Homeಮುಖಪುಟಪ್ರಶ್ನೆ ಕೇಳಲು ಲಂಚ ಆರೋಪ: ಬಿಜೆಪಿ ಸಂಸದನಿಗೆ ಲೀಗಲ್ ನೋಟಿಸ್ ಕಳುಹಿಸಿದ ಮಹುವಾ ಮೊಯಿತ್ರಾ

ಪ್ರಶ್ನೆ ಕೇಳಲು ಲಂಚ ಆರೋಪ: ಬಿಜೆಪಿ ಸಂಸದನಿಗೆ ಲೀಗಲ್ ನೋಟಿಸ್ ಕಳುಹಿಸಿದ ಮಹುವಾ ಮೊಯಿತ್ರಾ

- Advertisement -
- Advertisement -

ತೃಣಮೂಲ ಕಾಂಗ್ರೆಸ್‌ನ ಲೋಕಸಭಾ ಸಂಸದೆ ಮಹುವಾ ಮೊಯಿತ್ರಾ ಅವರು ತಮ್ಮ ವಿರುದ್ಧ ಸುಳ್ಳು ಮತ್ತು ಮಾನಹಾನಿಕರ ಆರೋಪಗಳನ್ನು ಮಾಡಿದ್ದಕ್ಕಾಗಿ ಭಾರತೀಯ ಜನತಾ ಪಕ್ಷದ ಸಂಸದ ನಿಶಿಕಾಂತ್ ದುಬೆ ಮತ್ತು ವಕೀಲ ಜೈ ಅನಂತ್ ದೇಹದ್ರಾಯ್ ಅವರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

ದುಬೆ ಅವರು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದು ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಲು ಮೊಯಿತ್ರಾ ನಗದು ಸ್ವೀಕರಿಸಿದ್ದಾರೆ ಎಂದು ಆರೋಪಿಸಿದ್ದರು ಮತ್ತು ತೃಣಮೂಲ ಸಂಸದರ ವಿರುದ್ಧ ತನಿಖೆಗೆ ಒತ್ತಾಯಿಸಿದ್ದರು. ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಲು  ಉದ್ಯಮಿ ದರ್ಶನ್ ಹಿರಾನಂದಾನಿ ಅವರಿಂದ ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದರು.

ತನ್ನ ಪತ್ರದಲ್ಲಿ ಮಹುವಾ ಮೊಯಿತ್ರಾ  ಅವರು ಗಂಭೀರ ವಿಶೇಷಾಧಿಕಾರದ ಉಲ್ಲಂಘನೆ, ಸದನದ ಅವಹೇಳನ ಮಾಡಿದ್ದಾರೆ ಮತ್ತು ಐಪಿಸಿಯ ಸೆಕ್ಷನ್ 120A ಅಡಿಯಲ್ಲಿ ಕ್ರಿಮಿನಲ್ ಅಪರಾಧ ಎಸಗಿದ್ದಾರೆ ಎಂದು ದುಬೆ ಆರೋಪಿಸಿದ್ದಾರೆ.

ಸಂಸತ್ತಿನಲ್ಲಿ ಅದಾನಿ ಗ್ರೂಪ್ ಬಗ್ಗೆ ಪ್ರಶ್ನೆಗಳನ್ನು ಕೇಳಲು ಮೊಯಿತ್ರಾ ಅವರಿಗೆ ನಗದು ಮತ್ತು ಉಡುಗೊರೆಗಳನ್ನು ಲಂಚವಾಗಿ ನೀಡಲಾಗಿದೆ ಎಂದು ದುಬೆ ಭಾನುವಾರ ಲೋಕಸಭೆಯ ಸ್ಪೀಕರ್‌ಗೆ ಬರೆದ ಪತ್ರದಲ್ಲಿ ಆರೋಪಿಸಿದ್ದಾರೆ. ದೆಹದ್ರಾಯಿಯಿಂದ ಈ ಬಗ್ಗೆ ಮಾಹಿತಿ ಪಡೆದಿರುವುದಾಗಿ ಹೇಳಿಕೊಂಡಿದ್ದಾರೆ.

