Homeಅಂಕಣಗಳುಪೆಟ್ರೋಲ್ ಮತ್ತು ಪತ್ರಿಕೋದ್ಯಮ

ಪೆಟ್ರೋಲ್ ಮತ್ತು ಪತ್ರಿಕೋದ್ಯಮ

ಪೆಟ್ರೋಲ್ ಬೆಲೆಯನ್ನು ಇನ್ನಿಲ್ಲದಂತೆ ಏರಿಸಿರುವ ಕೇಂದ್ರ ಸರ್ಕಾರ ಅದಕ್ಕೆ ಹಲವಾರು ಸಮಜಾಯಿಷಿಗಳನ್ನು ನೀಡುತ್ತಿದೆ. ತೈಲ ಉತ್ಪಾದನಾ ಕಂಪನಿಗಳ ನಷ್ಟ 42 ಸಾವಿರ ಕೋಟಿಯಿಂದ 60 ಸಾವಿರ ಕೋಟಿ

- Advertisement -
- Advertisement -

| ಗೌರಿ ಲಂಕೇಶ್ |
08 ಜೂನ್, 2008 (ಸಂಪಾದಕೀಯದಿಂದ)

ಪೆಟ್ರೋಲ್ ಬೆಲೆಯನ್ನು ಇನ್ನಿಲ್ಲದಂತೆ ಏರಿಸಿರುವ ಕೇಂದ್ರ ಸರ್ಕಾರ ಅದಕ್ಕೆ ಹಲವಾರು ಸಮಜಾಯಿಷಿಗಳನ್ನು ನೀಡುತ್ತಿದೆ. ಅವುಗಳಲ್ಲಿ ತೈಲ ಉತ್ಪಾದನಾ ಕಂಪನಿಗಳ ನಷ್ಟ 42 ಸಾವಿರ ಕೋಟಿಯಿಂದ 60 ಸಾವಿರ ಕೋಟಿ ರೂಪಾಯಿಗಳಿಗೆ ಏರದಂತೆ ತಡೆಯಲೆಂದು ಬೆಲೆಯನ್ನು ಹೆಚ್ಚಿಸಬೇಕಾಯಿತು ಎಂಬುದು ಒಂದು.

ಆದರೆ ವಿಚಿತ್ರ ಸಂಗತಿ ಯಾವುದೆಂದರೆ ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್, ಭಾರತ್ ಗ್ಯಾಸ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಂಪನಿಗಳು ಕಳೆದ ವರ್ಷ ಇಷ್ಟೊಂದು ನಷ್ಟವನ್ನು ಕಂಡಿದ್ದರೆ, ಅದೇ ಸಾಲಿನಲ್ಲಿ ರಿಲೆಯನ್ಸ್ ಕಂಪನಿಯು ಇದೇ ತೈಲ ಉತ್ಪಾದನೆಯಲ್ಲಿ 10,372 ಕೋಟಿ ರೂಪಾಯಿಗಳಷ್ಟು ಲಾಭವನ್ನು ಕಂಡಿದೆ. ಇದು ಹೇಗೆ ಸಾಧ್ಯವಾಯಿತು?

ಇನ್ನೊಂದು ಸಂಗತಿ ಯಾವುದೆಂದರೆ ಇವತ್ತು ತೈಲ ಬೆಲೆಯನ್ನು ಏರಿಸಿ ಜನಸಾಮಾನ್ಯರನ್ನು ಸಂಕಷ್ಟಕ್ಕೆ ದೂಡಿರುವ ಕೇಂದ್ರ ಸರ್ಕಾರ ತನ್ನ 2008ನೇ ಬಜೆಟ್‍ನಲ್ಲಿ ಹೇಳಿದ್ದೇನೆಂದರೆ 2007-08ನೇ ಆರ್ಥಿಕ ವರ್ಷದಲ್ಲಿ ಕಾಪೆರ್Çರೇಟ್ ಕಂಪೆನಿಗಳಿಗೆ ನೀಡಿದ ತೆರಿಗೆ ರಿಯಾಯಿತಿಯಿಂದಾಗಿ 58,655 ಕೋಟಿ ರೂಪಾಯಿಗಳ ನಷ್ಟ ಮತ್ತು ಅಬಕಾರಿ ಶುಲ್ಕ ರಿಯಾಯಿತಿಯಿಂದಾಗಿ 87,992 ಕೋಟಿ ರೂಪಾಯಿಗಳಷ್ಟು ನಷ್ಟವಾಗಿದೆ ಎಂದು. ಇವೆರಡರ ಒಟ್ಟು ಮೊತ್ತ 1,46,642 ಕೋಟಿ ರೂಪಾಯಿಗಳು.

