Homeಕರ್ನಾಟಕನಾನು ಮಾನಸಿಕವಾಗಿ ಜೆಡಿಎಸ್‌ನ ಒಳಗೆ ಇದ್ದೇನೆ, ಜೆಡಿಎಸ್‌ ರಾಜ್ಯಾಧ್ಯಕ್ಷನಾಗಿದ್ದೇನೆ: ಸಿಎಂ ಇಬ್ರಾಹೀಂ

ನಾನು ಮಾನಸಿಕವಾಗಿ ಜೆಡಿಎಸ್‌ನ ಒಳಗೆ ಇದ್ದೇನೆ, ಜೆಡಿಎಸ್‌ ರಾಜ್ಯಾಧ್ಯಕ್ಷನಾಗಿದ್ದೇನೆ: ಸಿಎಂ ಇಬ್ರಾಹೀಂ

- Advertisement -
- Advertisement -

ತಾನು ತಾಂತ್ರಿಕವಾಗಿ ಮತ್ತು ಮಾನಸಿಕವಾಗಿ ಈಗಲೂ ಜೆಡಿಎಸ್‌ನಲ್ಲಿ ಇದ್ದೇನೆ ಮತ್ತು ರಾಜ್ಯದಲ್ಲಿ ಪಕ್ಷದ ನೇತೃತ್ವ ವಹಿಸಿದ್ದೇನೆ. ಏಕೆಂದರೆ ನನ್ನನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆದುಹಾಕಿರುವುದು ತಪ್ಪಾಗಿದೆ ಎಂದು ಕರ್ನಾಟಕ ಜೆಡಿಎಸ್ ಪದಚ್ಯುತ ಅಧ್ಯಕ್ಷ ಸಿ ಎಂ ಇಬ್ರಾಹಿಂ ಪುನರುಚ್ಛರಿಸಿದ್ದಾರೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡ ಮತ್ತು ಅವರ ಪುತ್ರ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಲ್ಲಿ ಬಿಜೆಪಿ ಜೊತೆ ಕೈಜೋಡಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮತ್ತೆ ಮನವಿ ಮಾಡಿದ್ದಾರೆ.  ಇದಲ್ಲದೆ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆದು ಹಾಕಿರುವ ಕುರಿತು ಕಾನೂನು ಹೋರಾಟದ ಬಗ್ಗೆ ನಿರ್ಧರಿಸುವುದಾಗಿ ಹೇಳಿದ್ದಾರೆ.

ದೇವೇಗೌಡರು ಗುರುವಾರ ಪಕ್ಷದ ಕರ್ನಾಟಕ ಘಟಕವನ್ನು ವಿಸರ್ಜಿಸಿದ್ದರು.  ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹೀಂ ಅವರನ್ನು ತೆಗೆದು ಹಾಕಿ ಕುಮಾರಸ್ವಾಮಿ ಅವರನ್ನು ನೇಮಿಸಿದ್ದರು.

ದೇವೇಗೌಡರು ಹಿರಿಯ ನಾಯಕರಾಗಿದ್ದು, ಬಿಜೆಪಿ ಜತೆಗಿನ ಮೈತ್ರಿ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮಾದ್ಯಮದ ಮೂಲಕ ಮತ್ತೊಮ್ಮೆ ಕೈಮುಗಿದು ವಿನಂತಿಸುತ್ತೇನೆ. ಕೇರಳ, ತಮಿಳುನಾಡು, ರಾಜಸ್ಥಾನ ಜೆಡಿಎಸ್‌ ಘಟಕಗಳು ಬಿಜೆಪಿ ಜತೆ ಹೋಗುವ ನಿರ್ಧಾರಕ್ಕೆ ವಿರುದ್ಧವಾಗಿವೆ ಎಂದು ಇಬ್ರಾಹೀಂ ಹೇಳಿದ್ದಾರೆ.

