Homeಮುಖಪುಟಸಿಎಂ ಸ್ಥಾನ ಬಿಡಲು ಬಯಸಿದರೂ, ಅದು ನನ್ನನ್ನು ಬಿಡುತ್ತಿಲ್ಲ: ಅಶೋಕ್ ಗೆಹ್ಲೋಟ್

ಸಿಎಂ ಸ್ಥಾನ ಬಿಡಲು ಬಯಸಿದರೂ, ಅದು ನನ್ನನ್ನು ಬಿಡುತ್ತಿಲ್ಲ: ಅಶೋಕ್ ಗೆಹ್ಲೋಟ್

- Advertisement -
- Advertisement -

”ಮುಖ್ಯಮಂತ್ರಿ ಹುದ್ದೆಯನ್ನು ನಾನು ಬಿಡಲು ಬಯಸಿದರೂ, ಆ ಸ್ಥಾನ ನನ್ನನ್ನು ಬಿಡುತ್ತಿಲ್ಲ, ಬಹುಶಃ ಬಿಡುವುದು ಇಲ್ಲ” ಎಂದು ರಾಜಸ್ತಾನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಮಹಿಳಾ ಬೆಂಬಲಿಗರೊಬ್ಬರು ತಾನು 4ನೇ ಬಾರಿಗೆ ಮುಖ್ಯಮಂತ್ರಿಯಾಗಬೇಕು ಎಂದು ಬಯಸುವುದಾಗಿ ಹೇಳಿದ್ದರು. ಅದಕ್ಕೆ ನಾನು ಅವರಿಗೆ ಈ ರೀತಿ ಹೇಳಿದೆ. ನಾನು ಮುಖ್ಯಮಂತ್ರಿ ಸ್ಥಾನ ತೊರೆಯಲು ತಯಾರಿದ್ದೇನೆ, ಆದರೆ ಈ ಹುದ್ದೆಯು ನನ್ನನ್ನು ಹೋಗಲು ಬಿಡುತ್ತಿಲ್ಲ ಎಂದು ಹೇಳಿರುವುದಾಗಿ ತಿಳಿಸಿದರು.

ಮೂರು ಬಾರಿ ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕಾದರೆ, ಹೈ ಕಮಾಂಡ್ ಗೆ ನನ್ನಲ್ಲಿ ಏನೋ ವಿಶೇಷತೆ ಕಂಡಿರಬೇಕು. ಪಕ್ಷ ತೆಗೆದುಕೊಳ್ಳುವು ಯಾವುದೇ ನಿರ್ಧಾರವು ಎಲ್ಲರಿಗೂ ಸ್ವೀಕಾರಾರ್ಹವಾಗಿರುತ್ತದೆ ಎಂದು ಅವರು ಹೇಳಿದರು.

ಜೆಪಿ ಕುತಂತ್ರ ರಾಜಕಾರಣದಿಂದಾಗಿ ಕಾಂಗ್ರೆಸ್‍ನಲ್ಲಿ ಒಳಜಗಳವಾಗುತ್ತಿದೆ ಹೊರತು ಬೇರೇನಿಲ್ಲ. ಕಾಂಗ್ರೆಸ್‍ನಲ್ಲಿ ಒಗ್ಗಟ್ಟಿದ್ದು, ಅದನ್ನು ಮುರಿಯಲು ಯಾರಿಂದಲೂ ಸಾಧ್ಯವಿಲ್ಲ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಅದು ಸಾಬೀತಾಗಲಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ಅಶೋಕ್ ಗೆಹ್ಲೋಟ್ ಹಾಗೂ ಸಚಿನ್ ಪೈಲಟ್ ನಡುವೆ ಮುಸುಕಿನ ಗುದ್ದಾಟ ನಡೆದಿತ್ತು. ಈ ಗುದ್ದಾಟವು ಬಹುತೇಕ ರಾಜಸ್ಥಾನ ಸರ್ಕಾರವನ್ನು ಉರುಳಿಸುವ ಹಂತಕ್ಕೆ ಬಂದಿತ್ತು. ಈ ವೇಳೆ ಹೈಕಮಾಂಡ್ ಮಧ್ಯಪ್ರವೇಶ ಮಾಡಿದ್ದರಿಂದ ಸರ್ಕಾರ ಉಳಿದುಕೊಂಡಿತ್ತು.

ಪ್ರತಿಪಕ್ಷ ನಾಯಕರ ವಿರುದ್ಧ ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಅವರು, ಮಾದರಿ ಸಂಹಿತೆ ಜಾರಿಯಲ್ಲಿರುವುದರಿಂದ ತಕ್ಷಣವೇ ತಡೆಯಲು ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕು ಎಂದು ಕೋರಿದ್ದಾರೆ. ಚುನಾವಣಾ ಆಯೋಗವೂ ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸಿದರು.

ಟಿಕೆಟ್ ನೀಡುವ ವಿಚಾರದಲ್ಲಿ ಪಕ್ಷದೊಳಗೆ ಭಿನ್ನಾಭಿಪ್ರಾಯಗಳಿವೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಮತ್ತು ಸರ್ವಾನುಮತದಿಂದ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ನವೆಂಬರ್ 25 ರಂದು ರಾಜಸ್ಥಾನ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ನನ್ನನ್ನು ಕೆಣಕಿದ್ದೀರಿ, ಇದರ ಪರಿಣಾಮ ಕಾದು ನೋಡಿ: ದೇವೇಗೌಡರಿಗೆ ಇಬ್ರಾಹಿಂ ಸವಾಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read