Homeಅಂತರಾಷ್ಟ್ರೀಯಗಾಝಾವನ್ನು ರಕ್ಷಿಸಿ, ಸಾವಿರಾರು ಮಂದಿ ಸಾಯುತ್ತಾರೆ: ತುರ್ತು ಸಹಾಯಕ್ಕೆ ಮನವಿ ಮಾಡಿದ UNRWA ಸಿಬ್ಬಂದಿಗಳು

ಗಾಝಾವನ್ನು ರಕ್ಷಿಸಿ, ಸಾವಿರಾರು ಮಂದಿ ಸಾಯುತ್ತಾರೆ: ತುರ್ತು ಸಹಾಯಕ್ಕೆ ಮನವಿ ಮಾಡಿದ UNRWA ಸಿಬ್ಬಂದಿಗಳು

- Advertisement -
- Advertisement -

ಪ್ಯಾಲೆಸ್ತೀನ್ ನಿರಾಶ್ರಿತರ ರಕ್ಷಣೆಗೆ ಕಾರ್ಯಚರಿಸುತ್ತಿರುವ UNRWA ಸಿಬ್ಬಂದಿಗಳು, ಇಸ್ರೇಲ್ ದಾಳಿಯ ಮಧ್ಯೆ ಗಾಝಾದಲ್ಲಿ ಸೃಷ್ಟಿಯಾದ ವಿಪತ್ತಿನ ಪರಿಸ್ಥಿತಿಯಿಂದ ಜನರನ್ನು ರಕ್ಷಿಸಿ ಎಂದು ಮನವಿ ಮಾಡಿದ್ದು, UNRWA ಆಶ್ರಯದಲ್ಲಿರುವ ಮಕ್ಕಳು, ಗರ್ಭಿಣಿಯರು ಮತ್ತು ವೃದ್ಧರಿಗೆ ಆಹಾರ, ನೀರು ಮತ್ತು ಔಷಧಿಗಳನ್ನು ತಕ್ಷಣದಲ್ಲಿ ಪೂರೈಕೆ ಮಾಡುವಂತೆ ಮನವಿ ಮಾಡಿದ್ದಾರೆ.

ಯುಎನ್ ರಿಲೀಫ್ ಅಂಡ್ ವರ್ಕ್ಸ್ ಏಜೆನ್ಸಿ ಫಾರ್ ಪ್ಯಾಲೆಸ್ಟೈನ್ ರೆಪ್ಯೂಜೀಸ್ ನಿಯರ್ ಈಸ್ಟ್ (ಯುಎನ್‌ಆರ್‌ಡಬ್ಲ್ಯುಎ) ಗಾಝಾದಲ್ಲಿನ ಪ್ಯಾಲೆಸ್ತೀನ್ ನಿರಾಶ್ರಿತರನ್ನು ರಕ್ಷಿಸಲು ತುರ್ತು ಮನವಿಯನ್ನು ಮಾಡಿದೆ. ಗಾಝಾ ಪಟ್ಟಿಯಲ್ಲಿ ಪ್ಯಾಲೆಸ್ತೀನ್ ನಿರಾಶ್ರಿತರು ಹಿಂಸಾಚಾರದ ತೀವ್ರತೆಯ ಪರಿಣಾಮಗಳನ್ನು ಅನುಭವಿಸುತ್ತಿದ್ದಾರೆ ಎಂದು ಹೇಳಿದೆ.

ದಯವಿಟ್ಟು ಗಾಝಾವನ್ನು ಉಳಿಸಿ, ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ, ಗಾಝಾವನ್ನು ಉಳಿಸಿ. ಅದು ನಾಶವಾಗುತ್ತಿದೆ ಎಂದು ಯುಎನ್‌ಆರ್‌ಡಬ್ಲ್ಯುಎ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ವಿಡಿಯೋದಲ್ಲಿ ಯುಎನ್‌ಆರ್‌ಡಬ್ಲ್ಯುಎ ಆಶ್ರಯ ತಾಣಗಳ ಮುಖ್ಯಸ್ಥ ಹೇಳುತ್ತಿರುವುದು ಕಂಡು ಬಂದಿದೆ.

ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ನಡೆಸಿದ ನಂತರ, ಇಸ್ರೇಲಿ ಮಿಲಿಟರಿ ಉತ್ತರ ಗಾಜಾದಲ್ಲಿ ವಾಸಿಸುವ 1.1 ಮಿಲಿಯನ್ ಪ್ಯಾಲೆಸ್ತೀನಿಯನ್ನರನ್ನು ದಕ್ಷಿಣಕ್ಕೆ ಸ್ಥಳಾಂತರಕ್ಕೆ ಸೂಚಿಸಿತ್ತು. ಇದರ ಬಳಿಕ ಸಾವಿರಾರು ಕುಟುಂಬಗಳು ವಾಹನಗಳಲ್ಲಿ ಮತ್ತು ಕಾಲ್ನಡಿಗೆಯಲ್ಲಿ ಮನೆಬಿಟ್ಟು ತೆರಳುತ್ತಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ UNRWA ಆಶ್ರಯ ತಾಣಗಳ ಮುಖ್ಯಸ್ಥರು, ಮಕ್ಕಳು, ವೃದ್ಧರು ಮತ್ತು ವಯಸ್ಕರಿಗೆ ನಾವು ಎಲ್ಲವನ್ನೂ ಒದಗಿಸಲು ಸಾಧ್ಯವಾಗುತ್ತಿಲ್ಲ. ನಾನು UNRWA ಆಶ್ರಯದ ಮುಖ್ಯಸ್ಥನಾಗಿದ್ದೇನೆ ಆಹಾರ, ನೀರನ್ನು ಕೂಡ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ವೀಡಿಯೊವೊಂದರಲ್ಲಿ UNRWA ಆಶ್ರಯ ತಾಣದ ಹಲಾಸ್ ಸಹಾಯಕ್ಕಾಗಿ ಭಾವನಾತ್ಮಕ ಮನವಿಯನ್ನು ಮಾಡಿದ್ದಾರೆ. ನನ್ನ ಆಶ್ರಯದಲ್ಲಿರುವ ನಿರಾಶ್ರಿತರಿಗೆ ಅಗತ್ಯ ಔಷಧಗಳು ಮತ್ತು ಆಹಾರವನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ಅವರ ಧ್ವನಿಯಲ್ಲಿ ಹತಾಶೆ ಮತ್ತು ದುಃಖ ವ್ಯಕ್ತವಾಗಿತ್ತು.

ನಾವು ಈಗ ಇರುವ ಪರಿಸ್ಥಿತಿಯನ್ನು ಪದಗಳಿಂದ ವಿವರಿಸಲು ಸಾಧ್ಯವಿಲ್ಲ ಎಂದು ಹಲಾಸ್ ವೀಡಿಯೊದಲ್ಲಿ ಹೇಳಿದ್ದು, 15,000 ಪ್ಯಾಲೇಸ್ತೀನ್‌ ನಿರಾಶ್ರಿತರು ಆಶ್ರಯದಲ್ಲಿದ್ದಾರೆ ಎಂದು ಹೇಳಿದರು. ಅವರು ಆಹಾರ, ನೀರಿಲ್ಲದೆ ತಮ್ಮ ಮನೆಗಳನ್ನು ತೊರೆದರು. ನಿರಾಶ್ರಿತರಲ್ಲಿ ಸಕ್ಕರೆ ಕಾಯಿಲೆ ಇರುವವರು, ಅಂಗವಿಕಲ ಶಿಶುಗಳು ಹಾಗೂ ಈಗ ಸಿಡುಬು ರೋಗಕ್ಕೆ ತುತ್ತಾಗಿರುವ ಮಕ್ಕಳು ಇದ್ದಾರೆ ಎಂದು ಹೇಳಿದ್ದಾರೆ

