Homeಮುಖಪುಟದೆಹಲಿ: ಸಲಿಂಗ ದಂಪತಿ ಮೇಲೆ ಸಾಮೂಹಿಕ ಅತ್ಯಾಚಾರ

ದೆಹಲಿ: ಸಲಿಂಗ ದಂಪತಿ ಮೇಲೆ ಸಾಮೂಹಿಕ ಅತ್ಯಾಚಾರ

- Advertisement -
- Advertisement -

ಸಲಿಂಗ ದಂಪತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ದೆಹಲಿಯ ಶಕರ್​ಪುರ್ ಪ್ರದೇಶದಲ್ಲಿ ನಡೆದಿದೆ. ದಂಪತಿಗಳು ಬಾಂಗ್ಲಾದೇಶಿ ಪ್ರಜೆಗಳಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.

ಈ ಘಟನೆಯು ಅಕ್ಟೋಬರ್ 17 ರಂದು ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಮೂವರು ಶಂಕಿತರನ್ನು ಬಂಧಿಸಲು ಪಿಸಿಆರ್ ಪಡೆದ ನಂತರ ದೆಹಲಿ ಪೊಲೀಸರು ತ್ವರಿತವಾಗಿ ಕಾರ್ಯನಿರ್ವಹಿಸಿದರು.

ದೂರನ್ನು ಸ್ವೀಕರಿಸಿದ ನಂತರ, ಶಕರ್‌ಪುರ ಪೊಲೀಸ್ ಠಾಣೆಯ 20 ಪೊಲೀಸ್ ಸಿಬ್ಬಂದಿಯ ತಂಡವು ತನಿಖೆಯನ್ನು ಪ್ರಾರಂಭಿಸಿತು. ಪೊಲೀಸ್ ತಂಡಗಳು ಸುತ್ತಮುತ್ತಲಿನ ಸುಮಾರು 50 ಕ್ಯಾಮೆರಾಗಳಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಪೊಲೀಸರು, ”ಬಂಧಿತ ಮೂವರು ಆರೋಪಿಗಳನ್ನು 20 ವರ್ಷ ವಯಸ್ಸಿನ ದೇವಶಿಶ್ ವರ್ಮಾ, 21 ವರ್ಷ ವಯಸ್ಸಿನ ಸುರ್ಜೀತ್ ಮತ್ತು 20 ವರ್ಷದ ಆರ್ಯನ್ ಅಲಿಯಾಸ್ ಗೋಲು ಎಂದು ಗುರುತಿಸಲಾಗಿದೆ. ಇನ್ನಿಬ್ಬರು ಆರೋಪಿಗಳನ್ನು ಇನ್ನೂ ಪತ್ತೆ ಹಚ್ಚಬೇಕಿದೆ. ಸಂತ್ರಸ್ತರಿಬ್ಬರೂ ರಾಮ್ ಲೀಲಾವನ್ನು ನೋಡಲು ಹೋದಾಗ ಈ ಕೃತ್ಯ ನಡೆದಿದೆ ಎಂದು ತಿಳಿಸಿದ್ದಾರೆ.

”ಆರೋಪಿಗಳಲ್ಲಿ ಒಬ್ಬಾತನಿಗೆ ಸಂತ್ರಸ್ತರೊಬ್ಬರ ಪರಿಚಯ ಇತ್ತು. ಇವರು ಸಲಿಂಗ ದಂಪತಿ ಎಂದು ತಿಳಿದು ಆರೋಪಿಯು ತನ್ನ ಇತರ ಸ್ನೇಹಿತರೊಂದಿಗೆ ಆಗಮಿಸಿದ್ದನು. ಆನಂತರ ಆರೋಪಿಗಳು ಸಂತ್ರಸ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 323 (ನೋವು ಉಂಟುಮಾಡುವುದು), 377 (ಅಸ್ವಾಭಾವಿಕ ಅಪರಾಧಗಳು) ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಇದನ್ನೂ ಓದಿ: ಸಲಿಂಗ ವಿವಾಹ: ಕಾನೂನು ರೂಪಿಸುವ ಅಧಿಕಾರ ಸಂಸತ್ತಿಗೆ ಇರುವುದು; ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...