ಇದೇ ವೇಳೆ ಜೆಡಿಎಸ್‌ ಹಲವು ವರ್ಷಗಳಿಂದ ಪ್ರಸ್ತಾಪಿಸಿದ ಸಿದ್ದಾಂತಕ್ಕೆ ಬದ್ಧರಾಗಿರುವಂತೆ ದೇವೇಗೌಡ ಅವರಿಗೆ ಸಿಎಂ ಇಬ್ರಾಹೀಂ ಹೇಳಿದ್ದು,  ಈ ವಾರದ ಕೊನೆಯಲ್ಲಿ ಮುಂಬೈಗೆ ತೆರಳಿ ಅಲ್ಲಿನ ಜೆಡಿಎಸ್ ನಾಯಕರನ್ನು ಭೇಟಿ ಮಾಡುವುದಾಗಿ ಹೇಳಿದ್ದಾರೆ.

ದೇವೇಗೌಡರನ್ನು ಪ್ರಧಾನಿಯನ್ನಾಗಿ ಮಾಡಿದ್ದು ಹೇಗೆ ಎಂಬುದು ಗೊತ್ತಿದೆ. ನಾನು 1995ರಲ್ಲಿ ಜನತಾದಳವನ್ನು ಹೇಗೆ ಕಟ್ಟಿದ್ದೇನೆ ಎಂಬುದು ಅವರಿಗೆ ತಿಳಿದಿದೆ. ಇದು ಅವರಿಗೆ ಹೊಸದಲ್ಲ, ಅವರಿಗೆ ತಿಳಿದಿದೆ. ಆದರೆ ಏನು ಮಾಡುವುದು ಕುಮಾರಸ್ವಾಮಿ ದೇವೇಗೌಡರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಹೇಳಿದ್ದಾರೆ.

ಕುಮಾರಸ್ವಾಮಿ ನನಗೆ ಸಹೋದರರಂತೆ, ದಯವಿಟ್ಟು ಬಿಜೆಪಿ ಜೊತೆ ಹೋಗುವುದನ್ನು ಮರುಪರಿಶೀಲಿಸಿ. ಬಾಬಾಸಾಹೇಬ್ ಅಂಬೇಡ್ಕರ್, ಬಸವಣ್ಣ ಮತ್ತು ರಾಷ್ಟ್ರಕವಿ ಕುವೆಂಪು  ಅವರ ಸಿದ್ಧಾಂತಗಳನ್ನು ಒಪ್ಪಿಕೊಳ್ಳಿ. ನಮಗೆ ಪ್ರಧಾನಿಯವರ ಬಗ್ಗೆ ಗೌರವವಿದೆ. ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ನಮಗೆ ವೈಯಕ್ತಿಕವಾಗಿ ಏನೂ ದ್ವೇಷ ಇಲ್ಲ. ಆದರೆ ಸೈದ್ಧಾಂತಿಕವಾಗಿ ನಾವು ವಿಭಿನ್ನ ಹಾದಿಯಲ್ಲಿದ್ದೇವೆ ಎಂದು ಹೇಳಿದ್ದಾರೆ.

ಈ ಮೊದಲು ಸಿಎಂ ಇಬ್ರಾಹೀಂ ಮಾದ್ಯಮಗಳ ಜೊತೆ ಮತನಾಡುತ್ತಾ, ನಾವೇ ಒರಿಜಿನಲ್‌ ಜೆಡಿಎಸ್‌, ನಾನು ಅದರ ಅಧ್ಯಕ್ಷ, ಯಾವುದೇ ಕಾರಣಕ್ಕೂ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. INDIA ಒಕ್ಕೂಟಕ್ಕೆ ನಮ್ಮ ಬೆಂಬಲ ಎಂದು ಹೇಳಿದ್ದರು. ಇದರ ಮರು ದಿನವೇ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರು ಕರ್ನಾಟಕ ರಾಜ್ಯ ಜೆಡಿಎಸ್‌ ಘಟಕವನ್ನು ವಿಸರ್ಜಿಸಿದ್ದರು.

ಇದನ್ನು ಓದಿ: ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನಮಾಝ್ ಮಾಡಲು ಅವಕಾಶ ಕೊಟ್ಟ ಮುಖ್ಯ ಶಿಕ್ಷಕಿ ಅಮಾನತು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...