ಆಹಾರ, ಸ್ನಾನಗೃಹಗಳು, ನೀರು, ವಿದ್ಯುಚ್ಛಕ್ತಿಯ ವ್ಯವಸ್ಥೆ ಮಾಡಲು ಸಾಧ್ಯವಾಗುತ್ತಿಲ್ಲ. ಸದ್ಯದಲ್ಲೇ ವಿದ್ಯುತ್ ಸಂಪರ್ಕ ಕಡಿತಗೊಳ್ಳಲಿದೆ. ಅವರ ಅಗತ್ಯಗಳನ್ನು ಹೇಗೆ ಪೂರೈಸುವುದು ಎಂದು ನಮಗೆ ತಿಳಿದಿಲ್ಲ. ಇಲ್ಲಿ ಏನೂ ಇಲ್ಲ ಎಂದು ಹಲಾಸ್ ಹೇಳಿದ್ದಾರೆ.

ನಾವು ಅವರಿಗೆ ಆಹಾರ ಮತ್ತು ನೀರು ನೀಡುವಂತೆ ಸಹಾಯ ಹುಡುಕುತ್ತಿದ್ದೇವೆ. ಅವರು ಏನೂ ಇಲ್ಲದೆ ಬಂದಿದ್ದಾರೆ. ಆದರೆ ಅವರು ಭಿಕ್ಷುಕರಲ್ಲ. ಅವರಲ್ಲಿ ಹಣ ಇದೆ. ಆದರೆ ನಾವು ಬೇಕಿದ್ದ ನೀರು ಆಹಾರ ಎಲ್ಲಿ ಖರೀದಿಸಬಹುದು? ನಮಗೆ ಇನ್ಸುಲಿನ್ ಬೇಕು, ಜನರು ಸಾಯುತ್ತಿದ್ದಾರೆ. ನಾವು ಅವರಿಗೆ ಏನನ್ನೂ ನೀಡಲು ಸಾಧ್ಯವಾಗುತ್ತಿಲ್ಲ. ಪರಿಸ್ಥಿತಿಯು ದುರಂತ ಪರಿಸ್ಥಿತಿಯಾಗಿದೆ ಎಂದು ಹೇಳಿದ್ದಾರೆ.

ಎಕ್ಸ್‌ನಲ್ಲಿನ ಮತ್ತೊಂದು ಪೋಸ್ಟ್‌ನಲ್ಲಿ UNRWA ಸಿಬ್ಬಂದಿ ಅಜ್ಜಮ್ ಅವರು ಈ ದಿನಗಳಲ್ಲಿ ಗಾಜಾದಲ್ಲಿ  ಬದುಕುವುದು ಮಾತ್ರವಲ್ಲ, ಸ್ನಾನಕ್ಕೆ ಸ್ವಲ್ಪ ನೀರು ಹೊಂದುವುದು ಪಂಚತಾರಾ ಹೋಟೆಲ್‌ನಲ್ಲಿ ಇದ್ದಂತೆ ಮತ್ತು ಫೋನ್‌ನ್ನು ಸಂಪೂರ್ಣವಾಗಿ ಚಾರ್ಜ್ ಮಾಡುವುದು ಒಂದು ಕನಸಾಗಿದೆ ಎಂದು ಹೇಳಿದ್ದಾರೆ.

ಕಳೆದ ಶನಿವಾರ ಇಸ್ರೇಲ್ ಮೇಲೆ ಹಮಾಸ್ ನಡೆಸಿದ ಭಯಾನಕ ದಾಳಿಯಲ್ಲಿ 1,200 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಮತ್ತು ಸಾವಿರಾರು ಜನರು ಗಾಯಗೊಂಡಿದ್ದಾರೆ ಎಂದು ಯುಎನ್ ಸೆಕ್ರೆಟರಿ-ಜನರಲ್ ಆಂಟೋನಿಯೊ ಗುಟೆರೆಸ್ ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್ ನಡೆಸಿದ ದಾಳಿಯಲ್ಲಿ 2,300 ಜನರು ಮೃತಪಟ್ಟಿದ್ದು, ಸಾವಿರಾರು ಜನರು ಗಾಯಗೊಂಡಿದ್ದಾರೆ.

