Homeಮುಖಪುಟಮೂರೂವರೆ ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರ: ಶಾಲಾ ಬಸ್‌ನ ನಿರ್ವಾಹಕ ಅರೆಸ್ಟ್

ಮೂರೂವರೆ ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರ: ಶಾಲಾ ಬಸ್‌ನ ನಿರ್ವಾಹಕ ಅರೆಸ್ಟ್

- Advertisement -
- Advertisement -

ಮೂರೂವರೆ ವರ್ಷದ ಕಿಂಡರ್ ಗಾರ್ಟನ್ ವಿದ್ಯಾರ್ಥಿನಿ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದಲ್ಲಿ ಶಾಲಾ ಬಸ್ ನ ನಿರ್ವಾಹಕೊಬ್ಬನನ್ನು ಜೈಪುರ ಪೊಲೀಸರು ಬಂಧಿಸಿದ್ದಾರೆ.

ಪುಟ್ಟ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿ, ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ನಿಮ್ಮ ತಂದೆ-ತಾಯಿ ಸಾಯಬೇಕಾಗುತ್ತದೆ ಎಂದು ಆ ಬಾಲಕಿಗೆ ಬೆದರಿಕೆ ಹಾಕಿದ್ದನು ಎಂದು ಹೇಳಲಾಗುತ್ತಿದೆ.

ಈ ಪ್ರಕರಣದ ಸಂಬಂಧ ಆರೋಪಿ ಮದನ್ ಲಾಲ್ (34) ಎಂಬಾತನನ್ನು ಬಂಧಿಸಲಾಗಿದೆ. ಚಾಲಕ ಕಮಲ್ ಮತ್ತು ಬಸ್ಸಿನ ಮಹಿಳಾ ಸಹಾಯಕಿ ಪೂಜಾ ಕೂಡಾ ಅತ್ಯಾಚಾರದ ವೇಳೆ ಜೊತೆಗೆ ಇದ್ದರು ಎನ್ನಲಾಗುತ್ತಿದೆ. ಈ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ನಿರಂತರ ಅತ್ಯಾಚಾರಕ್ಕೊಳಗಾದ ಬಾಲಕಿಯ ಗುಪ್ತಾಂಗ ಬಾತುಕೊಂಡಿರುವುದನ್ನು ತಾಯಿ ಗಮನಿಸಿದ್ದು, ಈ ಬಗ್ಗೆ ಬಾಲಕಿಯನ್ನು ವಿಚಾರಿಸಿದಾಗ ಬಾಲಕಿ ತನ್ನ ಮೇಲೆ ಲೈಂಗಿಕ ಹಲ್ಲೆ ನಡೆದದ್ದನ್ನು ಬಹಿರಂಗಪಡಿಸಿದ್ದಾಳೆ. ಬಾಲಕಿ ತನ್ನ ಮೇಲೆ ನಡೆದ ದೌರ್ಜನ್ಯವನ್ನು ವಿವರಿಸುವ ವಿಡಿಯೊವನ್ನು ತಾಯಿ ದಾಖಲಿಸಿ ಪೊಲೀಸರಿಗೆ ನೀಡಿದ್ದು, ಇದರ ಆಧಾರದಲ್ಲಿ ಮದನ್ ಲಾಲ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ವಿವರಿಸಿದ್ದಾರೆ.

ಈ ಕೃತ್ಯದ ಬಗ್ಗೆ ಮಗು ತನ್ನ ಶಿಕ್ಷಕಿಗೆ ಕೂಡಾ ಮಾಹಿತಿ ನೀಡಿದ್ದಳು. ಆದರೆ ಆಗ ಶಿಕ್ಷಕಿ ಬಾಲಕಿಯನ್ನು ಬೈದು ಊಟ ಮುಗಿಸುವಂತೆ ಹೇಳಿದ್ದರು ಎಂದು ಮಗುವಿನ ತಾಯಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.

ಮಗು ಶಾಲೆಗೆ ಬರಲು ಆರಂಭಿಸಿದಾಗಿನಿಂದ ಆರೋಪಿಗೆ ಆ ಮಗುವಿನ ಪರಿಚಯ ಇತ್ತು. ಬಾಲಕಿಯ ಜತೆ ಮದನ್ಲಾಲ್ ಇದ್ದ ಫೋಟೊ ಲಭ್ಯವಾಗಿದೆ ಎಂದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ವಿಕಲಚೇತನ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪತಂಜಲಿಯ ಪತನ ಶುರು: ‘ಸೋನ್ ಪಾಪ್ಡಿ’ಯಿಂದ ಮೂವರಿಗೆ ಜೈಲು ಶಿಕ್ಷೆ

0
ಪತಂಜಲಿ ನವರತ್ನ ಎಲೈಚಿ ಸೋನ್ ಪಾಪ್ಡಿ(ಸಾಂಪ್ರದಾಯಿಕ ಸಿಹಿತಿಂಡಿ) ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ಹಿನ್ನೆಲೆ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಆಯರ್ವೇದ ಲಿಮಿಟೆಡ್‍ನ ಸಹಾಯಕ ವ್ಯವಸ್ಥಾಪಕ ಸೇರಿದಂತೆ ಮೂರು ಮಂದಿಗೆ ಆರು ತಿಂಗಳ ಜೈಲು ಶಿಕ್ಷೆ...