Homeಮುಖಪುಟಅಫಿಡವಿಟ್‌ ಸೋರಿಕೆ ವಿಚಾರ: ಕೇಂದ್ರ ಸರ್ಕಾರಕ್ಕೆ ಮಹುವಾ ಮೊಯಿತ್ರಾ ತರಾಟೆ

ಅಫಿಡವಿಟ್‌ ಸೋರಿಕೆ ವಿಚಾರ: ಕೇಂದ್ರ ಸರ್ಕಾರಕ್ಕೆ ಮಹುವಾ ಮೊಯಿತ್ರಾ ತರಾಟೆ

- Advertisement -
- Advertisement -

ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರು ಉದ್ಯಮಿ ದರ್ಶನ್ ಹಿರಾನಂದಾನಿ ಅವರ ಅಫಿಡವಿಟ್‌ ಸೋರಿಕೆ ವಿಚಾರವಾಗಿ ಕೇಂದ್ರ ಸರ್ಕಾರವನ್ನು ತರಾಟೆ ತೆಗೆದುಕೊಂಡಿದ್ದಾರೆ.

ಈ ಬಗ್ಗೆ ಎಕ್ಸಾನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ”ನೈತಿಕ ಸಮಿತಿಯ ಅಧ್ಯಕ್ಷರು ಮಾಧ್ಯಮಗಳೊಂದಿಗೆ ಬಹಿರಂಗವಾಗಿ ಮಾತನಾಡುತ್ತಾರೆ. ದಯವಿಟ್ಟು ಕೆಳಗಿನ ಲೋಕಸಭೆಯ ನಿಯಮಗಳನ್ನು ನೋಡಿ. “ಅಫಿಡವಿಟ್” ಮಾಧ್ಯಮಗಳಿಗೆ ಹೇಗೆ ಸಿಗುತ್ತದೆ? ಇದು ಹೇಗೆ ಸೋರಿಕೆಯಾಗಿದೆ ಎಂಬ ಬಗ್ಗೆ ಅಧ್ಯಕ್ಷರು ಮೊದಲು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

”ಬಿಜೆಪಿ ಏಕೈಕ ಅಜೆಂಡಾ ಎಂದರೆ, ಅದಾನಿಯ ವಿಚಾರದಲ್ಲಿ ನನ್ನ ಬಾಯಿ ಮುಚ್ಚಿಸಲು ನನ್ನನ್ನು ಲೋಕಸಭೆಯಿಂದಲೇ ಹೊರಹಾಕುವುದಾಗಿದೆ” ಎಂದು ಕಿಡಿಕಾರಿದ್ದಾರೆ.

”ಸಿಬಿಐ ಮತ್ತು ನೈತಿಕ ಸಮಿತಿ (ಇದು ಬಿಜೆಪಿ ಸದಸ್ಯರ ಸಂಪೂರ್ಣ ಬಹುಮತವನ್ನು ಹೊಂದಿರುವ ಸಮಿತಿ)  ನನ್ನನ್ನು ಕರೆದರೆ ಮತ್ತು ನನ್ನನ್ನು ಪ್ರಶ್ನಿಸಿದರೆ ನಾನು ಸ್ವಾಗತಿಸುತ್ತೇನೆ. ಅದಾನಿ ನಿರ್ದೇಶನದ ಮಾಧ್ಯಮ ಸರ್ಕಸ್ ವಿಚಾರಣೆಗೆ ಅಥವಾ ಬಿಜೆಪಿ ಟ್ರೋಲ್‌ಗಳಿಗೆ ಉತ್ತರಿಸಲು ನನಗೆ ಸಮಯ ಅಥವಾ ಆಸಕ್ತಿ ಇಲ್ಲ.
ನಾನು ನಾಡಿಯಾದಲ್ಲಿ ದುರ್ಗಾ ಪೂಜೆಯನ್ನು ಆನಂದಿಸುತ್ತಿದ್ದೇನೆ. ಶುಭೋ ಷಷ್ಠಿ” ಎಂದಿದ್ದಾರೆ.

