HomeUncategorizedಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ರುಸ್ತಮ್ ಸಿಂಗ್ ಪಕ್ಷಕ್ಕೆ ರಾಜೀನಾಮೆ

ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ರುಸ್ತಮ್ ಸಿಂಗ್ ಪಕ್ಷಕ್ಕೆ ರಾಜೀನಾಮೆ

- Advertisement -
- Advertisement -

ಮಧ್ಯಪ್ರದೇಶ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಸಚಿವ ರುಸ್ತಮ್ ಸಿಂಗ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

78ರ ಹರೆಯದ ರುಸ್ತಮ್ ಸಿಂಗ್ ತನ್ನ ರಾಜೀನಾಮೆ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ವಿಷ್ಣು ದತ್ ಶರ್ಮಾ ಅವರಿಗೆ ಪತ್ರ ಬರೆದಿದ್ದು, ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಮತ್ತು ಪಕ್ಷದ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.

ರಾಜೀನಾಮೆ ಪತ್ರದಲ್ಲಿ ರುಸ್ತಮ್ ಸಿಂಗ್ ಅವರು ತನ್ನನ್ನು ಪಕ್ಷವು ನ್ಯಾಯಯುತವಾಗಿ ನಡೆಸಿಕೊಂಡಿಲ್ಲ ಎಂದು  ಉಲ್ಲೇಖಿಸಿದ್ದಾರೆ.

ರುಸ್ತಮ್ ಸಿಂಗ್ ಅವರ ಪುತ್ರ ರಾಕೇಶ್ ಸಿಂಗ್ ಅವರು ಬಹುಜನ ಸಮಾಜ ಪಕ್ಷದಿಂದ ಮೊರೆನಾ ಕ್ಷೇತ್ರದಿಂದ ಸ್ಪರ್ದಿಸುತ್ತಿದ್ದಾರೆ. ರುಸ್ತಮ್ ಸಿಂಗ್ ಮೊರೆನಾದಲ್ಲಿ ತನ್ನ ಮಗನ ಪರ ಪ್ರಚಾರ ಮಾಡಲು ಆಡಳಿತಾರೂಢ ಬಿಜೆಪಿಯನ್ನು ತೊರೆಯುತ್ತಾರೆ ಎಂದು ಕೂಡ ಹೇಳಲಾಗಿತ್ತು.

ಗ್ವಾಲಿಯರ್-ಚಂಬಲ್ ಪ್ರದೇಶದ ಪ್ರಭಾವಿ ಗುರ್ಜರ್ ನಾಯಕರಾಗಿರುವ ರುಸ್ತಮ್ ಸಿಂಗ್ 2003ರಲ್ಲಿ ಐಪಿಎಸ್‌ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ಅವರು 2003-2008 ಮತ್ತು 2013-2018ರವೆರೆಗೆ ಎರಡು ಅವಧಿಗೆ ಶಾಸಕರಾಗಿದ್ದರು. ರುಸ್ತಮ್ ಸಿಂಗ್ ಅವರು 2003-2008 ಮತ್ತು 2015-2018ರ ಅವಧಿಯಲ್ಲಿ ಎರಡು ಅವಧಿಗೆ ಸಚಿವರಾಗಿದ್ದರು.

ಮಧ್ಯಪ್ರದೇಶದಲ್ಲಿ 230 ಸದಸ್ಯ ಬಲದ ರಾಜ್ಯ ವಿಧಾನಸಭೆಗೆ ನವೆಂಬರ್ 17 ರಂದು ಚುನಾವಣೆ ನಡೆಯಲಿದೆ. ಅದಕ್ಕೂ ಮೊದಲು ನಡೆದ ಈ ಬೆಳವಣಿಗೆ ಬಿಜೆಪಿಗೆ ರಾಜ್ಯದಲ್ಲಿ ದೊಡ್ಡ ಹೊಡೆತ ನೀಡಲಿದೆ ಎಂದು ಹೇಳಲಾಗಿದೆ.

ಇದಲ್ಲದೆ ಇಂದು ತಮಿಳುನಾಡು ಬಿಜೆಪಿಯ ಹಿರಿಯ ನಾಯಕಿ ಮತ್ತು ಖ್ಯಾತ ನಟಿ ಗೌತಮಿ ತಾಡಿಮಲ್ಲ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ನಟಿ ಗೌತಮಿ ತಾಡಿಮಲ್ಲ, ತಮಿಳುನಾಡು ಬಿಜೆಪಿಯ ಕೆಲ ನಾಯಕರು ವಂಚನೆಯ ಆರೋಪಿಗೆ ಸಹಕರಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನು ಓದಿ: ಬಿಜೆಪಿ ನಾಯಕರ ವಿರುದ್ಧ ಗಂಭೀರ ಆರೋಪ ಮಾಡಿ ಪಕ್ಷಕ್ಕೆ ರಾಜೀನಾಮೆ ನೀಡಿದ ನಟಿ ಗೌತಮಿ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪೂಂಚ್‌ನ ನ್ಯಾಷನಲ್ ಕಾನ್ಫರೆನ್ಸ್‌ ರ‍್ಯಾಲಿಯಲ್ಲಿ ಚಾಕುವಿನಿಂದ ದಾಳಿ; 3 ಮಂದಿಗೆ ಗಾಯ

0
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾನುವಾರ ನ್ಯಾಚನಲ್ ಕಾನ್ಫರೆನ್ಸ್‌ ಪಕ್ಷದ ರೋಡ್ ಶೋ ವೇಳೆ ಅಪರಿಚಿತ ದುಷ್ಕರ್ಮಿಗಳ ಚಾಕು ದಾಳಿಯಲ್ಲಿ ಮೂವರು ಗಾಯಗೊಂಡಿದ್ದಾರೆ. ಮೆಂಧರ್ ಪ್ರದೇಶದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ...