Homeಮುಖಪುಟಗಾಝಾ ಪಟ್ಟಿಯಾದ್ಯಂತ ನೀರಿನ ಅಭಾವ: ಅಪಾಯದಲ್ಲಿ 2 ಮಿಲಿಯನ್‌ ಜನರು: UNRWA

ಗಾಝಾ ಪಟ್ಟಿಯಾದ್ಯಂತ ನೀರಿನ ಅಭಾವ: ಅಪಾಯದಲ್ಲಿ 2 ಮಿಲಿಯನ್‌ ಜನರು: UNRWA

- Advertisement -
- Advertisement -

ಗಾಝಾ ಪಟ್ಟಿಯಾದ್ಯಂತ ನೀರಿನ ಕೊರತೆಯಾಗಿದ್ದು 2 ಮಿಲಿಯನ್‌ಗಿಂತಲೂ ಹೆಚ್ಚು ಜನರು ಅಪಾಯದಲ್ಲಿದ್ದಾರೆ. ಇದು ಬದುಕು ಮತ್ತು ಸಾವಿನ ವಿಷಯವಾಗಿದೆ. 2 ಮಿಲಿಯನ್ ಜನರಿಗೆ ನೀರು ಲಭ್ಯವಾಗುವಂತೆ ಮಾಡಲು ಇಂಧನವನ್ನು ಈಗ ಗಾಝಾಕ್ಕೆ ತಲುಪಿಸಬೇಕಾಗಿದೆ ಎಂದು ಯುಎನ್‌ಆರ್‌ಡ್ಬ್ಲೂಎ (UNRWA) ಕಮಿಷನರ್-ಜನರಲ್ ಫಿಲಿಪ್ ಲಾಝಾರಿನಿ ಹೇಳಿದರು.

ಒಂದು ವಾರದಿಂದ ಗಾಝಾಕ್ಕೆ ಯಾವುದೇ ಮಾನವೀಯ ನೆಲೆಯ ಸಹಕಾರಕ್ಕೆ ಅನುಮತಿಸಲಾಗಿಲ್ಲ. ಸಾರ್ವಜನಿಕ ನೀರಿನ ಜಾಲಗಳು ಕೆಲಸ ಮಾಡುವುದನ್ನು ನಿಲ್ಲಿಸಿದ ನಂತರ, ಗಾಝಾ ಪಟ್ಟಿಯಲ್ಲಿ ಶುದ್ಧ ನೀರು ಖಾಲಿಯಾಗುತ್ತಿದೆ. ಜನರು ಈಗ ಬಾವಿಗಳಿಂದ ಕೊಳಕು ನೀರನ್ನು ಬಳಸಬೇಕಾದ ಅನಿವಾರ್ಯತೆಗೆ ಒಳಗಾಗಿದ್ದಾರೆ. ಇದು ನೀರಿನಿಂದ ಹರಡುವ ರೋಗಗಳ ಅಪಾಯವನ್ನು ಹೆಚ್ಚಿಸುತ್ತದೆ. ಅಕ್ಟೋಬರ್ 11 ರಿಂದ ಗಾಜಾದಲ್ಲಿ ವಿದ್ಯುತ್ ಸ್ಥಗಿತಗೊಂಡಿದೆ. ಇದು ನೀರಿನ ಪೂರೈಕೆಯ ಮೇಲೆ ಅಗಾಧ ಪರಿಣಾಮ ಬೀರುತ್ತದೆ ಎಂದು ಯುಎನ್‌ಆರ್‌ಡ್ಬ್ಲೂಎ (UNRWA) ಹೇಳಿದೆ.

ಗಾಝಾ ಪಟ್ಟಿಯ ಉತ್ತರ ಭಾಗದಲ್ಲಿರುವ ಜನರು ತಮ್ಮ ಮನೆಗಳನ್ನು ತೊರೆಯುವಂತೆ ಇಸ್ರೇಲ್ ಎಚ್ಚರಿಕೆ ನೀಡಿದೆ. ಕಳೆದ 12 ಗಂಟೆಯಿಂದ ಸಾವಿರಾರು ಮಂದಿ ಮನೆಗಳನ್ನು ತೊರೆದಿದ್ದಾರೆ. ಕೇವಲ ಒಂದು ವಾರದಲ್ಲಿ ಸುಮಾರು 1 ಮಿಲಿಯನ್ ಜನರು ಸ್ಥಳಾಂತರಗೊಂಡಿದ್ದಾರೆ.

ನಾವು ಈಗ ಗಾಝಾಕ್ಕೆ ಇಂಧನವನ್ನು ತಲುಪಿಸಬೇಕಿದೆ. ಜನರು ಸುರಕ್ಷಿತ ಕುಡಿಯುವ ನೀರನ್ನು ಹೊಂದಲು ಇಂಧನವು ಅಗತ್ಯವಾಗಿದೆ. ಇಲ್ಲದಿದ್ದರೆ ಚಿಕ್ಕ ಮಕ್ಕಳು, ವೃದ್ಧರು ಮತ್ತು ಮಹಿಳೆಯರು ಸೇರಿ ಜನರು ತೀವ್ರ ನಿರ್ಜಲೀಕರಣದಿಂದ ಸಾಯಲು ಪ್ರಾರಂಭಿಸುತ್ತಾರೆ. ನೀರು ಈಗ ಉಳಿದಿರುವ ಕೊನೆಯ ಜೀವನಾಡಿಯಾಗಿದೆ. ಮಾನವೀಯ ನೆರವಿನ ಮೇಲಿನ ತಡೆಯನ್ನು ಈಗ ಹಿಂತೆಗೆದುಕೊಳ್ಳುವಂತೆ ನಾನು ಮನವಿ ಮಾಡುತ್ತೇನೆ ಎಂದು ಲಾಝಾರಿನಿ ಹೇಳಿದ್ದಾರೆ.

ಉತ್ತರ ಗಾಜಾ ಮತ್ತು ಗಾಝಾ ನಗರದಿಂದ ದಕ್ಷಿಣ ಗಾಝಾ ಪಟ್ಟಿಗೆ ಜನರ ಸ್ಥಳಾಂತರಕ್ಕೆ ಆದೇಶಿಸಿದ್ದರೂ, ಗರ್ಭಿಣಿಯರು, ಮಕ್ಕಳು, ವೃದ್ಧರು ಮತ್ತು ವಿಕಲಚೇತನರು ಪ್ರದೇಶದಿಂದ ಪಲಾಯನ ಮಾಡಲು ಸಾಧ್ಯವಾಗಿಲ್ಲ. ಅವರಿಗೆ ಯಾವುದೇ ಆಯ್ಕೆಯಿಲ್ಲ ಮತ್ತು ಎಲ್ಲಾ ಸಮಯದಲ್ಲೂ ಅವರನ್ನು ರಕ್ಷಿಸಬೇಕು ಎಂದು UNRWA ಹೇಳಿದೆ.

ಇದನ್ನು ಓದಿ: ಅಲ್‌ ಜಝೀರಾ ಕಚೇರಿಯನ್ನು ಬಂದ್ ಮಾಡಲು ಮುಂದಾದ ಇಸ್ರೇಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...