. ಎಂಎಂಸಿ ವಲಯದ ವಕ್ತಾರ ಅನಂತ್ ಹೆಸರಿನಲ್ಲಿ ಹೊರಡಿಸಲಾದ ಪತ್ರದಲ್ಲಿ, ನಮ್ಮ ಗುಂಪು ವೈಯಕ್ತಿಕ ಶರಣಾಗತಿಗಳ ಬದಲಿಗೆ...

ಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ ನ್ಯಾಯಾಲಯ

ಲಂಡನ್‌ನಲ್ಲಿ ನಡೆದ ಭಾಷಣದಲ್ಲಿ ಬಲಪಂಥೀಯ ನಾಯಕ ವಿನಾಯಕ ಸಾವರ್ಕರ್ ಅವರನ್ನು ಮಾನನಷ್ಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ಯೂಟ್ಯೂಬ್...

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...