ಆ ಹಣವನ್ನು ವಸೂಲಿ ಮಾಡದ ಸರ್ಕಾರ ಇಂದು ತೈಲ ಬೆಲೆಯನ್ನು ಏರಿಸಿ ಈಗಾಗಲೇ ಹಣದುಬ್ಬರದಿಂದ ತತ್ತರಿಸುತ್ತಿರುವ ಜನಸಾಮಾನ್ಯರ ಮೇಲೆ ಮತ್ತಷ್ಟು ಒತ್ತಡ ಹೇರುತ್ತಿದೆ ಎಂದರೆ ಈ ಸರ್ಕಾರಕ್ಕೆ ಜನ ಏನು ಮಾಡಬೇಕು?

ಇಲ್ಲಿಯ ತನಕ ಸಿನಿಮಾ, ಆರ್ಟ್ ಗ್ಯಾಲರಿ, ನಾಟಕ ಇಂತಹವುಗಳ ಮೇಲೆ ದಾಳಿ ಇಡುತ್ತಿದ್ದ ಕೋಮುವಾದಿಗಳು ಈಗ ಪತ್ರಿಕಾ ಕಚೇರಿಗಳ ಮೇಲೂ ದಾಳಿ ಮಾಡಲಾರಂಭಿಸಿವೆ. ಇತ್ತೀಚೆಗೆ ಮಹಾರಾಷ್ಟ್ರದಲ್ಲಿ `ಲೋಕಸತ್ತಾ’ ಎಂಬ ಮರಾಠಿ ಪತ್ರಿಕೆಯ ಸಂಪಾದಕ ಕುಮಾರ್ ಕೇಟ್ಕರ್‍ರವರ ಮನೆಯ ಮೇಲೆ ಶಿವಸಂಗ್ರಾಮ್ ಪಾರ್ಟಿ ಎಂಬ ಸಂಘಟನೆಯ ಸದಸ್ಯರು ದಾಳಿ ಮಾಡಿದರು.

ಅದಕ್ಕೆ ಕಾರಣ ಕೇಟ್ಕರ್‍ರವರು ಬರೆದಿದ್ದ ಒಂದು ಲೇಖನ. ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರವು ಅಮೆರಿಕದ ಸ್ಟ್ಯಾಚು ಆಫ್ ಲಿಬರ್ಟಿದಂತೆಯೇ ಮುಂಬೈನ ಸಮುದ್ರದಲ್ಲಿ ಶಿವಾಜಿಯ ದೊಡ್ಡ ಪ್ರತಿಮೆಯನ್ನು ಸ್ಥಾಪಿಸುವ ಪ್ರಸ್ತಾಪವನ್ನು ಎತ್ತಿಕೊಂಡಿತು. ಆ ಪ್ರತಿಮೆಯನ್ನು ಸ್ಥಾಪಿಸಲು ಹಲವು ಕೋಟಿ ರೂಪಾಯಿಗಳು ವೆಚ್ಚವಾಗುತ್ತದೆಂದು ಅಂದಾಜಿಸಲಾಗಿತ್ತು.

