HomeUncategorizedಮುಸ್ಲಿಂ ಯುವಕರಿಗೆ ಛಡಿಯೇಟು ಪ್ರಕರಣ: ಪೃಷ್ಠದ ಮೇಲೆ ಬಡಿಯುವುದು ಕಸ್ಟಡಿ ಚಿತ್ರಹಿಂಸೆಗೆ ಸಮವಲ್ಲ ಎಂದ ಆರೋಪಿತ...

ಮುಸ್ಲಿಂ ಯುವಕರಿಗೆ ಛಡಿಯೇಟು ಪ್ರಕರಣ: ಪೃಷ್ಠದ ಮೇಲೆ ಬಡಿಯುವುದು ಕಸ್ಟಡಿ ಚಿತ್ರಹಿಂಸೆಗೆ ಸಮವಲ್ಲ ಎಂದ ಆರೋಪಿತ ಪೊಲೀಸರು

- Advertisement -
- Advertisement -

ಗುಜರಾತ್‌ನ ಖೇಡಾ ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯದ ನಾಲ್ವರು ಯುವಕರಿಗೆ ಸಾರ್ವಜನಿಕವಾಗಿ ಛಡಿಯೇಟು ಕೊಟ್ಟು ಬಂಧನದ ಸಂದರ್ಭ ಅನುಸರಿಸಬೇಕಾದ ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪ ನಾಲ್ವರು ಪೊಲೀಸರ ಮೇಲಿದೆ. ಈ ಬಗ್ಗೆ ಆರೋಪಿತ ನಾಲ್ವರು ಪೊಲೀಸರು, ಆರೋಪಿಗಳ ಪೃಷ್ಠದ ಮೇಲೆ 3ರಿಂದ 6ಬಾರಿ ಬಡಿಗೆಯಿಂದ ಹೊಡೆಯುವುದು ಸ್ವೀಕಾರಾರ್ಹವಲ್ಲ, ಆದರೂ ಕಸ್ಟಡಿ ಚಿತ್ರಹಿಂಸೆಗೆ ಸಮನಾಗುವುದಿಲ್ಲ, ನ್ಯಾಯಾಲಯದ ಆದೇಶದ ಉಲ್ಲಂಘನೆಯಾಗುವುದಿಲ್ಲ, ಪ್ರಕರಣದಲ್ಲಿ ಶಿಕ್ಷೆಯನ್ನು ನೀಡುವ ಬದಲು ಪರಿಹಾರವನ್ನು ಪಾವತಿಸಲು ನಿರ್ದೇಶಿಸಬೇಕು, ಶಿಕ್ಷೆಯು ವೃತ್ತಿಜೀವನದ ಮೇಲೆ ಪರಿಣಾಮ ಬೀರುತ್ತದೆ ಎಂದು  ಗುಜರಾತ್‌ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ.

ಖೇಡಾ ಜಿಲ್ಲೆಯ ಉಂಧೇಲಾ ಗ್ರಾಮದಲ್ಲಿ ನವರಾತ್ರಿ ಉತ್ಸವದ ಕಾರ್ಯಕ್ರಮದ ವೇಳೆ ಕಲ್ಲು ತೂರಾಟ ಮಾಡಿದ್ದಾರೆಂದು ಅ.4 ರಂದು ಪೊಲೀಸರು ಮೂವರು ಮುಸ್ಲಿಂ ಯುವಕರನ್ನು ಸಾರ್ವಜನಿಕವಾಗಿ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಈ ಕುರಿತು ಪೋಟೋ ಕೂಡ ವೈರಲ್‌ ಆಗಿತ್ತು. ಪ್ರಕರಣದ ವಿರುದ್ಧ ಸಂತ್ರಸ್ತ ಯುವಕರು ಕೋರ್ಟ್ ಮೊರೆ ಹೋಗಿದ್ದರು.

ಹಿಂದೂಸ್ತಾನ್ ಟೈಮ್ಸ್ ಪ್ರಕಾರ, ಅರ್ಜಿದಾರರ ಪೃಷ್ಠದ ಮೇಲೆ ಮೂರರಿಂದ ಆರು ಬಾರಿ ಕೋಲುಗಳ ಮೂಲಕ ಹೊಡೆಯುವುದ ಕಸ್ಟಡಿ ಹಿಂಸೆಗೆ ಸಮವಲ್ಲ, ಅದು ನ್ಯಾಯಾಂಗ ನಿಂದನೆಯಾಗುವುದಿಲ್ಲ ಎಂದು  ನ್ಯಾಯಾಲಯಕ್ಕೆ ಆರೋಪಿತ ಪೊಲೀಸರು ಹೇಳಿದ್ದಾರೆ.

ಇನ್ಸ್ ಪೆಕ್ಟರ್ ಆಗಿರುವ ಪರ್ಮಾರ್ ಜೊತೆಗೆ ಸಬ್‌ ಇನ್ಸ್‌ಪೆಕ್ಟರ್ ಡಿ ಬಿ ಕುಮಾವತ್, ಕಾನ್‌ಸ್ಟೆಬಲ್ ರಾಜುಭಾಯ್ ರಮೇಶಭಾಯಿ ದಾಭಿ ಅವರು ತಮ್ಮ ವಿರುದ್ಧ ಹೊರಿಸಲಾದ ಆರೋಪಗಳಿಗೆ ಶಿಕ್ಷೆಗೆ ಬದಲಾಗಿ ಸಂತ್ರಸ್ತರಿಗೆ ಪರಿಹಾರವನ್ನು ನೀಡಲು ಅನುಮತಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಆರೋಪಿಗಳಿಗೆ ತಪ್ಪಿತಸ್ಥರೆಂದು ಘೋಷಿಸಿ ಶಿಕ್ಷೆ ವಿಧಿಸುವುದು ಅವರ ವೃತ್ತಿ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಪೊಲೀಸರ ಪರ ವಕೀಲ ಪ್ರಕಾಶ್ ಜಾನಿ ನ್ಯಾಯಾಲಯಕ್ಕೆ ತಿಳಿಸಿದರು.

ಪೊಲೀಸರ ಅಹವಾಲುಗಳನ್ನು ಆಲಿಸಿದ ನ್ಯಾಯಾಲಯವು ಈ ವಿಷಯದ ಬಗ್ಗೆ ಅರ್ಜಿದಾರರ ಪ್ರತಿಕ್ರಿಯೆ ಕೇಳಿದ್ದು, ಪ್ರಕರಣದ ಮುಂದಿನ ವಿಚಾರಣೆ ಅ.16 ರಂದು ನಡೆಯಲಿದೆ.

ಗುಜರಾತ್‌ನ ಖೇಡಾ ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯದ ನಾಲ್ವರು ಯುವಕರಿಗೆ ಸಾರ್ವಜನಿಕವಾಗಿ ಛಡಿಯೇಟು ನೀಡಿದ ಪ್ರಕರಣದಲ್ಲಿ ನ್ಯಾಯಾಲಯ ನಿಂದನೆಯ ಆರೋಪ ಎದುರಿಸುತ್ತಿರುವ ನಾಲ್ವರು ಪೊಲೀಸರ ವಿರುದ್ಧ ಗುಜರಾತ್ ಹೈಕೋರ್ಟ್ ಕಳೆದ ವಾರ ದೋಷಾರೋಪ ದಾಖಲಿಸಿತ್ತು.

ನ್ಯಾಯಮೂರ್ತಿಗಳಾದ ಎ ಎಸ್ ಸುಪೇಹಿಯಾ ಮತ್ತು ಎಂ ಆರ್ ಮೆಂಗ್ಡೆ ಅವರ ವಿಭಾಗೀಯ ಪೀಠವು, ನಾಡಿಯಾಡ್ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರ ತನಿಖಾ ವರದಿಯನ್ನು ಆಧರಿಸಿ ನ್ಯಾಯಾಂಗ ಉಲ್ಲಂಘನೆ ಗಮನಿಸಿದ್ದಾರೆ. ಡಿ ಕೆ ಬಸು  ಮತ್ತು ಪಶ್ಚಿಮ ಬಂಗಾಳ ರಾಜ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ನಾಲ್ವರು ಆರೋಪಿಗಳು ಉಲ್ಲಂಘಿಸಿದ್ದಾರೆ ಎಂದು ಕೋರ್ಟ್‌ ಹೇಳಿತ್ತು.

2022ರ ಆಕ್ಟೋಬರ್‌ನಲ್ಲಿ ಕಲ್ಲೆಸೆತಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾದ ಆರೋಪಿಗಳಿಗೆ ಸಾರ್ವಜನಿಕವಾಗಿ ಕಂಬಕ್ಕೆ ಕಟ್ಟಿ, ಸಾರ್ವಜನಿಕವಾಗಿ ಥಳಿಸುವ ಕೃತ್ಯದಲ್ಲಿ ಪೊಲೀಸ್‌ ಅಧಿಕಾರಿಗಳು ಪಾಲ್ಗೊಂಡಿದ್ದರು ಎಂಬುವುದನ್ನು ನ್ಯಾಯಾಲಯವು ಕಂಡುಕೊಂಡಿದೆ.

ಆರೋಪಿ ಪೊಲೀಸರಲ್ಲಿ ಒಬ್ಬಾತ ಈ ಕಾನೂನು ಬಾಹಿರ ಹಾಗೂ ಅಪಮಾನಕಾರಿ ಕೃತ್ಯವನ್ನು ನಡಸುವುದಕ್ಕೆ ವೌನಸಮ್ಮತಿಯನ್ನು ನೀಡಿದ್ದಾನೆ. ಹಾಗಾಗಿ ಆತನ ವಿರುದ್ಧ ದೋಷಾರೋಪ ದಾಖಲಿಸುವಲ್ಲಿ ಯಾವುದೇ ರಿಯಾಯಿತಿ ನೀಡಬಾರದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಬಂಧಿತರಿಗೆ ಸಾರ್ವಜನಿಕವಾಗಿ ಛಡಿಯೇಟು ನೀಡುವ ಮೂಲಕ ಆರೋಪಿ ಪೊಲೀಸರು ಸುಪ್ರೀಂಕೋರ್ಟ್ ಮಾರ್ಗದರ್ಶಿಸೂತ್ರಗಳನ್ನು ಉಲ್ಲಂಘಿಸಿದ್ದಾರೆಂದು ನ್ಯಾಯಾಲಯ ಹೇಳಿತ್ತು.

2022ರ ಆಕ್ಟೋಬರ್ 4ರಂದು ಉಂಧೆಲಾ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಓರ್ವ ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ಹಾಗೂ ಇಬ್ಬರು ಕಾನ್ಸ್ಟೇಬಲ್ ಗಳನ್ನು ನ್ಯಾಯಾಲಯ ಆರೋಪಿಗಳು ಎಂದು ಗಮನಿಸಿತ್ತು.

ಕಳೆದ ವರ್ಷ ನವರಾತ್ರಿ ಆಚರಣೆಯ ಸಂದರ್ಭದಲ್ಲಿ, ಕನಿಷ್ಠ ನಾಲ್ವರು ಮುಸ್ಲಿಂ ಯುವಕರನ್ನು ಕಾನೂನುಬಾಹಿರವಾಗಿ ಬಂಧಿಸಲಾಯಿತು ಮತ್ತು ಬಂಧಿತ ಯುವಕರಿಗೆ ಪೊಲೀಸರು ಖೇಡಾದಲ್ಲಿ ಸಾರ್ವಜನಿಕವಾಗಿ ಥಳಿಸಿದ್ದರು.

ಸಂತ್ರಸ್ತರಾದ ಜಹಿರ್ಮಿಯಾ ಮಾಲೆಕ್ (62), ಮಕ್ಸುದಾಬಾನು ಮಾಲೆಕ್ (45), ಸಹದ್ಮಿಯಾ ಮಾಲೆಕ್ (23), ಸಕಿಲ್ಮಿಯಾ ಮಾಲೆಕ್ (24) ಮತ್ತು ಶಾಹಿದ್ರಾಜ ಮಾಲೆಕ್ (25) ಅವರು 13 ಖೇಡಾ ಪೊಲೀಸ್ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

ಇದಲ್ಲದೆ ಸಂತ್ರಸ್ತರು ಪರಿಹಾರ ಕೋರಿದ್ದರು, ಅರ್ಜಿದಾರರು ಅಹಮದಾಬಾದ್ ರೇಂಜ್ ಐಜಿ ಮತ್ತು ಖೇಡಾ ಎಸ್ಪಿ ಸೇರಿದಂತೆ 15 ಅಧಿಕಾರಿಗಳು ಪಶ್ಚಿಮ ಬಂಗಾಳ ಮತ್ತು ಡಿ ಕೆ ಬಸು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನಗಳ ಉಲ್ಲಂಘನೆ ಮಾಡಿದ್ದಾರೆ ಎಂದು ಹೇಳಿದ್ದರು.

ಇನ್‌ಸ್ಪೆಕ್ಟರ್ ಎ ವಿ ಪರ್ಮಾರ್, ಸಬ್ ಇನ್ಸ್‌ಪೆಕ್ಟರ್ ಡಿ ಬಿ ಕುಮಾವತ್, ಕಾನ್‌ಸ್ಟೆಬಲ್ ರಾಜುಭಾಯ್ ರಮೇಶಭಾಯಿ ದಾಭಿ ಮತ್ತು ಹೆಡ್ ಕಾನ್‌ಸ್ಟೆಬಲ್ ಕನಕ್‌ಸಿನ್ಹ್ ಲಕ್ಷ್ಮಣಸಿನ್ಹ್ ಎಂಬ ನಾಲ್ವರು ಪೊಲೀಸ್ ಅಧಿಕಾರಿಗಳು ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.

ಇನ್‌ಸ್ಪೆಕ್ಟರ್ ಪರ್ಮಾರ್, ಸಂತ್ರಸ್ತರಾದ ಸಹದ್ಮಿಯಾ, ಸಕಿಲ್ಮಿಯಾ ಮತ್ತು ಶಾಹಿದ್ರಾಜಾ ಅವರ ಮೇಲೆ ಕೋಲಿನಿಂದ ಹಲ್ಲೆ ನಡೆಸುವುದು, ಸಬ್ ಇನ್ಸ್‌ಪೆಕ್ಟರ್ ಡಿ ಬಿ ಕುಮಾವತ್ ಅಲ್ಲಿ ನಿಂತಿರುವುದು, ಕನಕಸಿಂಹ ಅವರು ಬಿಳಿ ಪೈಪ್ ಹಿಡಿದು ಅರ್ಜಿದಾರರನ್ನು ವ್ಯಾನ್‌ನ ಕಡೆಗೆ ತಳ್ಳುತ್ತಿರುವುದು ಮತ್ತು  ಇನ್ಸ್‌ಪೆಕ್ಟರ್ ಪರ್ಮಾರ್  ಯುವಕರಿಗೆ ಹೊಡೆಯುವಾಗ ಪೇದೆ ರಾಜುಭಾಯ್ ಮೂವರು ಯುವಕರ ಕೈಗಳನ್ನು ಕಂಬಕ್ಕೆ ಗಟ್ಟಿಯಾಗಿ ಹಿಡಿದಿರುವುದು ವೈರಲ್ ವಿಡಿಯೋದಲ್ಲಿ ಕಂಡು ಬಂದಿತ್ತು.

ಇದನ್ನು ಓದಿ: ಉತ್ತರಪ್ರದೇಶ; ಆಸ್ಪತ್ರೆ ಒಳಗೆ ರೋಗಿಗಿಟ್ಟ ಆಹಾರ ತಿನ್ನುತ್ತಿರುವ ನಾಯಿ: ಜಿಲ್ಲಾಸ್ಪತ್ರೆಯ ದುಸ್ಥಿತಿಯ ವಿಡಿಯೋ ವೈರಲ್‌

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...