ಅ.7 ರಿಂದ 4,23,000ಕ್ಕೂ ಹೆಚ್ಚು ಜನರು ಈಗಾಗಲೇ ಸ್ಥಳಾಂತರಗೊಂಡಿದ್ದಾರೆ ಎಂದು UNRWA ಹೇಳಿದೆ. ಅವರಲ್ಲಿ 2,70,000ಕ್ಕೂ ಹೆಚ್ಚು ಜನರು UNRWA ಆಶ್ರಯದಲ್ಲಿ ಆಶ್ರಯ ಪಡೆದಿದ್ದಾರೆ. ಅವರಲ್ಲಿ 50,000 ಗರ್ಭಿಣಿಯರಿದ್ದಾರೆ. ಈ ಪೈಕಿ ಸುಮಾರು 5,500 ಮಹಿಳೆಯರು ತುಂಬು ಗರ್ಭಿಣಿಯರಾಗಿದ್ದಾರೆ ಎಂದು ಹೇಳಿದೆ.

ಇಲ್ಲಿ ಇಂಟರ್‌ನೆಟ್‌ ಲಭ್ಯತೆ ಕನಸಾಗಿದೆ. ಇವು ಅಕ್ಷರಶಃ ನಿದ್ದೆಯಿಲ್ಲದ ರಾತ್ರಿಗಳು, ಸೂರ್ಯೋದಯಕ್ಕೆ ಮೊದಲೇ ಬೃಹತ್ ಬಾಂಬ್ ಸ್ಫೋಟವು ಪ್ರಾರಂಭವಾಗುತ್ತದೆ. ಪ್ರತಿ 10 ಅಥವಾ 15 ನಿಮಿಷಗಳಿಗೊಮ್ಮೆ ಶಬ್ಧಗಳು ಕೇಳಿಸುತ್ತಿದೆ. ಹಗಲು ಹೊತ್ತಿನಲ್ಲಿ ಬಾಂಬ್ ಸ್ಫೋಟವು ನಿಲ್ಲುವುದಿಲ್ಲ ಆದರೆ ಅದು ಕಡಿಮೆ ಪ್ರಮಾಣದ್ದಾಗಿದೆ ಆದರೆ ಕತ್ತಲೆಯ ಸಮಯದಲ್ಲಿ ದೊಡ್ಡ ಮಟ್ಟದಲ್ಲಿ ಬಾಂಬ್‌ ದಾಳಿ ಶಬ್ಧಗಳು ಕೇಳುತ್ತಿದೆ ಎಂದು ಅಜ್ಜಮ್ ಹೇಳಿದ್ದಾರೆ.

ಯುಎನ್ ಎಮರ್ಜೆನ್ಸಿ ರಿಲೀಫ್ ಕೋ ಆರ್ಡಿನೇಟರ್ ಮಾರ್ಟಿನ್ ಗ್ರಿಫಿತ್ಸ್ ಕೂಡ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಭೀಕರತೆಯ ಎಚ್ಚರಿಕೆ ನೀಡಿದ್ದಾರೆ. ನೀರು, ವಿದ್ಯುತ್, ಆಹಾರ ಮತ್ತು ಔಷಧವಿಲ್ಲದೆ ಸಾವಿರಾರು ಮಂದಿ ಸಾಯುತ್ತಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಟಾಟಾ ಕನ್ಸಲ್ಟೆನ್ಸಿ ನೇಮಕಾತಿ ಹಗರಣ: 16 ಉದ್ಯೋಗಿಗಳ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...