ದುಬೆ ಅವರ ಶೈಕ್ಷಣಿಕ ಅರ್ಹತೆಗಳ ಸತ್ಯಾಸತ್ಯತೆಯ ಬಗ್ಗೆ ಮೊಯಿತ್ರಾ ಅವರು ಇತ್ತೀಚೆಗೆ ಪ್ರಶ್ನೆಗಳನ್ನು ಕೇಳಿದ್ದರು ಮತ್ತು ಅವರು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ಸುಳ್ಳು ಹೇಳಿದ್ದಾರೆ ಎಂದು ಮೊಯಿತ್ರಾ ಹೇಳಿದ್ದಾರೆ. ಇದಕ್ಕೆ ಅವರು ಈ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.

ಮೊಯಿತ್ರಾ ಮತ್ತು ವಕೀಲ ದೇಹದ್ರಾಯ್ ನಿಕಟ ಸ್ನೇಹಿತರಾಗಿದ್ದರು, ಆದರೆ ಭಿನ್ನಾಭಿಪ್ರಾಯ ಹೊಂದಿದ್ದರು ಎಂದು ನೋಟಿಸ್ ಹೇಳುತ್ತದೆ. ಮೊಯಿತ್ರಾ ಅವರ ಬಗ್ಗೆ ಸುಳ್ಳು ಸುದ್ದಿಗಳನ್ನು ಪ್ರಕಟಿಸಲು ಪತ್ರಕರ್ತರನ್ನು ಒತ್ತಾಯಿಸಲು ದೇಹದ್ರಾಯ್ ಪ್ರಯತ್ನಿಸಿದರು. ಆದರೆ ಪುರಾವೆಗಳ ಕೊರತೆಯಿಂದಾಗಿ ಯಾರಿಗೂ ಮನವರಿಕೆ ಮಾಡಲು ಸಾಧ್ಯವಾಗಲಿಲ್ಲ ಎಂದು ನೊಟೀಸ್‌ನಲ್ಲಿ ಹೇಳಲಾಗಿದೆ.

ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ಬಗ್ಗೆ ಮೊಯಿತ್ರಾ ಮತ್ತು ಇತರ ವಿರೋಧ ಪಕ್ಷಗಳು ಎತ್ತಿರುವ ಪ್ರಶ್ನೆಗಳಿಗೆ ಕೇಂದ್ರ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಮೊಯಿತ್ರಾ ಅವರು ಸಂಪೂರ್ಣವಾಗಿ ಆಧಾರರಹಿತ ಆರೋಪ ಎಂದಿದ್ದು, ಆರೋಪವನ್ನು ತಿರಸ್ಕರಿಸಿದ್ದಾರೆ. ಮೊಯಿತ್ರಾ ಅವರು ಸಂಸತ್ತಿನ ಸದಸ್ಯರಾಗಿ ತನ್ನ ಕರ್ತವ್ಯಗಳ ನಿರ್ವಹಣೆಗೆ ಯಾವುದೇ ರೀತಿಯ ಸಂಭಾವನೆ ಅಥವಾ ನಗದು ಅಥವಾ ಉಡುಗೊರೆ ಅಥವಾ ಪ್ರಯೋಜನವನ್ನು ಪಡೆದಿಲ್ಲ ಎಂದು ಹೇಳಿದ್ದಾರೆ.

ಸ್ಪೀಕರ್‌ಗೆ ಬರೆದ ಪತ್ರ ಮತ್ತು ಎಲ್ಲಾ ಆರೋಪಗಳನ್ನು ಹಿಂತೆಗೆದುಕೊಳ್ಳುವಂತೆ ಮತ್ತು ಮೊಯಿತ್ರಾ ಅವರಿಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ನೋಟಿಸ್‌ನಲ್ಲಿ ದುಬೆ ಮತ್ತು ದೇಹಾದ್ರಾಯ್ ಅವರಲ್ಲಿ ಆಗ್ರಹಿಸಲಾಗಿದೆ.

ಇದನ್ನು ಓದಿ: ಗಾಝಾವನ್ನು ರಕ್ಷಿಸಿ, ಸಾವಿರಾರು ಮಂದಿ ಸಾಯುತ್ತಾರೆ: ತುರ್ತು ಸಹಾಯಕ್ಕೆ ಮನವಿ ಮಾಡಿದ UNRWA ಸಿಬ್ಬಂದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...