ಹೇಳಿಕೇಳಿ ಮಹಾರಾಷ್ಟ್ರದ ವಿದರ್ಭ ಪ್ರದೇಶದಲ್ಲಿ ನೂರಾರು ಅಸಹಾಯಕ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ, ಇತರೆಡೆ ಬಡತನ ತಾಂಡವವಾಡುತ್ತಿದೆ, ಜನ ಸಾಮಾನ್ಯರಿಗೆ ಕುಡಿಯುವ ನೀರೂ ಅಲಭ್ಯವಾಗಿದೆ. ಇಂಥ ಪರಿಸ್ಥಿತಿಯಲ್ಲಿ ಜನರ ಸಮಸ್ಯೆಯನ್ನು ನೀಗಿಸುವ ಬದಲಾಗಿ ಒಂದು ಪ್ರತಿಮೆಗೆ ಕೋಟ್ಯಾಂತರ ರೂಪಾಯಿಗಳನ್ನು ವೆಚ್ಚ ಮಾಡುವುದು ಸರಿಯೇ? ಎಂದು ಕೇಟ್ಕರ್ ತಮ್ಮ ಲೇಖನದಲ್ಲಿ ಪ್ರಶ್ನಿಸಿದರು. ಅವರ ಪ್ರಶ್ನೆ ಸರಿಯಾಗಿಯೇ ಇತ್ತು. ಆದರೆ ಶಿವಸಂಗ್ರಾಮ್ ಪಾರ್ಟಿಯವರಿಗೆ ಕೇಟ್ಕರ್ ಶಿವಾಜಿಗೆ ಅವಮಾನ ಮಾಡಿದ್ದಾರೆ ಎನಿಸಿತು. ಶಿವಾಜಿಯ ಪ್ರತಿಮೆ ಅಗತ್ಯವಿಲ್ಲ ಎಂದೇ ಆತ ಹೇಳಿದ್ದಾರೆಂದು ಭಾವಿಸಿದ ಅವರು ಕೇಟ್ಕರ್‍ರವರ ಮನೆಯ ಮೇಲೆ ದಾಳಿ ಮಾಡಿದರು. ಆದರೆ ಶಿವಸಂಗ್ರಾಮ್ ಪಾರ್ಟಿಯವರು ಶರದ್ ಪವಾರ್‍ರವರ ಎನ್‍ಸಿಪಿ ಪಕ್ಷದ ಅಂಗ ಸಂಸ್ಥೆಯಾಗಿರುವುದರಿಂದ ಅವರ ವಿರುದ್ಧ ಯಾವ ಕಾನೂನು ಕ್ರಮವನ್ನು ಅಲ್ಲಿನ ಸರ್ಕಾರ ತೆಗೆದುಕೊಂಡಿಲ್ಲ.

ಈ ವಾರ ನಡೆದಿರುವ ಈ ಪ್ರಕರಣಗಳು ಮೊದಲ ಬಾರಿಗೆ ನಡೆದಿರುವಂತಹದ್ದೇನಲ್ಲ. ಕಳೆದ ವರ್ಷ `ದಿನಸುಡರ್’ ಪತ್ರಿಕೆ ನಡೆಸಿದ ಸಮೀಕ್ಷೆಯೊಂದರಿಂದ ಉದ್ರೇಕಗೊಂಡ ಕರುಣಾನಿಧಿಯ ಬೆಂಬಲಿಗರು ಆ ಪತ್ರಿಕೆಯ ಕಚೇರಿಯ ಮೇಲೆ ದಾಳಿ ನಡೆಸಿ ಇಬ್ಬರ ಸಾವಿಗೆ ಕಾರಣರಾಗಿದ್ದರು. ಹಾಗೆಯೇ ಸರ್ವೋಚ್ಛ ನ್ಯಾಯಾಲಯದ ಮಾಜಿ ಮುಖ್ಯ ನ್ಯಾಯಮೂರ್ತಿ ವೈ.ಕೆ. ಸಬರ್‍ವಾಲ್‍ರ ಬಗ್ಗೆ ತನಿಖಾ ವರದಿಗಳನ್ನು ಪ್ರಕಟಿಸಿದ್ದಕ್ಕೆ ದೆಹಲಿ ನ್ಯಾಯಾಲಯ ಮಿಡ್ ಡೆ ಪತ್ರಿಕೆಯ ಮೂವರು ಪತ್ರಕರ್ತರಿಗೆ ಜೈಲು ಶಿಕ್ಷೆಯನ್ನು ನೀಡಿತ್ತು.

ಪ್ರಜಾಪ್ರಭುತ್ವದ ನಾಲ್ಕನೆ ಸ್ತಂಭವಾಗಿರುವ ಪತ್ರಿಕೋದ್ಯಮದ ಮೇಲೆ ಹೀಗೆ ಒಂದೆಡೆಯಿಂದ ಕೋಮುವಾದಿಗಳಿಂದ ದಾಳಿ, ಇನ್ನೊಂದೆಡೆ ವ್ಯವಸ್ಥೆಯಿಂದ ದಾಳಿ ನಡೆದರೆ ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವವಾದರೂ ಉಳಿಯುವುದಾದರೂ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...