Homeಕರ್ನಾಟಕಮಹಿಷ ದಸರಾ ನಿಲ್ಲಿಸಬೇಕು ಎನ್ನಲು ಪ್ರತಾಪ್ ಸಿಂಹ ಯಾರು?: ಬಿಜೆಪಿ ಮುಖಂಡರಿಂದ ವಾಗ್ದಾಳಿ

ಮಹಿಷ ದಸರಾ ನಿಲ್ಲಿಸಬೇಕು ಎನ್ನಲು ಪ್ರತಾಪ್ ಸಿಂಹ ಯಾರು?: ಬಿಜೆಪಿ ಮುಖಂಡರಿಂದ ವಾಗ್ದಾಳಿ

- Advertisement -
- Advertisement -

ಸಂಸದ ಪ್ರತಾಪ್ ಸಿಂಹ ಅವರು ಬಿಜೆಪಿ ಪಕ್ಷದ ಹೆಸರನ್ನು ಬಳಸಿಕೊಂಡು ಮಹಿಷ ದಸರಾಗೆ ಅಡ್ಡಿ ಪಡಿಸುತ್ತಿದ್ದಾರೆ. ಈ ವಿಚಾರ ಪಕ್ಷದ ಕೋರ್ ಕಮಿಟಿಯಲ್ಲಿ ಚರ್ಚೆಯೇ ಆಗಿಲ್ಲ. ಹಾಗಾಗಿ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ಮಹಿಷ ದಸರಾಗೆ ಅವಕಾಶ ನೀಡಬೇಕು ಎಂದು ಬಿಜೆಪಿ ಮುಖಂಡ ಗಿರಿಧರ್ ಹೇಳಿದ್ದಾರೆ.

ಮೈಸೂರಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ”ಸಂವಿಧಾನದಲ್ಲಿ ಅವರವರ ಧಾರ್ಮಿಕ ಆಚರಣೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಮಹಿಷ ದಸರಾ ನಿಲ್ಲಿಸಬೇಕು ಎಂದು ಸಂಸದ ಪ್ರತಾಪ್ ಸಿಂಹ ಹೇಳಲು ಯಾರು? ಈ ಇದು ಪ್ರತಾಪ್ ಸಿಂಹರ ವೈಯಕ್ತಿ ಹೇಳಿಕೆಯಷ್ಟೆ. ಈ ವಿಚಾರವಾಗಿ ಪಕ್ಷದ ಕೋರ್ ಕಮಿಟಿಯಲ್ಲಿ ತೀರ್ಮಾನವೇ ಆಗಿಲ್ಲ, ಶಾಸಕ ಶ್ರೀವತ್ಸ ಅವರಿಗೂ ಮಹಿಷ ದಸರಾ ವಿರೋಧ ಇಷ್ಟವಿಲ್ಲ, ತಲಹರಟೆ ಪ್ರತಾಪ್ ಸಿಂಹ ಅವರ ಬಲವಂತಕ್ಕೆ ಒಲ್ಲದ ಮನಸ್ಸಿನಿಂದ ಅವರು ವಿರೋಧ ಮಾಡುತ್ತಿದ್ದಾರೆ” ಎಂದರು.

”ಪ್ರತಾಪ್ ಸಿಂಹನಿಗೂ ಮೈಸೂರಿಗೂ ಏನು ಸಂಬಂಧ ನಮ್ಮ ಪಕ್ಷ 2014 ರಲ್ಲಿ ಅವರಿಗೆ ಟಿಕೆಟ್ ನೀಡಿತ್ತು ನರೇಂದ್ರ ಮೋದಿ ಪ್ರಧಾನ ಮಂತ್ರಿಯಾಗಲಿ ಎಂದು ಪ್ರತಾಪ್ ಸಿಂಹ್‌ನನ್ನು ಗೆಲ್ಲಿಸಿದರು. ಗೆದ್ದ ನಂತರ ಈತ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಪಕ್ಷಕ್ಕೆ ಮುಜುಗರ ಉಂಟು ಮಾಡುವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಚಾಮುಂಡಿ ಬೆಟ್ಟವನ್ನು ಈತ ಗುತ್ತಿಗೆ ಪಡೆದಿಲ್ಲ, ಇಲ್ಲಿಗೆ ಎಲ್ಲಾಧರ್ಮದವರು ಹೋಗುತ್ತಾರೆ” ಎಂದು ಹರಿಹಾಯ್ದರು.