ಉದ್ಯಮಿ ದರ್ಶನ್ ಹಿರಾನಂದಾನಿ ಅವರ ಅಫಿಡವಿಟ್‌ ಸೋರಿಕೆ ವಿಚಾರವಾಗಿ ಬಿಜೆಪಿ ಸಂಸದ ವಿರುದ್ಧ ಹರಿಹಾಯ್ದ ಮಹುವಾ ಮೊಯಿತ್ರಾ ಅವರು, ”ತಮ್ಮ PA ಗಳು ಮತ್ತು ಸಂಶೋಧಕರು/ಇಂಟರ್ನ್‌ಗಳು/ಸಿಬ್ಬಂದಿಗಳ ID ಗಳನ್ನು ಪರಿಕ್ಷಿಸಿದರೆ ಅವರು ಯಾವ ಸ್ಥಳದಲ್ಲಿ ಇದ್ದಾರೆ ಎಂಬುದನ್ನು ತೋರಿಸಬಹುದು. ದಯವಿಟ್ಟು ಸಾರ್ವಜನಿಕವಾಗಿ ಸಂಸದರ ಎಲ್ಲಾ ವಿವರಗಳನ್ನು ಬಿಡುಗಡೆ ಮಾಡಲು NICಗೆ ವಿನಂತಿಸುತ್ತೇನೆ. ಸೋರಿಕೆಗಾಗಿ ನಕಲಿ ಪದವಿ ವಾಲಾವನ್ನು ಬಳಸಬೇಡಿ, ಇದೀಗ ಇದನ್ನು ಸಾರ್ವಜನಿಕಗೊಳಿಸಿ” ಎಂದು ಹೇಳಿದ್ದಾರೆ.

ಹೆಸರಿಸದ ವಿದೇಶಿ ಬಂಡವಾಳ ಹೂಡಿಕೆಯನ್ನು ಅದಾನಿ ಷೇರುಗಳಲ್ಲಿದೆ, ಅದರ ಮೂಲವನ್ನು ಸೆಬಿಯು ಕಂಡುಹಿಡಿಯಲಿಲ್ಲ ಮತ್ತು ಮುಂಬೈ ವಿಮಾನ ನಿಲ್ದಾಣವನ್ನು ಖರೀದಿಸಲು ಅದಾನಿ ಗೃಹ ವ್ಯವಹಾರಗಳ ಸಚಿವಾಲಯd ಅನುಮತಿಯನ್ನು ಪಡೆಯುತ್ತಾರೆ.

”ಕ್ಷಮಿಸಿ ಮಿಸ್ಟರ್ ಅದಾನಿ, ಪ್ರತಿಯಾಗಿ ನಾನು ಸುಮ್ಮನಿರಲು ಆರು ತಿಂಗಳವರೆಗೆ ನಿಮ್ಮೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತಿಲ್ಲ. ಹೌದು, ನಾನು ಎರಡನೇ ಒಪ್ಪಂದವನ್ನು ತೆಗೆದುಕೊಳ್ಳುತ್ತಿಲ್ಲ, ಏಕೆಂದರೆ ನನಗೆ ನಿಮ್ಮ ಮೇಲೆ ದಾಳಿ ಮಾಡಲು ಈಗ ಅವಕಾಶವಿದೆ, ಆದರೆ PMಗೆ ಆ ಅವಕಾಶ ಇಲ್ಲ” ಎಂದು ಕುಟುಕಿದ್ದಾರೆ.

”ಅದಾನಿ ಪ್ರಶ್ನೆ ಮಾಡದಿರಲು ಹಣ ನೀಡುತ್ತಿದ್ದರು, ಈಗ ಅವರು ಪ್ರಶ್ನೆಗಳಿಗೆ ನಕಲಿ ನಗದು ನೀಡುತ್ತಿದ್ದಾರೆ” ಎಂದು ಹೇಳಿದ್ದಾರೆ.

”ಸಿಬಿಐ ದಾಳಿ ನಡೆಯಲಿರುವ ಬಗ್ಗೆ ಕೂಡ ಸಂದೇಶ ಬಂದಿದೆ. ನಾನು ದುರ್ಗಾ ಪೂಜೆಯಲ್ಲಿ ನಿರತನಾಗಿದ್ದೇನೆ. ಮನೆಗೆ ಬಂದು ನನ್ನ ಜೋಡಿ ಶೂಗಳನ್ನು ಎಣಿಸಲು ನಾನು ಸಿಬಿಐ ಅನ್ನು ಆಹ್ವಾನಿಸುತ್ತೇನೆ. ಆದರೆ ಮೊದಲು ದಯವಿಟ್ಟು ಅದಾನಿ ಭಾರತೀಯರಿಂದ ಕದ್ದ ₹13,000 ಕೋಟಿ ಕಲ್ಲಿದ್ದಲು ಹಣಕ್ಕೆ ಎಫ್‌ಐಆರ್ ದಾಖಲಿಸಿ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...