ನಮಗೆ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಮಂತ್ರಿಯಾಗಬೇಕು. ಹಾಗಾಗಿ ಇಂತಹ ತಲೆಹರಟೆ ಸಂಸದನನ್ನು ಪಕ್ಷದಿಂದ ದೂರ ಇಡಬೇಕು ಎಂದು ಅವರು ಆಗ್ರಹಿಸಿದರು.

”ಮಹಿಷ ಕೆಟ್ಟ ವ್ಯಕ್ತಿಯಾಗಿದ್ದರೆ ಮೈಸೂರಿನ ಮಹರಾಜರು ಏಕೆ ಮಹಿಷನ ಅಷ್ಟು ದೊಡ್ಡ ಪ್ರತಿಮೆಯನ್ನು ನಿರ್ಮಾಣ ಮಾಡುತ್ತಿದ್ದರು? ಅಂತಹ ಪ್ರತಿಮೆಯನ್ನೇ ಅಪದ್ಧ, ಅಸಹ್ಯ ಎಂದು ಹೇಳುವ ಮೂಲಕ ಮೈಸೂರು ಮಹರಾಜರಿಗೆ ಅವಮಾನ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದರು.

”ನಾವುಗಳು ಸಣ್ಣವರಿದ್ದಾಗ ನಮ್ಮ ತಂದೆ ತಾಯಿ ಚಾಮುಂಡಿ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಮಹಿಷನ ಮುಂದೆ ನಿಲ್ಲಿಸಿ ಪೂಜೆ ಮಾಡಿ ಮಹಿಷನ ಕಾಲಿನ ಕೆಳಗಡೆ ನುಗ್ಗಿಸುತ್ತಿದ್ದರು. ಯಾಕೆಂದರೆ ನನ್ನ ಮಗ ಮಹಿಷನ ರೀತಿ ಇರಲಿ ಎಂದು. ಇದೇ ಮಹಿಷನ ಪ್ರತಿಮೆ ಮುಂಭಾಗ ದಲಿತ ಹೋರಾಟಗಾರ ಮಂಟೇಲಿಂಗಯ್ಯ ಅಮವಾಸ್ಯೆ ದಿನವೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೊತೆಗೆ ಮಹಿಷ ದಸರಾ ಆಚರಣೆ ಮಾಡಿಕೊಂಡು ಬಂದಿದ್ದಾರೆ. ಇಂತಹದರಲ್ಲಿ ಮಹಿಷ ಹೇಗೆ ಕೆಟ್ಟವನಾಗುತ್ತಾನೆ?” ಎಂದು ಪ್ರಶ್ನಿಸಿದರು.

”ಮಹಿಷ ದಸರಾಗೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ. ಪ್ರತಾಪ್ ಸಿಂಹ ಐದು ಸಾವಿರ ಜನ ಸೇರುತ್ತಾರೆ ಎಂದಾಕ್ಷಣ ಬಿಜೆಪಿ ಪಕ್ಷದ ಕಾರ್ಯಕರ್ತರು ಯಾರೂ ಬರುವುದಿಲ್ಲ. ಕೂಡಲೇ ಜಿಲ್ಲಾಡಳಿತ ಮಹಿಷ ದಸರಾಗೆ ಅನುಮತಿ ನೀಡಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಮೈಸೂರು: ಮಹಿಷ ದಸರಾ, ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...